Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದ ಹಲವೆಡೆ ಮುಂದಿನ 6 ದಿನ ಭರ್ಜರಿ ಮಳೆ

ಬೆಂಗಳೂರು, : ಕರ್ನಾಟಕದಲ್ಲಿ ಹಿಂಗಾರು ಮಳೆ ಜೋರಾಗಿದೆ. ಕಳೆದೊಂದು ವಾರದಿಂದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆ ಭಾರೀ ಅವಾಂತರ ಸೃಷ್ಟಿಸಿದೆ. ಬೆಂಗಳೂರು ಮಾತ್ರವಲ್ಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲೂ ವರುಣನ ಆರ್ಭಟ ಜೋರಾಗಿದೆ. ಆದರೂ ಸಹ ರಾಜ್ಯಾದ್ಯಂತ ಮುಂದಿನ 6 ದಿನಗಳ ಕಾಲ ಎಡಬಿಡದೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





ಅ.23ರಂದು ಗುರುವಾರ ಬೆಂಗಳೂರು, ಉತ್ತರ ಕನ್ನಡ, ಉಡುಪಿ, ಧಾರವಾಡ, ಬೆಳಗಾವಿ, ಹಾವೇರಿ, ಮಂಡ್ಯ, ಮೈಸೂರು, ಹಾಸನ, ಕೊಡಗು, ರಾಮನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿಯ ಕನ್ನಡ ಜಿಲ್ಲೆಯ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅ.24ರಂದು ಕರಾವಳಿಯ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಹಾಗೂದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಹವಾಮಾನ ಅ.27ರವರೆಗೆ ಮುಂದುವರಿಯಲಿದೆ ಎಂದು ತಿಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ