Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಡುಪಿಯಲ್ಲಿ ಭಾರಿ ಮಳೆ: ಜಿಲ್ಲಾದ್ಯಂತ ಶಾಲಾ - ಕಾಲೇಜುಗಳಿಗೆ ರಜೆ


ಉಡುಪಿ: ಭಾರಿ ಮಳೆ ಹಿನ್ನೆಲೆಯಲ್ಲಿ ಇಂದು (ಜು.9)ರಂದು ಜಿಲ್ಲಾದ್ಯಂತ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ ಹಿನ್ನೆಲೆ ಜು.9 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಇಂಜಿನಿಯರಿಂಗ್ ಐಟಿಐಗಳಿಗೆ ರಜೆ ಇರುವುದಿಲ್ಲ.


 ಮತ್ತೊಂದೆಡೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ಜು.9 ರಂದು ರಜೆ ಘೋಷಿಸಿ‌ ಜಿಲ್ಲಾಧಿಕಾರಿ ಮುಲ್ಲೈ‌ಮುಗಿಲನ್ ಆದೇಶಿಸಿದ್ದಾರೆ.


ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಜು.9 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.




ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ, ದುರ್ಬಲ, ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ - ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು ಸೇರಿದಂತೆ ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.


Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ