Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ರಾಜ್ಯಾದ್ಯಂತ 4 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು, 

ಕರ್ನಾಟಕದಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನ ನೀಡಿದೆ. ಮುಂಗಾರು ಪೂರ್ವ ಮಾರುತಗಳ ತೀವ್ರತೆ ಹೆಚ್ಚಾಗಿರುವುದರಿಂದ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆ?

Advertisement

ಬೆಂಗಳೂರಿನಲ್ಲಿ ಇಂದು ಆರೆಂಜ್ ಹಾಗೂ ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ ಮಾತ್ರವಲ್ಲದೇ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್, ಇನ್ನುಳಿದ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಮೇ 22 ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಮೇ 23ರಂದು ಬೀದರ್ ಹಾಗೂ ಕಲಬುರಗಿ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಹಾಗೂ ಉತ್ತರ ಒಳನಾಡಿನ 19 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST