Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗ ರೋಗವನ್ನು ಹೋಗಲಾಡಿಸುವ ಪಾರಂಪರಿಕ ಚಿಕಿತ್ಸಾ ಪದ್ದತಿ : ಸಂಸದ ಕಡಾಡಿ

ಮೂಡಲಗಿ: ಯೋಗವು ಭಾರತ ದೇಶದಲ್ಲಿ ಮಾನವ ಶರೀರದ ರೋಗವನ್ನು ಹೋಗಲಾಡಿಸುವ ಪಾರಂಪರಿಕ ಚಿಕಿತ್ಸಾ ಪದ್ದತಿಯಾಗಿದ್ದು, ನಮ್ಮ ದೇಶ ಜಗತ್ತಿಗೆ ನೀಡಿದ ಬೆಲೆ ಕಟ್ಟಲಾಗದ ಒಂದು ಮಹಾನ ಕೊಡುಗೆ ಯೋಗಭ್ಯಾಸವಾಗಿದೆ ಎಂದು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಹೇಳಿದರು.
ಶನಿವಾರ ಜೂನ ೨೧ ರಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕೇಂದ್ರ ಆಯು? ಸಚಿವಾಲಯ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ನವದೆಹಲಿ, ತಾಲೂಕಾಡಳಿತ ಮೂಡಲಗಿ, ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ ಸಂಸ್ಥೆ ಕಲ್ಲೋಳಿ, ಮೂಡಲಗಿ ಶಿಕ್ಷಣ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಭಾರತ ಸರ್ಕಾರದ ಹಸಿರು ಯೋಗ ಪರಿಕಲ್ಪನೆಯೊಂದಿಗೆ ೧೧ನೇ ಅಂ?ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಸಿಗೆ ನೀರು ಉಣಿಸುವ ಮೂಲಕ ಸಂಸದ ಈರಣ್ಣ ಕಡಾಡಿ ಚಾಲನೆ ನೀಡಿ ಅವರು ಮಾತನಾಡಿದರು.
ಭಾರತ ದೇಶ ಜಗತ್ತಿಗೆ ಸೊನ್ನೆ ಮತ್ತು ಆಯುರ್ವೇದಗಳಂತಹ ಅತಿ ದೊಡ್ಡ ಕೊಡುಗೆಗಳ ಜೊತೆಗೆ ಯೋಗವನ್ನು ಕೂಡಾ ನೀಡಿದೆ. ೫೦೦೦ ವರ್ಷಗಳಿಂದ ಭಾರತೀಯ ನೆಲದ ಋಷಿಮುನಿಗಳಿಂದ ಪ್ರಾರಂಭವಾದ ಯೋಗಾಭ್ಯಾಸವನ್ನು ಪಾಶ್ಚಾತ್ಯ ಸಂಸ್ಕೃತಿಗೆ ಮಾರುಹೋದ ನಮ್ಮ ಜನರು ಮರತೇ ಬಿಟ್ಟಿದ್ದರು. ಆದರೆ ಕಳೆದ ೧೧ ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಪರಿಶ್ರಮ ಮತ್ತು ಕಾಳಜಿಯ ಪರಿಣಾಮವಾಗಿ ಇಡಿ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ ಹಿರಿಮೆ ಭಾರತಕ್ಕಿದೆ ಎಂದರು. ಇದೇ ಸಂದರ್ಭದಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಭಾರತ ಸರ್ಕಾರದ ಹಸಿರು ಯೋಗ ಪರಿಕಲ್ಪನೆ ಅಂಗವಾಗಿ ಸಸಿಗಳನ್ನು ನೆಡಲಾಯಿತು.
ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಸೋನವಾಲ್ಕರ, ನಿರ್ದೇಶಕರಾದ ವಿಜಯ ಸೋನವಾಲ್ಕರ, ಪ್ರಮುಖರಾದ ಶಿವಬಸು ಹಂದಿಗುಂದ, ನಿಂಗಪ್ಪ ಪಿರೋಜಿ, ಪ್ರಕಾಶ ಮಾದರ, ಕುಮಾರ ಗಿರಡ್ಡಿ, ಈಶ್ವರ ಮುರಗೋಡ, ಈರಪ್ಪ ಢವಳೇಶ್ವರ, ಸದಾಶಿವ ನೇರ್ಲಿ, ಶಿವಾನಂದ ಮಗದುಮ್ಮ, ಪ್ರಾಚಾರ್ಯರಾದ ಚಿತ್ರಗಾರ, ಮಹಾಂತೇಶ ಪಾಟೀಲ, ಮಲ್ಲಪ್ಪ ಕಂಕಣವಾಡಿ, ಸೇವಾ ಸಂಸ್ಥೆ ಅಧ್ಯಕ್ಷ ಪರಪ್ಪ ಗಿರೆಣ್ಣವರ, ಶ್ರೀಶೈಲ ಪೂಜೇರಿ, ಶ್ರೀಕಾಂತ ಕೌಜಲಗಿ, ಬಸವರಾಜ ಗಾಡವಿ ಸೇರಿದಂತೆ ಸ್ಥಳೀಯ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಆಯು? ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಫೋಟೋ ಫೈಲ್ ನೇಮ್ : ೨೧ ಮೂಡಲಗಿ ೧

 

 

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ