Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರ ಮದಕರಿಯ ಕಿಚ್ಚನ ಮಗಳು  ಜೆರುಶಾ  ಈಗ ನಾಯಕಿ


ಮಹೇಶ್ ಬಾಬು ಕನ್ನಡ ಚಿತ್ರರಂಗದ ಸ್ಟಾರ್ ನಿರ್ದೇಶಕ. ಆಕಾಶ್, ಅರಸು, ಪರಮೇಶ ಪಾನ್ ವಾಲ ಮುಂತಾದ ಸ್ಟಾರ್ ಸಿನಿಮಾಗಳನ್ನು ಮಾಡಿರುವ ಅವರ ಹಾಗೂ ರಕ್ಷಿತ್ ಹೊಸ ಸಿನಿಮಾ ಈಗಾಗಲೇ ಅನೌನ್ಸ್ ಆಗಿದೆ. ಇದೀಗ ಹೊಸ ಸಮಾಚಾರ ಏನೆಂದರೆ ಈ ಚಿತ್ರದ ಮೂಲಕ ಮತ್ತೊಬ್ಬ ಯುವ ನಟಿಯನ್ನು ಲಾಂಚ್ ಮಾಡುತ್ತಿದ್ದಾರೆ ಮಹೇಶ್ ಬಾಬು.


     ಮೆರವಣಿಗೆ ಸಿನಿಮಾ ಮೂಲಕ ಐಂದ್ರಿತಾ ರೇ , ಚಿರು ಸಿನಿಮಾ ಮೂಲಕ ಕೃತಿ ಕರಬಂದ, ಅಜಿತ್ ಚಿತ್ರದ ಮೂಲಕ ನಿಕ್ಕಿ ಗಲ್ರಾನಿ , ಕ್ರೇಜಿ ಬಾಯ್ ಮೂಲಕ ಆಶಿಕಾ ರಂಗನಾಥ್  ಮತ್ತು ಅಪರೂಪದ ಮೂಲಕ ಹೃತಿಕಾ ಶ್ರೀನಿವಾಸ್ ಹೀಗೆ ಹಲವಾರು ನಟಿಯರನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದ ನಿರ್ದೇಶಕ ಮಹೇಶ್ ಬಾಬು ಇದೀಗ ಹೊಸ ಮುಖ ಜೆರುಶಾರನ್ನು ನಾಯಕಿಯಾಗಿ ಲಾಂಚ್ ಮಾಡುತ್ತಿದ್ದಾರೆ.


     ಅಂದಹಾಗೇ ಜೆರುಶಾ ಕ್ಯಾಮೆರಾ ಹೊಸದೇನಲ್ಲ. ಈಗಾಗಲೇ ಸುದೀಪ್ ಅಭಿನಯದ ವೀರ ಮದಕರಿ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಜಾಹೀರಾತುಗಳು ಮತ್ತು ರಂಗಭೂಮಿ ಹಿನ್ನೆಲೆ ಹೊಂದಿರುವ ಜೆರುಶಾ ಇದೀಗ ಮಹೇಶ್ ಬಾಬು ನಿರ್ದೇಶನದ ಚಿತ್ರದ ಮೂಲಕ ಬೆಳ್ಳಿತೆರೆಗೆ ಪದಾರ್ಪಣೆ ಮಾಡಲು ಸಿದ್ಧರಾಗಿದ್ದಾರೆ.  ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಳ್ಳಲು ಹೆಸರಾಗಿರುವ ಸ್ಮೈಲ್ ಗುರು ರಕ್ಷಿತ್ ಗೆ ಜೋಡಿಯಾಗಿ ಜೆರುಶಾ ಮಿಂಚಲಿದ್ದಾರೆ. ಮಹೇಶ್ ಬಾಬು ಅವರು ಪ್ರಮುಖ ಪಾತ್ರವೊಂದಕ್ಕೆ ಮತ್ತೊಬ್ಬ ಪ್ರತಿಭಾವಂತ ನಟಿ ಆಯ್ಕೆಯಲ್ಲಿ ತೊಡಗಿದ್ದು, ಅದರ ವಿವರಗಳನ್ನು ಶೀಘ್ರದಲ್ಲೇ ಅನಾವರಣಗೊಳಿಸಲಾಗುವುದು.


     ಅಂದಹಾಗೇ ಮಹೇಶ್ ಬಾಬು ಹೊಸ ಕಥೆಗೆ ಸದ್ಯ ಶೀರ್ಷಿಕೆ ಫೈನಲ್ ಆಗಿಲ್ಲ.  ಯೂತ್ಫುಲ್ ಎಂಟರ್ ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚೇತನ್ ಮತ್ತು ಅನುರಾಗ್ ಬಂಡವಾಳ ಹೂಡಲಿದ್ದಾರೆ. ಚಿತ್ರಕ್ಕೆ ಅನೂಪ್ ಸೀಳಿನ್  ಸಂಗೀತ ಸಂಯೋಜನೆ ಮತ್ತು ಸತ್ಯ ಛಾಯಾಗ್ರಾಹಣವಿರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಮೇ ತಿಂಗಳಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ