Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಗಿನಹಾಳ ಗ್ರಾಮದಲ್ಲಿ  ಪಾಟೀಲರಿಂದ  ಹೈಟೆಕ್ ಬಸ್ ನಿಲ್ದಾಣ ಉದ್ಘಾಟನೆ

54ನೇ ಹುಟ್ಟುಹಬ್ಬದ ಅಂಗವಾಗಿ ರಕ್ತದಾನ ಶಿಬಿರ ಯಶಸ್ವಿ

​ನೇಸರಗಿ : ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ತಮ್ಮ ಹುಟ್ಟುಹಬ್ಬದ ಅಂಗವಾಗಿ ಕ್ಷೇತ್ರಾದ್ಯಂತ ವಿವಿಧ ಜನಾಭಿವೃದ್ಧಿ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಮಾದರಿಯಾಗಿ ಶುಭದಿನವನ್ನು ಆಚರಿಸಿಕೊಂಡಿದ್ದಾರೆ.

​ಕ್ಷೇತ್ರದ ವ್ಯಾಪ್ತಿಯ ನೇಗಿನಹಾಳ ಗ್ರಾಮದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಡಿ ಪುನರುಜ್ಜೀವನಗೊಳಿಸಲಾದ (ಜೀರ್ಣೋದ್ಧಾರ)  ಎರಡು  ನೂತನ ಹೈಟೆಕ್ ಬಸ್ ನಿಲ್ದಾಣವನ್ನು ಶಾಸಕರು ಸಾರ್ವಜನಿಕರ ಬಳಕೆಗೆ ಅಧಿಕೃತವಾಗಿ ಉದ್ಘಾಟಿಸಿದರು. ಹಳೆಯ ಹಾಗೂ ಸವೆದುಹೋಗಿದ್ದ ಬಸ್ ನಿಲ್ದಾಣವನ್ನು ಅತ್ಯಾಧುನಿಕ ಮಾದರಿಯಲ್ಲಿ ಜೀರ್ಣೋದ್ಧಾರಗೊಳಿಸಲಾಗಿದ್ದು, ಇದರಿಂದ ಗ್ರಾಮದ ಸಾರ್ವಜನಿಕರಿಗೆ ಹಾಗೂ ದಿನನಿತ್ಯ ಸಂಚರಿಸುವ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು. ಬೆಳಿಗ್ಗೆ ಶಾಸಕರು ಕಾರ್ಯಕ್ರಮಕ್ಕೂ ಮುನ್ನ ತಮ್ಮ 54ನೇ ಜನ್ಮದಿನದ ಅಂಗವಾಗಿ ನೇಗಿನಹಾಳ ಗ್ರಾಮದಲ್ಲಿರುವ ಪವಿತ್ರ ಶ್ರೀ ಮಡಿವಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕ ಬಾಬಾಸಾಹೇಬ ಪಾಟೀಲ ಅವರು ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದರು. ತದನಂತರ ಕಿತ್ತೂರು ಪಟ್ಟಣದ ಅನೇಕ ದೇವಸ್ಥಾನ, ಮಠಗಳಿಗೆ ಬೇಟಿ ಆಗಿ ಅಲ್ಲಿಂದ ಎಂ.ಕೆ. ಹುಬ್ಬಳ್ಳಿಯಲ್ಲಿ ಬೃಹತ್ ರಕ್ತದಾನ ಶಿಬಿರ ಜನ್ಮದಿನದ ಸವಿನೆನಪಿಗಾಗಿ ಎಂ.ಕೆ. ಹುಬ್ಬಳ್ಳಿಯ ಶ್ರೀ ಜಗದ್ಗುರು ವೀರಸೋಮೇಶ್ವರ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ಶಾಸಕರು ಚಾಲನೆ ನೀಡಿದರು.

news_1784718742_0_353.webp

ಸಾರ್ವಜನಿಕರ ಪಾಲ್ಗೊಳ್ಳುವಿಕೆ: ಶಾಸಕರ ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.

ಅನ್ನಸಂತರ್ಪಣೆ ಹಾಗೂ ಉಪಹಾರ: ರಕ್ತದಾನ ಶಿಬಿರದಲ್ಲಿ ಭಾಗವಹಿಸಿದ ದಾನಿಗಳಿಗೆ ಹಾಗೂ ಆಗಮಿಸಿದ್ದ ಸಾರ್ವಜನಿಕರಿಗೆ ಶಾಸಕರ ಅಭಿಮಾನಿಗಳ ನೇತೃತ್ವದಲ್ಲಿ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

​"ಕಿತ್ತೂರು ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಶಾಸಕರು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಶ್ಲಾಘನೀಯ. ಮುಂಬರುವ ದಿನಗಳಲ್ಲಿ ಇವರಿಂದ ಇನ್ನೂ ಹೆಚ್ಚಿನ ಪ್ರಗತಿ ಕೆಲಸಗಳು ನೆರವೇರಲಿ" ಎಂದು ಗ್ರಾಮಸ್ಥರು ಹಾಗೂ ಮುಖಂಡರು ಈ ಸಂದರ್ಭದಲ್ಲಿ ಶುಭ ಹಾರೈಸಿದರು

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST