LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಹೈಕೋರ್ಟ್ ಸಲಹೆ

ಬೆಂಗಳೂರು: ಪರವಾನಿಗೆ ಪಡೆಯದೆ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಹಾಗೂ ಸ್ಪೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧನವನ್ನು ಖಂಡಿಸಿ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪ ಸಂಬಂಧ, ತಮ್ಮನ್ನು ಪ್ರಕರಣದಿಂದ ಕೈ ಬಿಡಲು ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಹೈಕೋರ್ಟ್ ಸೂಚಿಸಿದೆ.


ಬೆಳ್ತಂಗಡಿ ಠಾಣಾ ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್‌ಐಆರ್​ಗಳನ್ನು ರದ್ದುಪಡಿಸುವಂತೆ ಕೋರಿ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠವು ಈ ಸೂಚನೆ ನೀಡಿ ಅರ್ಜಿಗಳನ್ನು ಇತ್ಯರ್ಥಪಡಿಸಿದೆ.


ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣ ಸಂಬಂಧ ಶಾಸಕ ಪೂಂಜಾ ವಿರುದ್ಧ ಈಗಾಗಲೇ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ಕೋರ್ಟ್) ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.


ಈ ಅಂಶ ದಾಖಲಿಸಿಕೊಂಡ ಪೀಠ ಈ ಸೂಚನೆ ನೀಡಿ ಆದೇಶಿಸಿದೆ. ದೋಷಾರೋಪ ಪಟ್ಟಿ ಸಲ್ಲಿಸಿರುವುದರಿಂದ ಆರೋಪಗಳನ್ನು ಕೈ ಬಿಡಲು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಅರ್ಜಿದಾರರು ಅರ್ಜಿ ಸಲ್ಲಿಸಲಿ. ನ್ಯಾಯಾಲಯವು ಎಂಟು ವಾರಗಳಲ್ಲಿ ಆ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಬಾರದು ಎಂದು ಸೂಚಿಸಿದ ನ್ಯಾಯಪೀಠ ಅರ್ಜಿಗಳನ್ನು ಇತ್ಯರ್ಥಪಡಿಸಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್