LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರನ್ಯಾ ವಿರುದ್ಧ ಆಧಾರರಹಿತ ಸುದ್ದಿ; ಮಾಧ್ಯಮ ಸಂಸ್ಥೆಗಳು, ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

ಬೆಂಗಳೂರು: ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಣೆ ಮಾಡಿರುವ ನಟಿ ಹರ್ಷವರ್ಧಿನಿ ರನ್ಯಾ ರಾವ್ ಮತ್ತು ಅವರ ತಂದೆ ಕೆ.ರಾಮಚಂದ್ರ ರಾವ್ ವಿರುದ್ಧ ಯಾವುದೇ ಸುಳ್ಳು, ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳನ್ನು ನಿರ್ಬಂಧಿಸಿರುವ ಸಂಬಂಧ ಸೂಕ್ತ ಆದೇಶ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಮಂಗಳವಾರ ನಿರ್ದೇಶನ ನೀಡಿತು.


ವಿಚಾರಣಾ ನ್ಯಾಯಾಲಯದ ಆದೇಶದ ನಡುವೆಯೂ ರನ್ಯಾ ರಾವ್ ಕುಟುಂಬಸ್ಥರ ವಿರುದ್ಧ ಆಧಾರರಹಿತ ಸುದ್ದಿಗಳನ್ನು ಪ್ರಸಾರ ಮಾಡುತ್ತಿರುವ ಮಾಧ್ಯಮಗಳ ಕ್ರಮವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.


ಮಾಧ್ಯಮ ಸಂಸ್ಥೆಗಳು, ಕೇಂದ್ರ ಸರ್ಕಾರಕ್ಕೆ ನೋಟಿಸ್: ಅಲ್ಲದೆ, ನ್ಯಾಯಾಲಯದ ಆದೇಶವಿದ್ದರೂ ಈ ರೀತಿಯ ಸುದ್ದಿ ಪ್ರಸಾರವನ್ನು ತಡೆಯುವುದಕ್ಕಾಗಿ ಅಗತ್ಯ ಮಾರ್ಗಸೂಚಿಗಳನ್ನು ಜಾರಿ ಮಾಡುವ ಅಗತ್ಯವಿದೆ ಎಂದು ತಿಳಿಸಿರುವ ನ್ಯಾಯಪೀಠ, ಪ್ರಕರಣ ಸಂಬಂಧ ಎಲ್ಲ ಮಾಧ್ಯಮ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್