Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಾಲಕೃಷ್ಣನ್ ಅಭಿಯೋಜಕರಾಗಿ ನೇಮಕ: ಹೈಕೋರ್ಟ್ ತಡೆಯಾಜ್ಞೆ

ಬೆಂಗಳೂರು, (ಏಪ್ರಿಲ್ 08): ಮುಸ್ಲಿಂ ಮಹಿಳೆಯರ ‘ಶಾಶ್ವತ ಗಂಡ’ ಎನ್ನುವ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಬಾಲಕೃಷ್ಣನ್ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಮುಸ್ಲಿಂ ಮಹಿಳೆಯರ ಬಗ್ಗೆ ಹೇಳಿಕೆ ಸಂಬಂಧ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ಅವರನ್ನು ರಾಜ್ಯ ಸರ್ಕಾರ ನೇಮಿಸಿತ್ತು. ಈ ನೇಮಕ ಪ್ರಶ್ನಿಸಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಏಪ್ರಿಲ್ 08 ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಅಭಿಯೋಜಕರಾಗಿ ಎಸ್.ಬಾಲಕೃಷ್ಣನ್ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಡಿಸೆಂಬರ್ 24ರಂದು ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ವಿವಾದಾತ್ಮಕ ಹೇಳಿಕೆ ನೀಡಿದ್ದರು. ‘ಮುಸ್ಲಿಂ ಮಹಿಳೆಯರಿಗೆ ದಿನಕ್ಕೊಬ್ಬ ಗಂಡಂದಿರು. ಅವರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದೇ ಮೋದಿ ಸರ್ಕಾರ’ ಎಂದು ಭಟ್ ಹೇಳಿದ್ದರು.

ಇನ್ನು ಈ ಬಗ್ಗೆ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಝೀರ್ ಚಿಕ್ಕನೇರಳೆ ದೂರು ನೀಡಿದ್ದರು. ದೂರಿನ ಮೇರೆಗೆ ಶ್ರೀರಂಗಪಟ್ಟಣ ಪೊಲೀಸ್‌ ಠಾಣೆಯಲ್ಲಿ ಭಾಕರ್ ಭಟ್ ವಿರುದ್ಧ IPC ಸೆಕ್ಷನ್ 354, 294, 509, 506, 153A, 295 295A, 298ರ ಅಡಿ ಎಫ್‌ಐಆರ್ ದಾಖಲಲಾಗಿದೆ. ಇದೀಗ ಈ ಎಫ್​ಐಆರ್ ರದ್ದು ಕೋರಿ ಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ