LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ಹಿಪ್ಪರಗಿ ಕಾರ್‌ ಸ್ಪೋಟ್‌ ಪ್ರಕರಣ ತನಿಖೆ ಪೂರ್ಣ - ಎಸ್‌ಪಿ ಸಿದ್ಧಾರ್ಥ ಗೊಯಲ್‌

 

ಜಮಖಂಡಿ ;ತಾಲುಕಿನ ಹಿಪ್ಪರಗಿ ಗ್ರಾಮದಲ್ಲಿ ಕಳೆದ ತಿಂಗಳು ಜುಲೈ 25ರ ರಾತ್ರಿ 10.45ರ ಸುಮಾರಿಗೆ ಸಂಭವಿಸಿದ್ದ ಕಾರ್‌ ಸ್ಪೋಟ್‌ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಬಾಗಲಕೊಟೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ಧಾರ್ಥ ಗೊಯಲ್‌ ತಿಳಿಸಿದ್ದಾರೆ, ಮಂಗಳವಾರ ನಗರದ ಗ್ರಾಮೀಣಠಾಣೆ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣಕಾಸು, ಭೂಮಿ ವಿವಾದಕ್ಕೆ ಸಂಬಂಧಿಸಿ ದಂತೆ ಬಾರ್‌ ಮಾಲಿಕ ಸಂತ್ರಸ್ತ ಹಣಮಂತ ಅಥಣಿ ಎಂಬುವರಿಗೆ ಬೆದರಿಕೆ ಹಾಕಲು ಹಾಗೂ ಕೊಲೆಮಾಡುವ ದುರುದ್ದೇಶ ದಿಂದ ಕಾರ್‌ನ್ನು ಸ್ಪೋಟಿಸಲಾಗಿತ್ತು. ಪ್ರಕರಣದ ರೂವಾರಿಗಳು ಆರೋಪಿತರಾದ ಶಿವಾನಂದ ಜಲ್ಲಿ, ರೇವಣಪ್ಪ ಜಲ್ಲಿ, ಮಹದೇವ ಸಂಗಾಪೂರ, ಮಲ್ಲಿಕಾರ್ಜುನ ಭದ್ರಪನವರ, ಎಂಬುರನ್ನು ಬಂಧಿಸಲಾಗಿದ. ಸ್ಪೋಟಕ ವಸ್ತು ಪೂರೈಸಿದ ಆರೋಪಿ ಗಜಾನನ ಸಂಗಾಪುರ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿಸಿದರು.

ಪೊಲೀಸ್‌ ತಂಡ; ಕಾರ್‌ ಸ್ಪೋಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಪಿ ಜಗದೀಶ, ಡಿವೈಎಸ್‌ಪಿ ಸೈಯದ್‌ ರೋಷನ್‌ ಜಮೀರ, ಸಿಪಿಐ ಮಲ್ಲಪ್ಪ ಮಡ್ಡಿ ಅವರ ನೇತೃತ್ವದಲ್ಲಿ ಪಿಎಸ್‌ಐಗಳಾದ ಗಂಗಾಧರ ಪೂಜೇರಿ, ಶಿವಾನಂದ ಶಿರಗಣ್ಣವರ, ನಿತೀನ ಕುಮಾರ, ಅಪ್ಪಣ್ಣ ಐಗಳಿ ಹಾಗೂ ಸೊಕೊ ಶ್ರೀಧರ ಮಗದುಮ ನೇತೃತ್ವದ 4 ತಂಡಗಳನ್ನು ರಚಿಸಿ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿ. ಆರೋಪಿತರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ, ನಾಲ್ಕು ತಂಡದ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದಕ್ಕೆ ಪ್ರಶಂಸಾ ಪತ್ರಗಳನ್ನು ವಿತರಿಸಲಾಗಿದೆ ಎಂದು ಹೇಳಿದರು.

ತನಿಖೆ ಪ್ರಗತಿ : ಪ್ರಕರಣದಲ್ಲಿ ತಲೆ ಮರೆಸಿ ಕೊಂಡಿರುವ ಹಾಗೂ ಸಹಕಾರ ನೀಡಿದವರ ಬಗ್ಗೆ ಮಾಹಿತಿ ಕಲೆ ಹಾಕಲಾಗಿದೆ. ಅವರ ಪಾತ್ರಕ್ಕೆ ಅನುಗುಣವಾಗಿ ಪ್ರತಿಯೊಬ್ಬರನ್ನು ಪತ್ತೆ ಹಚ್ಚುವ ಕೆಲಸ ಪ್ರಗತಿಯಲ್ಲಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷಾಧಾರ ಗಳಿಂದ ದೃಢ ಪಟ್ಟಿರುವ ಪ್ರತಿಯೊಬ್ಬ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವದು ಎಂದು ಹೇಳಿದರು. ಎಎಸ್‌ಪಿ ಜಗದೀಶ, ಡಿವೈಎಸ್‌ಪಿ ಸೈಯದ್‌ ರೋಷನ್‌ ಜಮೀರ, ಸಿಪಿಐ ಮಲ್ಲಪ್ಪ ಮಡ್ಡಿ ಪಿಎಸ್‌ಐಗಳಾದ ಗಂಗಾಧರ ಪೂಜೇರಿ, ಶಿವಾನಂದ ಶಿರಗಣ್ಣವರ, ನಿತೀನ ಕುಮಾರ, ಅಪ್ಪಣ್ಣ ಐಗಳಿ ಹಾಗೂ ಸೊಕೊ ಶ್ರೀಧರ ಮಗದುಮ ಹಾಗೂ ಸಿಬ್ಬಂದಿ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್