LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಇಬ್ಬರು ಎಲ್‌ಇಟಿ ಉಗ್ರರ ಮನೆಗಳು ನೆಲಸಮ


ಶ್ರೀನಗರ (ಜಮ್ಮು ಕಾಶ್ಮೀರ): ಪಹಲ್ಗಾಮ್ ದಾಳಿಯಲ್ಲಿ ಸ್ಥಳೀಯ ಕುದುರೆ ಸವಾರ ಸೇರಿದಂತೆ 26 ಪ್ರವಾಸಿಗರನ್ನು ಉಗ್ರರು ಹತ್ಯೆ ಮಾಡಿದ ಬಳಿಕ ಮಹತ್ವದ ಬೆಳವಣಿಗೆಯಲ್ಲಿ, ದಕ್ಷಿಣ ಕಾಶ್ಮೀರದ ಟ್ರಾಲ್ ಮತ್ತು ಬಿಜ್‌ಬೆರಾ ಪ್ರದೇಶದಲ್ಲಿನ ಇಬ್ಬರು ಲಷ್ಕರ್-ಎ-ತೋಯ್ಬಾ ಭಯೋತ್ಪಾದಕರ ಮನೆಗಳನ್ನು ಅಧಿಕಾರಿಗಳು ಶುಕ್ರವಾರ ನೆಲಸಮ ಮಾಡಿದ್ದಾರೆ.


ಬೈಸರನ್ ಪಹಲ್ಗಾಮ್ ದಾಳಿಯಲ್ಲಿ ಪ್ರಮುಖ ಪಾತ್ರವಿರುವ ಆರೋಪದ ಹಿನ್ನೆಲೆಯಲ್ಲಿ ಪುಲ್ವಾಮಾ ಜಿಲ್ಲೆಯ ಟ್ರಾಲ್‌ನಲ್ಲಿರುವ ಆಸಿಫ್ ಶೇಖ್ ಮತ್ತು ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆರಾದಲ್ಲಿರುವ ಆದಿಲ್ ಥೋಕರ್ ಅವರ ಮನೆಗಳನ್ನು ಸ್ಫೋಟಿಸಿ, ನೆಲಸಮ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.


ಮಂಗಳವಾರ ಪಹಲ್ಗಾಮ್‌ನ ಬೈಸರನ್​ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಪಹಲ್ಗಾಮ್‌ನ ಸ್ಥಳೀಯ, ನೇಪಾಳದ ಒಬ್ಬರು ಮತ್ತು ದೇಶದ ವಿವಿಧ ರಾಜ್ಯಗಳ ಪ್ರವಾಸಿಗರು ಸೇರಿದಂತೆ 26 ಜನರು ಪ್ರಾಣ ಕಳೆದುಕೊಂಡಿದ್ದರು.







ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಬ್ಲಾಕ್‌ನಲ್ಲಿರುವ ಗುರಿ ಗ್ರಾಮದ ನಿವಾಸಿ ಆದಿಲ್ ಗುರಿ ಎಂಬಾತನೂ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಶಂಕೆ ಇದೆ. ಆತನನ್ನು ಮೋಸ್ಟ್ ವಾಂಟೆಡ್ ಎಂದು ಗುರುತಿಸಲಾಗಿದ್ದು, ಆತನ ಬಗ್ಗೆ ನಿರ್ದಿಷ್ಟ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಅನಂತನಾಗ್ ಪೊಲೀಸರು ಘೋಷಿಸಿದ್ದಾರೆ. ಈ ದಾಳಿ ಹಿನ್ನೆಲೆಯಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಸಹ ಮೋಸ್ಟ್ ವಾಂಟೆಡ್ ಎಂದು ಘೋಷಿಸಲಾಗಿದೆ.





ಆದಿಲ್ 2018ರಲ್ಲಿ ಕಾನೂನುಬದ್ಧವಾಗಿ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸಿದ್ದ. ಅಲ್ಲಿಂದ ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರಕ್ಕೆ ಮರಳುವ ಮುನ್ನ ಭಯೋತ್ಪಾದನಾ ತರಬೇತಿ ಪಡೆದಿದ್ದಾನೆ ಎಂದು ವರದಿಯಾಗಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್