LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಹನಿಟ್ರ್ಯಾಪ್‌ ಪ್ರಕರಣ

ನವದೆಹಲಿ, ಮಾರ್ಚ್​ 24:   ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪಿಂಗ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸುಪ್ರೀಂಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ ವಿಚಾರಣೆಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕೆಂದು ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ಎದುರು ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್​ ಒಪ್ಪಿದೆ. ಹಾಗೆಯೇ ಈ ಪ್ರಕರಣದಲ್ಲಿ ನ್ಯಾಯಮೂರ್ತಿ ಹೆಸರೂ ಕೂಡ ಇರುವುದನ್ನು ಅರ್ಜಿದಾರರು ವಿಚಾರಣೆ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ.



ಕರ್ನಾಟಕದಲ್ಲಿ ನಡೆದ ಹನಿ-ಟ್ರ್ಯಾಪ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಚಿವರು ಮತ್ತು ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ 48 ಜನರನ್ನು ಸಿಲುಕಿಸಿರುವ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠದೆದುರು ತರಲಾಗಿದೆ. ವಿಷಯವನ್ನು ಇಂದು ಅಥವಾ ನಾಳೆ ಕೈಗೆತ್ತಿಕೊಳ್ಳಲಾಗುವುದು ಎಂದು ಸಿಜೆಐ ತಿಳಿಸಿದ್ದಾರೆ.




ಕರ್ನಾಟಕ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್​ನಲ್ಲಿ ತಮ್ಮನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಬಹಿರಂಗಪಡಿಸಿದ ನಂತರ ವಿವಾದ ಭುಗಿಲೆದ್ದಿತ್ತು. ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಸೇರಿದಂತೆ ರಾಜಕೀಯ ಪಕ್ಷಗಳಲ್ಲಿ 48 ನಾಯಕರು ಇದೇ ರೀತಿಯ ಟ್ರ್ಯಾಪ್​ಗೆ ಬಲಿಯಾಗಿದ್ದಾರೆ ಎಂದು ಅವರು ಆರೋಪಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್