Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಹ್ವಾನ ಪತ್ರಿಕೆ ಉರ್ದು ಭಾಷೆಯಲ್ಲಿ ಮುದ್ರಿಸಿರುವುದನ್ನು ಖಂಡಿಸಿ ಕರವೇಯಿಂದ ಬೃಹತ್ ಪ್ರತಿಭಟನೆ





ಬಳ್ಳಾರಿ, ಮಾ.03.: ಆರೋಗ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿ ಉರ್ದು ಭಾಷೆಯನ್ನು ಬಳಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ವತಿಯಿಂದ ಅಖಂಡ ಬಳ್ಳಾರಿ ಜಿಲ್ಲೆಯ ಜಿಲ್ಲಾಧ್ಯಕ್ಷ ರಾಜಶೇಖರ್ (ಕುರಟ್ಟಿ ರಾಜಣ್ಣ)ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನಾಕಾರರು ನಗರದ ರಾಯಲ್ ವೃತ್ತದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಮುಖ್ಯಮಂತ್ರಿಗಳಿಗೆ ಕಳುಹಿಸಲಾದ ಮನವಿ ಪತ್ರದಲ್ಲಿ, ಕರ್ನಾಟಕದಲ್ಲಿ ಆಡಳಿತ ಭಾಷೆ ಕನ್ನಡವಾಗಿದ್ದು, ಆರೋಗ್ಯ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಸಂಪೂರ್ಣವಾಗಿ ಉರ್ದು ಭಾಷೆಯಲ್ಲಿ ಮುದ್ರಿಸಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆರೋಪಿಸಲಾಗಿದೆ.

ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾಧ್ಯಕ್ಷ ರಾಜಶೇಖರ್ (ರಾಜಣ್ಣ) ಮಾತನಾಡಿ, ರಾಜ್ಯದಲ್ಲಿ ಕನ್ನಡವನ್ನು ಆಡಳಿತ ಭಾಷೆಯಾಗಿ ಕಡ್ಡಾಯಗೊಳಿಸಲು ಸರ್ಕಾರ ಕ್ರಮ ಕೈಗೊಂಡಿರುವುದು ಶ್ಲಾಘನೀಯವಾದರೂ, ಕೆಲ ಅಧಿಕಾರಿಗಳು ಕನ್ನಡವನ್ನು ನಿರ್ಲಕ್ಷ್ಯ ಮಾಡುತ್ತಿರುವುದು ಖಂಡನೀಯ ಎಂದರು. ಕನ್ನಡ ನಾಡು-ನುಡಿಯ ಗೌರವ ಕಾಪಾಡುವ ನಿಟ್ಟಿನಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವ ದಿನೇಶ್ ಗುಂಡೂರಾವ್ ಅವರ ನಡೆ ಕುರಿತು ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಈ ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಗುರುರಾಜ್, ಕಟಿಗಿ ಸೂರಿ, ಸೂರ್ಯನಾರಾಯಣ, ಮೃತ್ಯುಂಜಯ, ಲಕ್ಷ್ಮಣ, ನೂರ್ ಭಾಷಾ, ರವಿ, ಡೇವಿಡ್, ಕುಡುತೀನಿ ಶಿವು, ಶ್ರೀಶೈಲ, ಮಲ್ಲಯ್ಯ, ಮಹೇಶ್, ರಾಮು, ದ್ವಾರಕೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.




Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ