Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಿಳೆಯರ ಸ್ವಾವಲಂಬನೆಗೆ ಹುರಕಡ್ಲಿ ಫೌಂಡೇಶನ್ ಮಹತ್ವದ ಹೆಜ್ಜೆ.

ಕಲಿತ ವಿದ್ಯೆಯನ್ನು ಸಮಾಜಕ್ಕೆ ಹಂಚಿದಾಗ ಬದುಕು ಸಾರ್ಥಕ: ಮಾತೋಶ್ರೀ ವಿದ್ಯಾವತಿ

ಮಹಾಲಿಂಗಪುರ, ಜು.೧೧: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢರಾಗಲು ಕೌಶಲ್ಯಾಭಿವೃದ್ಧಿ ಅತ್ಯಗತ್ಯವಾಗಿದ್ದು, ಕಲಿತ ವಿದ್ಯೆಯನ್ನು ಮತ್ತೊಬ್ಬರಿಗೆ ಧಾರೆ ಎರೆದಾಗ ಮಾತ್ರ ಬದುಕಿಗೆ ನಿಜವಾದ ಅರ್ಥ ದೊರೆಯುತ್ತದೆ ಎಂದು ಮಾತೋಶ್ರೀ ವಿದ್ಯಾವತಿಯವರು ಹೇಳಿದರು.
ನಗರದ ಬಸವೇಶ್ವರ ಸಮುದಾಯ ಭವನದಲ್ಲಿ ಹುರಕಡ್ಲಿ ಫೌಂಡೇಶನ್ ವತಿಯಿಂದ ಆಯೋಜಿಸಲಾದ ಮಹಿಳೆಯರ ಸ್ವ-ಉದ್ಯೋಗ ತರಬೇತಿ ಶಿಬಿರ ಹಾಗೂ ಸಾಂಪ್ರದಾಯಿಕ ಸೀಮಂತ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಸಮಾಜದಲ್ಲಿ ಮಹಿಳೆಯರು ಕೇವಲ ಕುಟುಂಬ ನಿರ್ವಹಣೆಗೆ ಸೀಮಿತವಾಗದೆ ಸ್ವಂತ ಆದಾಯ ಗಳಿಸಿ ಆತ್ಮಗೌರವದಿಂದ ಬದುಕುವಂತಾಗಬೇಕು. ಅದಕ್ಕಾಗಿ ಇಂತಹ ತರಬೇತಿ ಶಿಬಿರಗಳು ಅತ್ಯಂತ ಅಗತ್ಯವಾಗಿದ್ದು, ಸಾವಿರಾರು ಮಹಿಳೆಯರ ಬದುಕಿಗೆ ಹೊಸ ದಿಕ್ಕು ತೋರಿಸುವ ಶಕ್ತಿಯನ್ನು ಹೊಂದಿವೆ ಎಂದು ಅಭಿಪ್ರಾಯಪಟ್ಟರು.
ಪುರು? ಪ್ರಧಾನ ಸಮಾಜದಲ್ಲಿ ಮಹಿಳೆಯರು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅಂತಹ ಸಂದರ್ಭದಲ್ಲಿ ಹೊಲಿಗೆ, ಆರಿ ಕಲೆ, ಕುಬಸದ ಕಲೆ ಸೇರಿದಂತೆ ವಿವಿಧ ಕೌಶಲ್ಯಗಳನ್ನು ಕಲಿಸುವ ಮೂಲಕ ಮಹಿಳೆಯರಿಗೆ ಸ್ವ-ಉದ್ಯೋಗದ ದಾರಿ ತೋರಿಸುತ್ತಿರುವ ಹುರಕಡ್ಲಿ ಫೌಂಡೇಶನ್ ಕಾರ್ಯ ನಿಜಕ್ಕೂ ಮಾದರಿಯಾಗಿದೆ. ಸಂಸ್ಥೆಯ ಪ್ರಮುಖರಾದ ಚನಬಸು ಹುರಕಡ್ಲಿ ಹಾಗೂ ಸವಿತಾ ಹುರಕಡ್ಲಿ ಅವರು ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಸಮಾಜಮುಖಿ ಸೇವೆಯಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ಹೇಳಿದರು.
ದೇಶದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ತರಬೇತಿ ಶಿಬಿರದ ಜೊತೆಗೆ ಗರ್ಭಿಣಿಯರಿಗೆ ಸಾಂಪ್ರದಾಯಿಕ ಸೀಮಂತ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಭಾರತೀಯ ಸಂಸ್ಕೃತಿಯ ಮಹತ್ವವನ್ನು ಸಾರುವ ಕಾರ್ಯವಾಗಿದೆ. ನಮ್ಮ ಬದುಕಿನಲ್ಲಿ ಕೇವಲ ಕರ್ಮಪುತ್ರರಾಗದೆ ಧರ್ಮಪುತ್ರರಾಗಿ ಸಮಾಜಕ್ಕೆ ಉಪಕಾರ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಪರೋಪಕಾರಕ್ಕಿಂತ ದೊಡ್ಡ ಧರ್ಮ ಮತ್ತೊಂದಿಲ್ಲ ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹುರಕಡ್ಲಿ ಫೌಂಡೇಶನ್ ಪ್ರಮುಖರಾದ ಸವಿತಾ ಹುರಕಡ್ಲಿ ಮಾತನಾಡಿ, ಮಹಿಳೆಯರು ಕುಟುಂಬದ ಶಕ್ತಿಯಾಗಿದ್ದು, ಅವರ ಆರ್ಥಿಕ ಸಬಲೀಕರಣವೇ ಕುಟುಂಬ ಮತ್ತು ಸಮಾಜದ ಅಭಿವೃದ್ಧಿಗೆ ಮೂಲವಾಗಿದೆ. ಪ್ರತಿಯೊಬ್ಬ ಮಹಿಳೆಯೂ ತನ್ನ ಕಾಲಿನ ಮೇಲೆ ನಿಂತು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು ಎಂಬ ಧ್ಯೇಯದಿಂದ ಫೌಂಡೇಶನ್ ನಿರಂತರವಾಗಿ ಉಚಿತ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು.
ಈ ಶಿಬಿರದಲ್ಲಿ ೧೫೦ಕ್ಕೂ ಹೆಚ್ಚು ಮಹಿಳೆಯರು ಹೊಲಿಗೆ, ಆರಿ ಕಲೆ ಹಾಗೂ ಕುಬಸದ ಕಲೆಗಳಲ್ಲಿ ತರಬೇತಿ ಪಡೆಯುತ್ತಿದ್ದು, ತರಬೇತಿಯ ನಂತರ ಸ್ವಂತ ಉದ್ಯೋಗ ಆರಂಭಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗುವ ವಿಶ್ವಾಸ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಹಲವು ಗರ್ಭಿಣಿಯರಿಗೆ ಸಂಪ್ರದಾಯಬದ್ಧವಾಗಿ ಸೀಮಂತ ಕಾರ್ಯಕ್ರಮ ನಡೆಸಿ ಆಶೀರ್ವದಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಶೈಲಪ್ಪಣ್ಣ ಉಳ್ಳೇಗಡ್ಡಿ, ಶ್ರೀಶೈಲಪ್ಪ ಹಿಪ್ಪರಗಿ, ಭೀಮಪ್ಪ ಪೂಜಾರಿ, ಮಹಾಲಿಂಗಪ್ಪ ಕಂಠಿ, ಪ್ರಕಾಶ ಬಾಡನವರ, ಸಂಜು ಬಾರುಕೋಲ, ಮಲ್ಲಪ್ಪ ತೇಲಿ, ಶ್ರೀಶೈಲ ಬಳಗಾರ, ಮಹಾದೇವಪ್ಪ ಟಿರಕಿ, ಮಲ್ಲಪ್ಪ ತೇರದಾಳ, ಸಹನಾ ಶಿರೋಳ, ಪಾತ್ರೋಟ, ಮಹೇಂದ್ರಕರ ಮೇಡಂ ಸೇರಿದಂತೆ ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು.
ಫೌಂಡೇಶನ್ ಅಧ್ಯಕ್ಷ ಚನಬಸು ಹುರಕಡ್ಲಿ ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಪ್ರೊ. ರವಿ ಕಲ್ಲೋಳ್ಳಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ವಂದಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಖ್ಯಾತ ಕಲಾವಿದ ಚನ್ನಪ್ಪ ಹುನ್ನೂರ ಅವರು ಕನ್ನಡದ ಹಳೆಯ ಚಲನಚಿತ್ರ ಗೀತೆಗಳನ್ನು ಸುಮಧುರವಾಗಿ ಹಾಡಿ ಸಭಿಕರನ್ನು ರಂಜಿಸಿದರು. ಮಹಿಳೆಯರ ಸ್ವಾವಲಂಬನೆ, ಭಾರತೀಯ ಸಂಸ್ಕೃತಿ ಹಾಗೂ ಸಾಮಾಜಿಕ ಸೇವೆಯ ಸಂದೇಶ ಸಾರಿದ ಈ ಕಾರ್ಯಕ್ರಮ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆಗೆ ಪಾತ್ರವಾಯಿತು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST