Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಎಂದಿಗೂ ಪಂಚಮಸಾಲಿ ಸಮುದಾಯದ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌




ಬೆಳಗಾವಿ : ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ನಾನು ಎಂದಿಗೂ ಸಮುದಾಯದ ಪರ ನಿಲ್ಲುತ್ತೇನೆ. ಅಧಿಕಾರಕ್ಕಿಂತ ಸಮಾಜದ ಹಿತಾಸಕ್ತಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.


ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸುವರ್ಣ ಸೌಧದ ಮುಂಭಾಗ ಮಂಗಳವಾರ ನಡೆದ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ವಕೀಲರ ಪ್ರತಿಭಟನೆಯಲ್ಲಿ ಪಾಲ್ಗೊಂಡ  ಸಚಿವರು, ಸಮಾಜಕ್ಕೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂದರು.


ಸಮಾಜ ಇದ್ದರೆ ನಾವೆಲ್ಲ ಇರುತ್ತೇವೆ. ಮುಖಂಡರಿಗೆ ಎಲ್ಲ ವಿಚಾರ ಹೇಳಿದ್ದೇನೆ. ಸರಕಾರ ಯಾವುದೇ ಇರಲಿ, ಪಂಚಮಸಾಲಿ ಸಮಾಜದ ಬಹಳಷ್ಟು ಜನ ಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಸಮಾಜಕ್ಕೆ ನ್ಯಾಯ ಸಿಗಬೇಕು. ಹಿಂದೆಯೂ ಇದೇ ದಾಟಿಯಲ್ಲಿ ಮಾತನಾಡಿದ್ದೇನೆ. ಇಂದೂ ಅದೇ ದಾಟಿಯಲ್ಲಿ ಮಾತನಾಡುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.


ಸಮಾಜದ ಮಗಳಾಗಿ ಹೇಳುವೆ, ನನ್ನ ಸಮಾಜಕ್ಕೆ ನ್ಯಾಯಸಿಗಬೇಕು. ಮೀಸಲಾತಿ ವಿಚಾರವಾಗಿ ಪದೇ ಪದೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಸಮಾಜ ಹೇಳುವ ದಿಕ್ಕಿನಲ್ಲೇ ನಾನೂ ಸಾಗುತ್ತೇನೆ. 2 ಎ ಮೀಸಲಾತಿ ಸಿಗಲಿ, ಖಂಡಿತ ಹೋರಾಟಕ್ಕೆ ಜಯ ಸಿಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.


ಈ ವೇಳೆ ಶಾಸಕರಾದ ಬಾಬಾ ಸಾಹೇಬ್ ಪಾಟೀಲ್, ಮಾಜಿ ಸಚಿವರಾದ ಎ.ಬಿ.ಪಾಟೀಲ್‌, ಶಶಿಕಾಂತ್‌ ನಾಯ್ಕ್‌, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್‌ ಹೆಬ್ಬಾಳಕರ್, ಡಾ.ಮಹಾಂತೇಶ್ ಕಡಾಡಿ,  ಮಾಜಿ ಶಾಸಕ ವಿ.ಆಯ್‌.ಪಾಟೀಲ್‌, ಮಹಾಂತೇಶ್ ಮತ್ತಿಕೊಪ್ಪ ಉಪಸ್ಥಿತರಿದ್ದರು.


ಸ್ಥಳಕ್ಕೆ ಸಚಿವರ ನಿಯೋಗ ಭೇಟಿ: ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್‌, ಡಾ.ಎಂ.ಸಿ.ಸುಧಾಕರ್‌ ಒಳಗೊಂಡ ಸಚಿವರ ನಿಯೋಗ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಪ್ರತಿಭಟನಾಕಾರರ ಮನವಿ ಆಲಿಸಿದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ