Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಸಿಎಂ ಆಗಿ ಮುಂದುವರಿಯಲು ನನಗೆ ತೃಪ್ತಿ : ಡಿ.ಕೆ.ಶಿ.

ನವದೆಹಲಿ ಡಿ., ೨೪- ಸಿಎಂ ಬದಲಾವಣೆ ವದಂತಿಯನ್ನು ತಳ್ಳಿ ಹಾಕಿರುವ ಡಿ.ಕೆ.ಶಿವಕುಮಾರ, ಮುಖ್ಯಮಂತ್ರಿ ಕುರ್ಚಿಗಾಗಿ ವಿವಾದವೇನೂ ಇಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ತೃಪ್ತಿ ಇದೆ ಡಿ.ಕೆ.ಶಿವಕುಮಾರ ಮಾರ್ಮಿಕವಾಗಿ ನುಡಿಯುವ ಮೂಲಕ  ಅಚ್ಚರಿ ಮೂಡಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್​ ಅವರು ಅಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ್ದು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಊಹಾಪೋಹಗಳು ಇಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಹೈಕಮಾಂಡ್ ಜೊತೆ ಸಭೆಯ ಬಗ್ಗೆಯೂ ಹೇಳಿಕೆ ನೀಡಿರುವ ಅವರು, ತಾವು ಯಾರನ್ನೂ ಭೇಟಿಯಾಗುತ್ತಿಲ್ಲ ಎಂದು ತಿಳಿಸಿದ್ದಾರೆ. 1990ರ ದಶಕದಿಂದಲೂ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ನೆನಪಿಸಿಕೊಂಡ ಅವರು ಪಕ್ಷದ ಕಾರ್ಯಕರ್ತನಾಗಿರಲು ಇಷ್ಟ ಎಂದು ಹೇಳುವ ಮೂಲಕ ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆ ಅಥವಾ ಸಂಭಾವ್ಯ ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತೆರೆ ಎಳೆದರು.

ಎರಡೂವರೆ ವರ್ಷದ ಫಾರ್ಮುಲಾ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು, "ಇದನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸಲಾಗದು" ಎಂದು ಡಿಕೆಶಿ ಹೇಳಿದ್ದಾರೆ. ಪೂರ್ಣ ಐದು ವರ್ಷ ನನಗೆ ಉಪಮುಖ್ಯಮಂತ್ರಿಯಾಗಿ ಮುಂದುವರೆಯಲು ಸಂತೋಷವಿದೆ ಎಂದು ಪುನರುಚ್ಚರಿಸಿದ್ದಾರೆ. ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಎಲ್ಲರೂ ಒಗ್ಗೂಡಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಈ ಮಧ್ಯೆ ಪ್ರಿಯಾಂಕಾ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂಬ ಊಹಾಪೋಹ ಕುರಿತ ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆ ಶಿವಕುಮಾರ್, "ಪ್ರಿಯಾಂಕಾ ಗಾಂಧಿ ಅವರ ಏಕೈಕ ಧ್ಯೇಯ ರಾಹುಲ್ ಗಾಂಧಿಯವರನ್ನು ಪ್ರಧಾನಿಯಾಗಿ ಮಾಡುವುದು" ಎಂದು ಹೇಳಿದ್ದಾರೆ. ಪಕ್ಷದ ಹೈಕಮಾಂಡ್ ಏನು ನಿರ್ಧಾರ ಮಾಡಿದರೂ ಅದನ್ನು ಸ್ವೀಕರಿಸುತ್ತೇನೆ. ನನ್ನ ನಾಯಕಿ ಎಐಸಿಸಿ ಅಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಎಂದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ