Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ನಿಮ್ಮ ಮನೆಯ ಮಗ, ದಯವಿಟ್ಟು ಮತ ಕೊಡಿ: ಮೃಣಾಲ ಹೆಬ್ಬಾಳಕರ್ ಮನವಿ


ರಾಮದುರ್ಗ: ಮೇ 7ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ಮೃಣಾಲ ಹೆಬ್ಬಾಳಕರ್ ಶುಕ್ರವಾರ ರಾಮದುರ್ಗ ವಿಧಾನಸಭಾ ಕ್ಷೇತ್ರದ ಹಳೇತೋರಗಲ್ ಗ್ರಾಮದಲ್ಲಿ ಪ್ರಚಾರ ನಡೆಸಿದರು.


ನಾನು ನಿಮ್ಮ ಮನೆ ಮಗ, ದಯವಿಟ್ಟು ನನಗೆ ಮತ ನೀಡಿ ಆಶಿರ್ವದಿಸಿ, ನಿಮ್ಮ ಸೇವೆ ಮಾಡಲು ಅವಕಾಶ ನೀಡಿ. ನಿಮ್ಮೆಲ್ಲರ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತೇನೆ. ನಿಮ್ಮ ವಿಶ್ವಾಸ, ನಿಮ್ಮ ಮತಕ್ಕೆ ಗೌರವ ಬರುವ ರೀತಿಯಲ್ಲಿ ಕೆಲಸ ಮಾಡುತ್ತೇನೆ ಎಂದು ಮೃಣಾಲ ಹೆಬ್ಬಾಳಕರ್ ಕೈ ಮುಗಿದು ಮತದಾರರಲ್ಲಿ ವಿನಂತಿಸಿದರು.


ಜಿಲ್ಲೆಯ ಸಮಸ್ಯೆಗಳನ್ನು ಅರಿತಿದ್ದೇನೆ. ಇಲ್ಲಿಯ ಬೇಕು ಬೇಡಗಳನ್ನು ತಿಳಿದಿದ್ದೇನೆ. ಇಲ್ಲಿನ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ಮಾಡುವಂತ ಅವಕಾಶ ಕಲ್ಪಿಸುತ್ತೇನೆ. ಜಿಲ್ಲೆಯಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣ ಮಾಡುತ್ತೇನೆ. ಉದ್ಯಮ, ಪ್ರವಾಸೋದ್ಯಮ ಬೆಳವಣಿಗೆಗೆ ಎಲ್ಲ ರೀತಿಯ ಪ್ರಯತ್ನ ಮಾಡುತ್ತೇನೆ. ಒಮ್ಮೆ ಅವಕಾಶ ಕೊಡಿ ಎಂದು ವಿನಂತಿಸಿದರು.


  ಚಿಲ್ಮೂರ್ ಗ್ರಾಮ, ಹೊಸಕೋಟೆ ಹಾಗೂ ಚಿಕ್ಕೊಪ್ಪ ಗ್ರಾಮಗಳಲ್ಲಿ ಮೃಣಾಲ ಹೆಬ್ಬಾಳಕರ್ ಪ್ರಚಾರ ನಡೆಸಿದರು. ಪ್ರಚಾರಕ್ಕೂ ಮುನ್ನ ಎಲ್ಲೆಡೆ ಗ್ರಾಮಸ್ಥರು ಅಭೂತಪೂರ್ವ ಸ್ವಾಗತ ನೀಡಿ, ಆರಂತಿ ಮಾಡಿ ಬರಮಾಡಿಕೊಂಡರು. ಸ್ಥಳೀಯ ಅಭ್ಯರ್ಥಿಯಾಗಿರುವ ಮೃಣಾಲ್ ನನ್ನು ಬೆಂಬಲಿಸುವ ಭರವಸೆ ನೀಡಿದರು.


 ಈ ಬಾರಿ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಅತ್ಯಧಿಕ ಮತಗಳಿಂದ ಕಾಂಗ್ರೆಸ್ ಜಯಭೇರಿ ಭಾರಿಸಲಿದೆ ಎನ್ನುವ ವಿಶ್ವಾಸವನ್ನು ಮೃಣಾಲ ಹೆಬ್ಬಾಳಕರ್  ಸಂದರ್ಭದಲ್ಲಿ ವ್ಯಕ್ತಪಡಿಸಿದರು.


 ಈ ಸಮಯದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು, ಗ್ರಾಮದ ಹಿರಿಯರು, ನೂರಾರು ಮಹಿಳೆಯರು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ