Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನನಗೆ ಛೋಟಾ ಸಹಿ ವ್ಯವಹಾರ ಗೊತ್ತಿಲ್ಲ: ವಿಜಯೇಂದ್ರ ಸಚಿವ ಮಧುಬಂಗಾರಪ್ಪ ತಿರುಗೇಟು

ಮೈಸೂರು''ನನ್ನ ಕೂದಲು ಹಾಗೂ ತಲೆಯೊಳಗಿನ ಮೆದುಳು ಚನ್ನಾಗಿದೆ. ಅವರಂತೆ ನನಗೆ ಯಾವ ದುರ್ಬುದ್ಧಿಯೂ ಇಲ್ಲ ಹಾಗೂ ಅವರಂತೆ ಛೋಟಾ ಸಹಿ ವ್ಯವಹಾರ ಗೊತ್ತಿಲ್ಲ'' ಎಂದು ಬಿಜೆಪಿ ರಾಜಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಟೀಕೆಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿರುಗೇಟು ನೀಡಿದರು.

ಮಂಗಳವಾರ ಮೈಸೂರಿನ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮರೀತಿಬ್ಬೇಗೌಡ ಪರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ''ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಗಡ್ಡದ ಬಗ್ಗೆ ಮಾತನಾಡಿ ಬಿಜೆಪಿಯವರು 130 ಸ್ಥಾನದಿಂದ 60 ಸ್ಥಾನಕ್ಕೆ ಬಂದಿದ್ದಾರೆ. ಈಗ ನನ್ನ ಕೂದಲಿನ ಬಗ್ಗೆ ಮಾತನಾಡಿ, 26 ಸ್ಥಾನದಿಂದ 6 ಸ್ಥಾನಕ್ಕೆ ಬರುತ್ತಾರೆ ನೋಡಿ'' ಎಂದು ವಾಗ್ದಾಳಿ ನಡೆಸಿದರು.

''ಬಿಜೆಪಿಯವರು ಕೋವಿಡ್ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಗಡ್ಡದ ಬಗ್ಗೆ ಮಾತನಾಡಲಿಲ್ಲ, ಹಾಗೂ ರಾಷ್ಟ್ರಪತಿ ಅಬ್ದುಲ್ ಕಲಾಂ ಹೇರ್ ಸ್ಟೈಲ್ ಬಗ್ಗೆ ಮಾತನಾಡುವುದಿಲ್ಲ, ನನ್ನ ಹೇರ್ ಸ್ಟೈಲ್ ಬಗ್ಗೆ ಮಾತನಾಡುತ್ತಾರೆ. ನಾನು ಅವರಂತೆ ಶೇ 40ರಷ್ಟು ಕಮಿಷನ್ ಪಡೆದು, ಹೇರ್ ಸ್ಟೈಲ್ ಕಟಿಂಗ್ ಮಾಡಿಸುವ ದುಃಸ್ಥಿತಿ ಬಂದಿಲ್ಲ'' ಎಂದು ಶಿಕ್ಷಣ ಸಚಿವರು ತಿರುಗೇಟು ನೀಡಿದರು.

''ಇನ್ನೂ ನನ್ನ ಕೂದಲು ನನ್ನ ತಲೆಯೊಳಗಿನ ಮೆದುಳು ಎರಡು ಚನ್ನಾಗಿದೆ. ಅವರಂತೆ ನನಗೆ ಯಾವುದೇ ದುರ್ಬುದ್ಧಿಯಿಲ್ಲ, ಛೋಟಾ ಸೈನ್ ಮಾಡುವ ವ್ಯವಹಾರ ನನಗೆ ಗೊತ್ತಿಲ್ಲ. ನನ್ನ ತಂದೆ ನನಗೆ ಒಳೆಯ ಬುದ್ಧಿ ಕಲಿಸಿದ್ದಾರೆ. ನನ್ನ ಹೇರ್ ಸ್ಟೈಲ್ ಬಗ್ಗೆ ನನ್ನ ತಂದೆಗೆ ಬಹಳ ಪ್ರೀತಿ ಇತ್ತು. ನನಗೆ ಅವರೇ ಸ್ಫೂರ್ತಿ, ಅವರಿವರ ಮಾತನ್ನು ನಾನು ಕೇಳುವುದಿಲ್ಲ. ಜೂನ್ 4 ಬರಲಿ, ನಂತರ ವಿಜಯೇಂದ್ರನಿಗೆ ಬೇರೆ ಕೆಲಸ ಕೊಡ್ತೀವಿ'' ಎಂದು ಟೀಕಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ