Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಗನ್ ಮೋಹನ್ ರೆಡ್ಡಿ ಅವರನ್ನು ನಾನು ಭೇಟಿ ಮಾಡಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್



ಬೆಂಗಳೂರು: ಆಂಧ್ರಪ್ರದೇಶ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ನಾನು ಭೇಟಿ ಮಾಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಕಳೆದ 10 ದಿನಗಳಿಂದ ಜಗನ್ ಮೋಹನ್ ರೆಡ್ಡಿ ಅವರು ಬೆಂಗಳೂರಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ ಎಂಬ ವದಂತಿ ಹಬ್ಬಿತ್ತು. ಇತ್ತ ಕೆಲ ಪತ್ರಿಕೆಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಡಿಸಿಎಂ ಡಿಕೆಶಿ ಹಾಗೂ ಜಗನ್ ಮೋಹನ್ ರೆಡ್ಡಿ ಪರಸ್ಪರ ಹೂಗುಚ್ಛ ನೀಡಿ ಭೇಟಿಯಾಗಿರುವ ಫೋಟೊ ಹರಿದಾಡುತ್ತಿದೆ.


ಈ ಸಂಬಂಧ ಎಕ್ಸ್ ಪೋಸ್ಟ್ ಮೂಲಕ ಸ್ಪಷ್ಟೀಕರಣ ನೀಡಿರುವ ಡಿ.ಕೆ.ಶಿವಕುಮಾರ್, ನಾನು ಆಂಧ್ರ ಪ್ರದೇಶ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿರುವಂತೆ ಯಾರೋ ಕಿಡಿಗೇಡಿಗಳು ನಕಲಿ ಫೋಟೊ ಸೃಷ್ಟಿಸಿ ಹರಡುತ್ತಿದ್ದಾರೆ. ನಾನು ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿಲ್ಲ. ಯಾರೂ ಕೂಡ ಇದನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ.







ಆಂಧ್ರಪ್ರದೇಶದ ಬಿಜೆಪಿ ಶಾಸಕರೊಬ್ಬರು ಇತ್ತೀಚೆಗೆ ಜಗನ್ ಮೋಹನ್ ರೆಡ್ಡಿ ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಅದರ ಬೆನ್ನಲ್ಲೇ ಡಿಕೆಶಿ ಮತ್ತು ಜಗನ್ ಮೋಹನ್ ಬೆಂಗಳೂರಲ್ಲಿ ಭೇಟಿಯಾಗಿದ್ದಾರೆ ಎಂಬ ವದಂತಿ ಹಬ್ಬಿತ್ತು. ಇದೀಗ ಆ ಊಹಾಪೋಹಗಳಿಗೆ ಡಿಸಿಎಂ ಡಿಕೆಶಿ ತೆರೆ ಎಳೆದಿದ್ದು, ನಾನು ಜಗನ್ ಮೋಹನ್ ರೆಡ್ಡಿ ಅವರನ್ನು ಭೇಟಿ ಮಾಡಿಲ್ಲ. ಯಾರೂ ಕೂಡ ಇದನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ.



Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ