LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮತ್ತೆ ನಾನೇ ರಾಜ್ಯಾಧ್ಯಕ್ಷನಾಗುತ್ತೇನೆ: ಬಿಜೆಪಿ ಬಣಜಗಳ ಹಿನ್ನೆಲೆ ವಿಜಯೇಂದ್ರ ವಿಶ್ವಾಸ

ಶಿವಮೊಗ್ಗ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಾರು ಎಂಬುದಕ್ಕೆ ಇನ್ನೊಂದು ವಾರದಲ್ಲಿಯೇ ಉತ್ತರ ಸಿಗಲಿದೆ. ತದನಂತರ ಪಕ್ಷದಲ್ಲಿ ಉಂಟಾಗಿರುವ ಎಲ್ಲ ಗೊಂದಲಗಳಿಗೂ ಉತ್ತರ ಸಿಗಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಆಂತರಿಕ ಗೊಂದಲಗಳ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆಂತರಿಕ ಗೊಂದಲಗಳು, ಬಹಿರಂಗ ಹೇಳಿಕೆಗಳಿಂದ ಪಕ್ಷಕ್ಕೆ ಎಷ್ಟು ಹಾನಿಯಾಗಬೇಕೋ ಅಷ್ಟು ಆಗಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯ ಅರಿವು ನನಗಿರುವುದರಿಂದ ಕಳೆದೊಂದು ವರ್ಷದಿಂದ ಪಕ್ಷದ ಮುಖಂಡರು ಹಾಗೂ ಪಕ್ಷದ ವಿರುದ್ಧ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಈ ಭ್ರಷ್ಟ-ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದೇನೆ ಎಂದರು.

ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಮಂಡಲ, ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಗೆ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟಿತವಾಗಿ ನಡೆದಿರುವ ಚುನಾವಣೆ ಬೇರೆ ಎಲ್ಲೂ ನಡೆಯಲು ಸಾಧ್ಯವಿಲ್ಲ. ಪಕ್ಷದ ವರಿಷ್ಠರ ನಿರ್ಧಾರದಂತೆ ಎಲ್ಲವೂ ನಡೆದಿದೆ ಎಂದು ಹೇಳಿದರು.

ರಾಜ್ಯದ ಜನರಿಗೆ, ಪಕ್ಷದ ಕಾರ್ಯಕರ್ತರು, ಶಾಸಕರಿಗೆ ಪಕ್ಷದ ಸಂಘಟನೆಯಲ್ಲಿ ವಿಜಯೇಂದ್ರ ಮಾಡಿರುವ ಕೆಲಸ ಗೊತ್ತಿದೆ. ನನಗೆ ವಿಶ್ವಾಸವಿದೆ. ಎಲ್ಲರ ಸಹಕಾರದಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ಮುಂದುವರೆಯುವೆ. ಪಕ್ಷವನ್ನು ಮತ್ತೆ ಬಲಪಡಿಸುವೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್