LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕಾಂಗ್ರೆಸ್ ಗದ್ದುಗೆ ಏರಿದರೆ ಪಿತ್ರಾರ್ಜಿತ ಆಸ್ತಿಗೂ ತೆರಿಗೆ ನಿಶ್ಚಿತ: ಮೋದಿ ವಾಗ್ದಾಳಿ

ಅಂಬಿಕಾಪುರ,24: ಕಾಂಗ್ರೆಸ್‌ನ ಅಪಾಯಕಾರಿ ಉದ್ದೇಶಗಳು ಒಂದರ ನಂತರ ಒಂದರಂತೆ ಬೆಳಕಿಗೆ ಬರುತ್ತಿವೆ. ಈಗ ಕಷ್ಟಪಟ್ಟು ಸಂಪಾದಿಸುವ ನಿಮ್ಮ ಮಕ್ಕಳ ಮೇಲೂ ಪಿತ್ರಾರ್ಜಿತ ತೆರಿಗೆ ಹೇರುವುದಾಗಿ ಆ ಪಕ್ಷ ಹೇಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ಮಾ ಮಹಾಮಾಯಿ ಕಿ ಜೈ ಘೋಷಣೆಯೊಂದಿಗೆ ಇಂದು ಪ್ರಧಾನಿ ಮೋದಿ ಛತ್ತೀಸ್‌ಗಢದ ಸರ್ಗುಜಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡಿದರು.

ಭಾರತ ಸ್ವಾವಲಂಬಿಯಾದರೆ ಕೆಲವು ಶಕ್ತಿಗಳ ಆಟಗಳು ಬಂದ್​ ಆಗುತ್ತವೆ. ಬಿಜೆಪಿ ಭಯೋತ್ಪಾದನೆ ಮತ್ತು ನಕ್ಸಲ್ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹಿಂಸಾಚಾರ ಹರಡುವವರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ ಎಂದು ದೂರಿದರು.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಪು ಇದೆ. ಸಂವಿಧಾನ ರಚನೆಯಾಗುತ್ತಿರುವಾಗ ದೇಶದ ಪ್ರಜ್ಞಾವಂತರು ಒಟ್ಟಾಗಿ ಸೇರಿ ಭಾರತದಲ್ಲಿ ಧರ್ಮ ಆಧಾರದ ಮೇಲೆ ಮೀಸಲಾತಿ ಬೇಡ. ದಲಿತರು, ಗಿರಿಜನರ ಹೆಸರಲ್ಲಿ ಮೀಸಲಾತಿ ನೀಡುವುದಾಗಿ ತೀರ್ಮಾನಿಸಿದ್ದರು. ಆದರೆ ವೋಟ್ ಬ್ಯಾಂಕ್ ಹಸಿವಿನ ಕಾಂಗ್ರೆಸ್ ಇದಕ್ಕೆ ಕ್ಯಾರೇ ಎನ್ನಲಿಲ್ಲ. ಸಂವಿಧಾನ, ಬಾಬಾ ಸಾಹೇಬರ ಮಾತುಗಳ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ವರ್ಷಗಳ ಹಿಂದೆಯೇ ಆಂಧ್ರಪ್ರದೇಶದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಕಾಂಗ್ರೆಸ್ ಯೋಜಿಸಿತ್ತು ಎಂದು ಆರೋಪಿಸಿದರು.

2009ರ ಪ್ರಣಾಳಿಕೆಯಲ್ಲಿ ಧರ್ಮದ ಹೆಸರಿನಲ್ಲಿ ಮೀಸಲಾತಿ ನೀಡುವುದಾಗಿ ಕಾಂಗ್ರೆಸ್‌ ಸ್ಪಷ್ಟವಾಗಿ ಹೇಳಿತ್ತು. ಕರ್ನಾಟಕದಲ್ಲಿಯೂ ಕಾಂಗ್ರೆಸ್‌ ಧರ್ಮದ ಹೆಸರಿನಲ್ಲಿ ಮೀಸಲಾತಿ ಜಾರಿಗೆ ತಂದಿತ್ತು. ಬಿಜೆಪಿ ಸರಕಾರ ಬಂದಾಗ ಕಾಂಗ್ರೆಸ್‌ ನಿರ್ಧಾರವನ್ನು ಬುಡಮೇಲು ಮಾಡಿತು ಎಂದು ತಿಳಿಸಿದರು.

ಕಾಂಗ್ರೆಸ್ ಎಲ್ಲಾ ಮುಸ್ಲಿಂ ಜಾತಿಗಳನ್ನು ಒಬಿಸಿ ಕೋಟಾದಲ್ಲಿ ಇರಿಸಿದೆ. ಈ ಮೂಲಕ ಸಾಮಾಜಿಕ ನ್ಯಾಯವನ್ನು ಅವಮಾನಿಸಿದೆ. ಇಡೀ ದೇಶದಲ್ಲಿ ಕರ್ನಾಟಕದ ಮಾದರಿಯನ್ನು ಜಾರಿಗೆ ತರಲು ಕಾಂಗ್ರೆಸ್ ಬಯಸಿದೆ ಎಂದರು.

ಜೂನ್ 4ರ ನಂತರ ಛತ್ತೀಸ್‌ಗಢದ ಪ್ರತಿ ಕುಟುಂಬದ ವೃದ್ಧ ಪೋಷಕರಿಗೆ ಉಚಿತ ಚಿಕಿತ್ಸೆ ಸಿಗಲಿದೆ. ಸರ್ಗುಜದ 1 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ಕಿಸಾನ್ ನಿಧಿಯ 200 ಕೋಟಿ ರೂಪಾಯಿ ಜಮಾ ಮಾಡಲಾಗಿದೆ. ಮುಂಬರುವ 5 ವರ್ಷಗಳಲ್ಲಿ ಬಹಳಷ್ಟು ಮಾಡಬೇಕಾಗಿದೆ. ಸರ್ಗುಜ ಅಂದರೆ 'ಸ್ವರ್ಗದ ಮಗಳು' ಎಂದರ್ಥ. ಈ ಪ್ರದೇಶವನ್ನು ಅಭಿವೃದ್ಧಿ ಮಾಡಬೇಕಿದೆ. ಆದ್ದರಿಂದ ಕಮಲ ಪ್ರತಿಯೊಂದರಲ್ಲೂ ಅರಳಬೇಕು. ನಿಮ್ಮ ಸೇವಕನಿಗೆ ಆಶೀರ್ವಾದ ಮಾಡಿ ಎಂದು ಮೋದಿ ಮನವಿ ಮಾಡಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್