ತಾಳಿಕೋಟೆ, ಮಳೆಯ ಕೊರತೆಯಿಂದ ಇಡೀ ಜಿಲ್ಲೆಯಲ್ಲಿ ಬೀಕರ ಬರಗಾಲ ಆವರಿಸಿದೆ ಬರ ಘೋಷಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿಯೊಂದಿಗೆ ವಂಚನೆ ಮಾಡಲು ಹೊರಟಿರುವದನ್ನು ನಾವೆಂದು ಸಹಿಸಲ್ಲಾವೆಂದು ಮಾಜಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಅವರು ಹೇಳಿದರು.
ಪಟ್ಟಣದಲ್ಲಿ ಶುಕ್ರವಾರರಂದು ಬಿಜೆಪಿ ರಾಜ್ಯ ರೈತ ಮೂರ್ಚಾ ಹಾಗೂ ಜೆಡಿಎಸ್ ಪಕ್ಷದ ನೇತೃತ್ವದಲ್ಲಿ ತಾಳಿಕೋಟೆ ತಾಲೂಕು ಬರಪೀಡಿತ ತಾಲೂಕೆಂದು ಘೋಷಿಸಲು ಆಗ್ರಹಿಸಿ ನಡೆದ ೨ನೇ ದಿನದಂದು ರೈತ ಹೋರಾಟದಲ್ಲಿ ಮಾತನಾಡಿದ ಅವರು ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೀಡಾಗಿರುವ ರೈತರ ನೆರವಿಗೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ ಪ್ರತಿ ಎಕರೆಗೆ ೫೦ ಸಾವಿರ ಬೆಳೆ ನಷ್ಟ ಪರಿಹಾರ ನೀಡಬೇಕು, ರೈತರ ೫ ಲಕ್ಷದವರೆಗಿನ ಸಾಲ ಮನ್ನಾ ಮಾಡಬೇಕು ಹಾಗೂ ಬೆಳೆ ವಿಮೆಯ ಸಂಪೂರ್ಣ ಪ್ರಯೋಜನ ರೈತರಿಗೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಅವರು ರೈತರ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರವು ಬರ ಪರಿಹಾರ, ಸಾಲಮನ್ನಾ, ಬೆಳೆ ವಿಮೆ ಹಾಗೂ ಉದ್ಯೋಗ ಖಾತ್ರಿ ಸೇರಿದಂತೆ ಅಗತ್ಯ ನೆರವು ನೀಡಬೇಕು. ರೈತರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಿರಂತರ ಹೋರಾಟ ಮುಂದುವರಿಸಲಾಗುವುದು ರಾಜ್ಯ ಮಟ್ಟದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಇರುವ ಹಿನ್ನೆಲೆಯಲ್ಲಿ ಎರಡೂ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಒಗ್ಗಟ್ಟಾಗಿ ಜನರು ಮತ್ತು ರೈತರ ಸಮಸ್ಯೆಗಳಿಗಾಗಿ ಹೋರಾಟ ನಡೆಸುವ ಅಗತ್ಯವಿದೆ. ಮಳೆ ಇಲ್ಲದೇ ರೈತರು ಪಡುತ್ತಿರುವ ಸಂಕಷ್ಟ ಸರ್ಕಾರಕ್ಕೆ ಕಾಣುತ್ತಿಲ್ಲಾ ಸರ್ಕಾರವನ್ನು ಏಚ್ಚರಿಸುವ ನಿಟ್ಟಿನಲ್ಲಿ ಹೋರಾಟ ಮುಂದುವರೆಯಲಿದೆ ಎಂದರು.
ಇನ್ನೋರ್ವ ಮಾಜಿ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಮಾತನಾಡಿ ಬರಗಾಲದಲ್ಲಿ ರಾಜ್ಯ ಸರ್ಕಾರ ನೆರವಿಗೆ ಬರುವದನ್ನು ಬಿಟ್ಟು ತುಂಟು ನೆಪದ ಮೇಲೆ ಜಾರಿಕೊಳ್ಳಲು ಪ್ರಯತ್ನಿಸುತ್ತಿದೆ ಬರಗಾಲ ಘೋಷಣೆಯ ಜೊತೆಗೆ ಮುಂದಿನ ಬೆಳೆ ಬರುವವರೆಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಕಾಮಗಾರಿಗಳನ್ನು ಕೈಗೊಳ್ಳಬೇಕು. ರೈತರ ಹೊಲಗಳಲ್ಲಿ ಕೃಷಿ ಹೊಂಡ ಹಾಗೂ ಬದುಗಳ ನಿರ್ಮಾಣ, ಕೆರೆಗಳ ಹೂಳೆತ್ತುವುದು ಮತ್ತು ಕಾಲುವೆಗಳ ಅಭಿವೃದ್ಧಿ ಸೇರಿದಂತೆ ನೀರು ಸಂರಕ್ಷಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
---
ರೈತರ ಹೋರಾಟಕ್ಕೆ ಜೆಡಿಎಸ್ ಶಾಸಕ ರಾಜುಗೌಡ ಪಾಟೀಲ ಅವರು ಸಂಪೂರ್ಣ ಬೆಂಬಲದೊಂದಿಗೆ ರೈತರ ಸಮಸ್ಯೆ ಕುರಿತು ಅಧಿವೇಶನದಲ್ಲಿ ಪ್ರಸ್ಥಾಪಿಸುವದರ ಜೊತೆಗೆ ಬರ ಘೋಷಣೆ ಪರಿಹಾರ ವಿಷಯದಲ್ಲಿ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವವರೆಗೂ ಭಾವಿಗಿಳಿದು ಹೋರಾಟ ಮಾಡುವದಾಗಿ ಸ್ಪಷ್ಟವಾಗಿ ತಿಳಿಸಿದ್ದಾರೆ ಈ ಹೋರಾಟಕ್ಕೆ ಇನ್ನಷ್ಟು ಶಕ್ತಿ ತುಂಬಲು ೨೧ ರಂದು ನಡೆಯುವ ತಾಳಿಕೋಟೆ ಸಂಪೂರ್ಣ ಬಂದ್‌ಗೆ ಎಲ್ಲರ ಸಹಕರಿಸಬೇಕು. ರಾಜುಗೌಡ ಕೊಳೂರ ಜೆಡಿಎಸ್ ಮುಖಂಡರು.
ಮುಖಂಡರಾದ ಬಸನಗೌಡ ಯಡಿಯಾಪೂರ, ಬಸನಗೌಡ ಮಾಡಗಿ, ಬಸನಗೌಡ ವಣಕ್ಯಾಳ, ಪ್ರಭುಗೌಡ ಅಸ್ಕಿ, ಸಂಗನಗೌಡ ಹೆಗರಡ್ಡಿ, ಅವರು ಮಾತನಾಡಿದರು.
ಪ್ರತಿಭಟನಾ ಮೇರವಣಿಗೆಯು ಬಸವೇಶ್ವರ ವೃತ್ತದಿಂದ ಪ್ರಾರಂಭಗೊಂಡು ಅಂಬೇಡ್ಕರ್ ಸರ್ಕಲ್, ಕತ್ರಿ ಭಜಾರ, ಶಿವಾಜಿ ಮಹಾರಾಜರ ವೃತ್ತ, ಬಸ್ ನಿಲ್ದಾಣದ ಮುಂಭಾಗದ ರಸ್ತೆಗುಂಟಾ ಹಾಯ್ದು ಎಪಿಎಂಸಿ ಮುಖ್ಯದ್ವಾರದಲ್ಲಿ ನಿರ್ಮಿಸಲಾದ ವೇದಿಕೆಗೆ ಆಗಮಿಸಿ ಧರಣಿಯೊಂದಿಗೆ ಸಭೆಯಾಗಿ ಮಾರ್ಪಟ್ಟಿತು. ಮುಖಂಡರಾದ ರಾಜುಗೌಡ ಗುಂಡಕನಾಳ, ಎಂ.ಎಂ.ಪಾಟೀಲ, ಶ್ರೀಮತಿ ಸುವರ್ಣಾ ಬಿರಾದಾರ, ಮೊದಲಾದವರು ಪಾಲ್ಗೊಂಡಿದ್ದರು.
ಇಂದು ಸರ್ಕಾರದ ಶವಯಾತ್ರೆ ಬರಪೀಡಿತ ಪ್ರದೇಶಗಳ ಘೋಷಣೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಡೆಯುತ್ತಿರುವ ಹೋರಾಟದ ಭಾಗವಾಗಿ ಸೆ.೧೯ರಂದು ಸರ್ಕಾರದ ಪ್ರತಿಕೃತಿಯ ಸಂಕೇತನಾತ್ಮಕ ಶವಯಾತ್ರೆ ನಡೆಸಲು ಜೆಡಿಎಸ್-ಬಿಜೆಪಿ ಮುಖಂಡರು ನಿರ್ಧರಿಸಿದ್ದಾರೆಂದು ಜೆಡಿಎಸ್ ತಾಲೂಕಾ ಅಧ್ಯಕ್ಷ ಮಡುಸಾಹುಕಾರ ಬಿರಾದಾರ ಅವರು ತಿಳಿಸಿದ್ದಾರೆ.
ಪಟ್ಟಣದಲ್ಲಿ ಜೆಡಿಎಸ್-ಬಿಜೆಪಿ ನೇತೃತ್ವದಲ್ಲಿ ಬರ ಘೋಷಣೆಗಾಗಿ ನಡೆಯುತ್ತಿರುವ ಹೋರಾಟದ ೩ನೇ ದಿನವಾದ ಶನಿವಾರರಂದು ಸರ್ಕಾರದ ಶವ ಯಾತ್ರೆಯನ್ನು ಮಾಡಲು ನಿರ್ಧರಿಸಲಾಗಿದೆ ಹಲವು ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಸರ್ಕಾರದಿಂದ ಸಮರ್ಪಕ ಸ್ಪಂದನೆ ದೊರೆತಿಲ್ಲ. ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಈ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ಸರ್ಕಾರದ ಪ್ರತಿಕೃತಿಯನ್ನು ಸಿದ್ಧಪಡಿಸಿ ಮೆರವಣಿಗೆ ನಡೆಸಿ, ಸಂಕೇತನಾತ್ಮಕವಾಗಿ ಶವಾಯಾತ್ರೆ ನಡೆಸಲಾಗುವದು ದಿ. ೨೧ ರಂದು ತಾಳಿಕೋಟೆ ಬಂದ್ ಕರೆ ನೀಡಲಾಗಿದ್ದು ಅಷ್ಟರೊಳಗೆ ತಾಳಿಕೋಟೆ ತಾಲೂಕು ಒಳಗೊಂಡು ಇನ್ನೂಳಿದ ೩ ತಾಲೂಕುಗಳನ್ನು ಬರ ಘೋಷಣೆ ಮಾಡಬೇಕು ಇಲ್ಲದಿದ್ದರೆ ಅಂದು ಬೃಹತ್ ಪ್ರತಿಭಟನೆಯ ನಂತರ ಬಸವೇಶ್ವರ ವೃತ್ತದಲ್ಲಿ ಸರ್ಕಾರದ ಶವವನ್ನು ಕ್ರೇನ್ ಮೂಲಕ ನೇಣುಹಾಕುವಂತಹ ಕಾರ್ಯ ನಡೆಯಲಿದೆ ಎಂದು ಜೆಡಿಎಸ್ ತಾಲೂಕಾ ಅಧ್ಯಕ್ಷ ಮಡುಸಾಹುಕಾರ ಬಿರಾದಾರ ಅವರು ತಿಳಿಸಿದ್ದಾರೆ.