Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳೆ ಹಾಳಾದರೆ ಮೋದಿ, ಷಾಗೆ ಹೇಳು; ರೈತನ ವಿರುದ್ಧ ಖರ್ಗೆ ಕೆಂಡ

ಕಲಬುರಗಿ: ಅತಿವೃಷ್ಟಿಯಿಂದಾಗಿ ನಾನು ಬೆಳೆದಿದ್ದ ಬೆಳೆ ಹಾಳಾಗಿದೆ ಎಂದು ತನ್ನ ಕಷ್ಟವನ್ನು ಹೇಳಿಕೊಳ್ಳಲು ಬಂದಿದ್ದ ಯುವ ರೈತನ ಮೇಲೆ ಕಾಂಗ್ರೆಸ್ ಅಧ್ಯಕ್ಷ  ಮಲ್ಲಿಕಾರ್ಜುನ ಖರ್ಗೆ ಅವರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಕಲಬುರಗಿಯ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಬಂದಿದ್ದ ಯುವಕ ಅತಿವೃಷ್ಟಿಯಿಂದ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ತೊರಗಿ ಬೆಳೆ ಹಾಳಾಗಿದೆ ಸರ್ ಎಂದು ಅಲವತ್ತುಕೊಂಡಿದ್ದ.


ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಯುವಕನಿಗೆ, ನೀನು ಎಷ್ಟು ಎಕರೆಯಲ್ಲಿ ಬೆಳೆ ಬೆಳೆದಿದ್ದೀಯಾ ಎಂದು ಪ್ರಶ್ನಿಸಿದ್ದರು. ಅದಕ್ಕೆ ಯುವಕ ನಾಲ್ಕು ಎಕರೆಯಲ್ಲಿ ಬೆಳೆ ಬೆಳೆದಿದ್ದೆ ಎಂದು ಉತ್ತರಿಸಿದ್ದ. ಇದಕ್ಕೆ ಖರ್ಗೆಯವರು, ನನ್ನದು ನಲವತ್ತು ಎಕರೆಯಲ್ಲಿ ಬೆಳೆದಿದ್ದು ಹಾಳಾಗಿದೆ. ತೊಗರಿ ಮಾತ್ರವಲ್ಲ, ಹೆಸರು, ಹತ್ತಿ, ಸೂರ್ಯಕಾಂತಿ ಸಹ ಹಾಳಾಗಿದೆ. ನಾನು ಯಾರಿಗೆ ಹೋಗಿ ಹೇಳಲಿ. ನೀನು ಬೇಕಿದ್ದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹತ್ತಿರ ಹೋಗಿ ಕೇಳು. ಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ