Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸ್ತೀವಿ: ಸಿ ಎಂ ಸಿದ್ದರಾಮಯ್ಯ

*ಪ್ರಾಸಿಕ್ಯೂಷನ್ ಗೆ ತಕ್ಷಣ ಅನುಮತಿ ನೀಡಿ ರಾಜ್ಯಪಾಲರು ತಾರತಮ್ಯ ಎಸಗಿಲ್ಲವೇ?

*ಹೆಚ್.ಡಿ.ಕುಮಾರಸ್ವಾಮಿಯವರನ್ನು ಬಂಧಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ: 

*ಪರಿಸ್ಥಿತಿ ಬಂದರೆ ಹೆಚ್ ಡಿ.ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸ್ತೀವಿ

*ಕೊಪ್ಪಳದಲ್ಲಿ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ 

ಕೊಪ್ಪಳ, ಆಗಸ್ಟ್ 21:ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲವೇ ಎಂದು ಮುಖ್ಯಮಂತ್ರಿಗಳು ಖಾರವಾಗಿ ಪ್ರಶ್ನಿಸಿದರು.

ಅವರು ಇಂದು ಗಿಣಿಗೇರ ಏರ್ಸ್ಟ್ರಿಪ್ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ವಿರುದ್ಧ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸುವ ಬಗ್ಗೆಯೇ ಮುಖ್ಯಮಂತ್ರಿಗಳು ಯೋಚಿಸುತ್ತಿದ್ದಾರೆ ಎಂಬ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನಗನಿವೇಶ ಬಂದಿಲ್ಲ. ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ ಎಂದು ಸ್ಪಷ್ಟವಾಗಿ ನುಡಿದರು.

ಆದರೆ ಈ ಪ್ರಕರಣ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್ ಐ ಟಿಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ , ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್ ಐ ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.

ಕುಮಾರಸ್ವಾಮಿಯವರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾತಿಯನ್ನು ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಚಾರದ ಬಗ್ಗೆ ತನಗೆ ಮಾಹಿತಿಯಿಲ್ಲವೆಂದು ತಿಳಿಸಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿಯವರದು ಎಂದಿಗೂ ಹಿಟ್ ಎಂಡ್ ರನ್ ಕೇಸ್ ಎಂದರು.

*ಅಭಿವೃದ್ಧಿ ಕೆಲಸದಲ್ಲಿ ರಾಜಕೀಯವಿಲ್ಲ:*

ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿಗಳು ಉತ್ತರಿಸುತ್ತಾ, ಸರ್ಕಾರ ಅಭಿವೃದ್ಧಿ ಕೆಲಸದಲ್ಲಿ ರಾಜಕೀಯ ಮಾಡದೇ , ಜಿಲ್ಲೆಯ ಜನರ ಹಾಗೂ ಇಲ್ಲಿನ ಅಭಿವೃದ್ಧಿ ಪರವಾಗಿಯೇ ನಮ್ಮ ನಿರ್ಣಯಗಳಿರುತ್ತವೆ. ಕೊಪ್ಪಳ ಜಿಲ್ಲೆಯ ಬಗ್ಗೆ ವಿಶೇಷ ಕಾಳಜಿಯಿದ್ದು, ಇಲ್ಲಿನ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡಲಿದ್ದೇನೆ ಎಂದರು.

*ಬೆಂಬಲ ಬೆಲೆ ಕುರಿತಂತೆ ಕೇಂದ್ರಕ್ಕೆ ಪತ್ರ*

ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಬಗ್ಗೆ ಮಾತನಾಡಿ, ಹೆಸರುಕಾಳು ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಶೀಘ್ರವಾಗಿ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಆಯೋಜನೆ: ಸಚಿವ ಸಂತೋಷ ಎಸ್. ಲಾಡ್ಸಮಾಜದ ಮುಖ್ಯ ವಾಹಿನಿಗೆ ವಿಕಲ ಚೇತನರು ಮುಂದೆ ಬರಬೇಕು : ಬಾಲಚಂದ್ರ ಜಾರಕಿಹೊಳಿಶ್ರೀ ಸಾಯಿ ಕಾಲೇಜಿನ ಶಿಬಿರದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಕನ್ನಡ ಕಟ್ಟುವಲ್ಲಿ ಧಾರವಾಡದ ಧುರೀಣರ ಕೊಡುಗೆ ಅಪಾರ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ವಿಧಾನ ಪರಿಷತ್ ಸದಸ್ಯ  ಸ್ಥಾನಕ್ಕೆ ಐದನೇ ಬಾರಿ ಆಯ್ಕೆಯಾದ ಶಶೀಲ್. ಜಿ. ನಮೋಶಿ ಅವರಿಗೆ ಹೊಸಪೇಟೆ ಯಲ್ಲಿ ಅದ್ಧೂರಿ ಸ್ವಾಗತ*ಬಿಜೆಪಿ ಮೋರ್ಚಾ ಪದಾಧಿಕಾರಿಗಳ ಮಹತ್ವದ ಸಭೆ*ಮಹಿಳಾ ಸಾಹಿತಿಗಳ ನಿರ್ಲಕ್ಷ್ಯ ಖಂಡನೀಯ-ಡಾ.ಸುಜಾತಾ ಚಲವಾದಿವಿಶ್ವವಿದ್ಯಾಲಯ ಮಟ್ಟದ ಖೋ-ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವಿಶ್ವವಿದ್ಯಾಲಯ ಬಾಸ್ಕೆಟ್‌ಬಾಲ್ ತಂಡಕ್ಕೆ ತನ್ವೀರ್ ಆಯ್ಕೆಶ್ರೀ ವಿಶ್ವಗುರು ಸೌಹಾರ್ದ ಸೊಸೈಟಿ  ಅಧ್ಯಕ್ಷರಾಗಿ ಅರವಿಂದ ಬಡಕುಂದ್ರಿ, ಉಪಾಧ್ಯಕ್ಷರಾಗಿ ಬರಮಪ್ಪ ನಾಗನೂರ ಆಯ್ಕೆ.ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ