Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಆಧ್ಯಾತ್ಮದ ಅರಿವು ಇದ್ದರೆ ಬದುಕು ಸರಳ, ಶಾಂತವಾಗಿ ನಡೆಯುತ್ತದೆ"

ಕುರುಗೋಡು: ಮೇ.05. ಪ್ರತಿಯೊಬ್ಬರ ಜೀವನದಲ್ಲಿ ಆಧ್ಯಾತ್ಮದ ಅರಿವು ಇದ್ದರೆ ಅಂತಹರ ಬದುಕು ಸರಳ ಮತ್ತು ಶಾಂತವಾಗಿ ನಡೆಯುತ್ತದೆ. ಎಂದು ಕುರುಗೋಡು ಪಟ್ಟಣದ ಕೊಟ್ಟೂರು ಸ್ವಾಮಿ ಶಾಕ ವಿರಕ್ತ ಮಠದ ಶ್ರೀ ನಿರಂಜನ ಪ್ರಭು ಸ್ವಾಮೀಜಿಯವರು ತಿಳಿಸಿದರು. ಮಠದಲ್ಲಿ ಶುಕ್ರವಾರ ಆಗಿ ಹುಣ್ಣಿಮೆ ಪ್ರಯುಕ್ತ ಆಯೋಜಿಸಿದ್ದ ಶಿವಾನುಭವ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಆಶೀರ್ವಚನ ನೀಡುತ್ತಾ, ಪ್ರತಿದಿನವೂ ಕಾಯಕವೇ ಕೈಲಾಸ ಎಂಬ ಮಾರ್ಗದಲ್ಲಿ ಕೆಲಸ ನಿರ್ವಹಿಸಬೇಕು. ಶಿವ ಮೆಚ್ಚುವುದು ಕಷ್ಟಪಟ್ಟು ದುಡಿದಾಗ ಮಾತ್ರ. ಸಂತಸ ಬದುಕಿಗೆ ಆಧ್ಯಾತ್ಮದ ಅರಿವು ಅತ್ಯಗತ್ಯವಾಗಿದ್ದು, ಭೌತಿಕ ಆಸ್ತಿಗಿಂತ ಆಧ್ಯಾತ್ಮ ಸಂಪತ್ತು ಶ್ರೇಷ್ಠವಾಗಿದೆ. ಇತರರಿಗೆ ಒಳಿತನ್ನು ಬಯಸುವುದು ನಿಜವಾದ ಧರ್ಮ. ಗಳಿಸಿದ ಒಳ್ಳೆಯ ಹೆಸರು ಹಣಕ್ಕಿಂತ ಹೆಚ್ಚು ಬೆಲೆ ಬಾಳುತ್ತದೆ. ಸುಳ್ಳಿಗೆ ಹಲವು ದಾರಿಗಳಿದ್ದರೂ ಸತ್ಯಕ್ಕೆ ಒಂದೇ ದಾರಿ. ವೀರಶೈವ ಧರ್ಮದಲ್ಲಿ ರೇಣುಕಾಚಾರ್ಯರು ಬೋಧಿಸಿದ ಮೌಲ್ಯಗಳು ಉಲ್ಲೇಖಾರ್ಹವಾಗಿವೆ. ಕೈಲಾಸಕ್ಕಿಂತ ಕಾಯಕ, ಧರ್ಮಕ್ಕಿಂತ ದಯೆ, ಅರಿವಿಗಿಂತ ಆಚಾರ, ಅಧಿಕಾರಕ್ಕಿಂತ ಅಭಿಮಾನ ಹಾಗೂ ಭೌತಿಕ ಆಸ್ತಿಗಿಂತ ಆರೋಗ್ಯ ಮುಖ್ಯ ಎಂದರು. ಶಿವಾನುಭವ ಸಂಪದದಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಇಲಾಖೆಯ ಕುರುಗೋಡು ಸಿಪಿಐ ಎಸ್.ಎಂ. ಬಾಳನಗೌಡ ರವರು ಮಾತನಾಡಿ, ಅಧ್ಯಾತ್ಮದ ಅರಿವು ಮನುಷ್ಯನಲ್ಲಿ ಒಳ್ಳೆಯ ನಡತೆಯನ್ನು ರೂಪಿಸುತ್ತದೆ. ಯಾವುದೇ ಸಮಸ್ಯೆಗಳಿಲ್ಲದೆ ಜೀವನ ಶಾಂತವಾಗಿ, ಎಲ್ಲರೊಂದಿಗೂ  ಸಾಮರಸ್ಯವಾಗಿ ನಡೆಯುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪಟ್ಟಣದ ಹಿರಿಯರು, ಮಠದ ಭಕ್ತಾದಿಗಳು, ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ