Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾನೂನು ಬಾಹಿರವಾಗಿ ಮರಗಳ ಕಟಾವು : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯ 

ಬಳ್ಳಾರಿ, ಮೇ 13.: ಬಳ್ಳಾರಿ ನಗರದಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಕಾನೂನುಬಾಹಿರವಾಗಿ ಮರಗಳನ್ನು ಕಡಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಸಿದ್ದೇಶ್ ಉಳೂರು ಅವರು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಗರದಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳ ವೇಳೆ ಅರಣ್ಯ ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ ಸುಮಾರು 25ಕ್ಕೂ ಹೆಚ್ಚು ಮರಗಳನ್ನು ಅನಧಿಕೃತವಾಗಿ ಕಡಿದು ಹಾಕಲಾಗಿದೆ ಎಂದು ಅವರು ಆರೋಪಿಸಿದರು. ಈ ಕುರಿತು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆಗೆ ಸ್ಪಷ್ಟೀಕರಣ ಕೇಳಿ ಪತ್ರ ಬರೆದಿದ್ದರೂ ಇದುವರೆಗೆ ಯಾವುದೇ ಸಮರ್ಪಕ ಉತ್ತರ ಅಥವಾ ಧೃಢೀಕೃತ ನಕ್ಷೆ ನೀಡಿಲ್ಲ ಎಂದು ದೂರಿದರು.
ಬಳ್ಳಾರಿ ಈಗಾಗಲೇ ತೀವ್ರ ಬಿಸಿಲಿನಿಂದ ಬಳಲುತ್ತಿದ್ದು, ಇಂತಹ ಸಂದರ್ಭದಲ್ಲಿ ಮರಗಳ ಕಡಿತದಿಂದ ಸಾರ್ವಜನಿಕರಿಗೆ ನೆರಳು ಹಾಗೂ ಶುದ್ಧ ಗಾಳಿ ಸಿಗದಂತಾಗಿದೆ. ಪಕ್ಷಿಗಳ ಆಶ್ರಯವೂ ಹಾನಿಗೊಳಗಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ತಕ್ಷಣ ಎಚ್ಚೆತ್ತುಕೊಂಡು ಉಳಿದಿರುವ ಮರಗಳನ್ನು ಸಂರಕ್ಷಿಸಬೇಕು. ಈಗಾಗಲೇ ಕಡಿದಿರುವ ಪ್ರತಿಯೊಂದು ಮರಕ್ಕೆ ಪರ್ಯಾಯವಾಗಿ 10 ಗಿಡಗಳನ್ನು ನೆಟ್ಟು ನಗರ ಹಸಿರೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಇದಲ್ಲದೆ, ಕರ್ನಾಟಕ ಅರಣ್ಯ ಅಧಿನಿಯಮ 1969 ಹಾಗೂ ಎನ್‌ಜಿಟಿ (National Green Tribunal Act-2010) ನಿಯಮಗಳ ಪ್ರಕಾರ ಕ್ರಮ ಕೈಗೊಂಡು ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ನಿಯಮ ಉಲ್ಲಂಘಿಸಿದ ಗುತ್ತಿಗೆದಾರರನ್ನು ಸರ್ಕಾರಿ ಟೆಂಡರ್‌ಗಳಿಂದ ನಿಷೇಧಿಸಿ ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ, ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿಗಳಿಗೆ, ಲೋಕೋಪಯೋಗಿ ಸಚಿವ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಪತ್ರ ನೀಡಿ ಸಿದ್ದೇಶ್ ಉಳೂರು ಆಗ್ರಹಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ