Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊರ್ಲಗುಂದಿಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

ಬಳ್ಳಾರಿ:15:. ತಾಲೂಕಿನ ಮೋಕಾ ಪೊಲೀಸ್ ಠಾಣಾ ವ್ಯಾಪ್ತಿಯ ಕೊರ್ಲಗುಂದಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸಾರ್ವಜನಿಕ ವಿತರಣೆ ವ್ಯವಸ್ಥೆ (ಪಡಿತರ) ಅಕ್ಕಿಯನ್ನು ಪೊಲೀಸರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.
ಗ್ರಾಮದ ಹಾಲು ಬಸವೇಶ್ವರ ದೇವಸ್ಥಾನದ ಸಮೀಪದ ಖಾಲಿ ಜಾಗದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ ಸ್ಥಳದಲ್ಲಿ ವಿವಿಧ ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 27.40 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ ₹63,480 ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸರ್ಕಾರದ ಬಡಜನರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಬೇರೆಡೆ ಸಾಗಣೆ ಮಾಡಲು ಯತ್ನಿಸಲಾಗುತ್ತಿತ್ತು ಎಂಬ ಅನುಮಾನ ವ್ಯಕ್ತವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ. ಅಕ್ಕಿ ಎಲ್ಲಿಂದ ತರಲಾಗಿತ್ತು, ಇದರಲ್ಲಿ ಯಾರ್ಯಾರು ಭಾಗಿಯಾಗಿದ್ದಾರೆ ಹಾಗೂ ಇದನ್ನು ಯಾವ ಉದ್ದೇಶಕ್ಕಾಗಿ ಸಂಗ್ರಹಿಸಲಾಗಿತ್ತು ಎಂಬ ಕುರಿತು ಮಾಹಿತಿ ಕಲೆಹಾಕಲಾಗುತ್ತಿದೆ.
ಕಾರ್ಯಾಚರಣೆಯಲ್ಲಿ ಮೋಕಾ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು. ಪ್ರಕರಣ ಸಂಬಂಧ ಕಾನೂನು ಕ್ರಮ ಜರುಗಿಸಲಾಗುತ್ತಿದ್ದು, ಸರ್ಕಾರದ ಪಡಿತರ ಧಾನ್ಯಗಳನ್ನು ಅಕ್ರಮವಾಗಿ ಸಂಗ್ರಹಿಸುವುದು ಹಾಗೂ ಮಾರಾಟ ಮಾಡುವುದು ಕಾನೂನುಬಾಹಿರ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ