Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಬಳ್ಳಾರಿಯಲ್ಲಿ ನ. 27ರಂದು ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮ


ಬಳ್ಳಾರಿ,ನ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನವೆಂಬರ್ 27 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ  ಡಾ. ಜೋಳದರಾಶಿ ದೊಡ್ಡನಗೌಡ ರಂಗಮAದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಹಾಗೂ ಮಾಲಾರ್ಪಣೆ: ಅಂದು ಬೆಳಿಗ್ಗೆ 9 ಗಂಟೆಗೆ ಬಳ್ಳಾರಿ ನಗರದ ಕನಕ ವೃತ್ತದಲ್ಲಿರುವ ಭಕ್ತ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ನಡೆಯಲಿದೆ. ನಂತರ ಕನಕದಾಸರ ವೃತ್ತದಿಂದ ವಾಲ್ಮೀಕಿ ವೃತ್ತ, ಕನಕದುರ್ಗಮ್ಮ ದೇವಸ್ಥಾನ, ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್ ಪೇಟೆ ಪೊಲೀಸ್ ಠಾಣೆ, ತೇರು ಬೀದಿ ಹಾಗೂ ಹೆಚ್.ಆರ್. ಗವಿಯಪ್ಪ ವೃತ್ತದ ಮೂಲಕ ಡಾ. ಜೋಳದರಾಶಿ ದೊಡ್ಡನಗೌಡ ರಂಗಮAದಿರದವರೆಗೆ ಮೆರವಣಿಗೆ ಸಾಗಲಿದೆ.
ವೇದಿಕೆ ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ವಹಿಸಲಿದ್ದಾರೆ.
ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಕೆ. ಬಸಪ್ಪ ಉಪನ್ಯಾಸ ನೀಡಲಿದ್ದು, ಬಳ್ಳಾರಿಯ ಕೆ. ವಸಂತಕುಮಾರ್ ಕನಕದಾಸರ ಕೀರ್ತನೆಗಳನ್ನು ಪ್ರಸ್ತುತಪಡಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಬಳ್ಳಾರಿ ಲೋಕಸಭಾ ಸಂಸದ ಈ. ತುಕಾರಾಮ್, ಕೊಪ್ಪಳ ಲೋಕಸಭಾ ಸಂಸದ ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ಕಂಪ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್‌ಲೂಮ್ಸ್) ಅಧ್ಯಕ್ಷರಾದ ಜೆ.ಎನ್. ಗಣೇಶ್, ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ. ನಾಗರಾಜ, ಸಂಡೂರು ಶಾಸಕರಾದ ಈ. ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ. ಚಂದ್ರಶೇಖರ ಬಿ. ಪಾಟೀಲ, ಶಶಿಲ್ ಜಿ. ನಮೋಶಿ, ವೈ.ಎಂ. ಸತೀಶ್, ಬಳ್ಳಾರಿ ಮಹಾನಗರ ಪಾಲಿಕೆ ಮಹಾಪೌರರಾದ ಪಿ. ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ (ಬೆಂಗಳೂರು) ಉಪಾಧ್ಯಕ್ಷ ಹೆಚ್. ಲಕ್ಷö್ಮಣ ಮತ್ತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ .ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ .ಡಿ.ಪಿ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ .ಎನ್, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ .ಪಿ.ಎಸ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುದ್ದೇಬಿಹಾಳ ರೈತರಿಗೆ ಸಿಹಿಸುದ್ದಿ: ಚಿಮ್ಮಲಗಿ, ಮುಳವಾಡ ಕಾಲುವೆಗಳಿಗೆ 2 ದಿನದಲ್ಲಿ ನೀರು ಬಿಡುವ ಭರವಸೆ೨೪ ರಂದು ಬುದ್ಧ ಬೆಳದಿಂಗಳು ಕಾರ್ಯಕ್ರಮ /  ಡಾ. ಜೆ. ಪಿ. ದೊಡಮನಿ ಅವರ " ಅಸ್ಪೃಶ್ಯರು " ಅನುವಾದ ಗ್ರಂಥ ಲೋಕಾರ್ಪಣೆ  ಗಾಣಿಗ ಸಮಾಜದ ಮಕ್ಕಳ ಉನ್ನತ ಶಿಕ್ಷಣದ ವ್ಯವಸ್ಥೆಗೆ ರೂ. ೨೫ ಲಕ್ಷ ಸ್ವದೇಣಿಗೆ: ಸಚಿವ ಲಕ್ಷ್ಮಣ ಸವದಿ ಭರವಸೆಮುತ್ತು ಮನಹಳ್ಳಿಗೆ ಕನ್ನಡ ಕಲಾರತ್ನ ರಾಜ್ಯೋತ್ಸವ ಪ್ರಶಸ್ತಿತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಸ್ಮಾರ್ಟ್ ಕ್ಲಾಸ್ ಸಹಕಾರಿ-ಬಡದಾನಿರೀಲ್ಸ್ ಸ್ಪರ್ಧೆಯಲ್ಲಿ ಸಂಕಲ್ಪ ಕಂಬಿಗೆ ತೃತೀಯ ಸ್ಥಾನ: ಕಿತ್ತೂರು ನಾಡಿಗೆ ಕೀರ್ತಿ ತಂದ ಜ್ಞಾನಗಂಗಾ ಶಾಲೆಯ ವಿದ್ಯಾರ್ಥಿಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಸಂಪನ್.ಶರಣರ ಮಹಿಮೆ ಅವರ ನಡೆನುಡಿಗಳಲ್ಲಿ ಕಾಣಬೇಕು; ಬಸವಾದಿ ಶರಣರ ಆದರ್ಶಗಳು ಸಾರ್ವಕಾಲಿಕ ಸತ್ಯ: ಶ್ರೀ ಸಹಜಾನಂದ ಮಹಾಸ್ವಾಮೀಜಿಬಳ್ಳಾರಿಯಲ್ಲಿ ನ. 27ರಂದು ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮನ.24 ಮತ್ತು 25ರಂದು ಬಳ್ಳಾರಿಯಲ್ಲಿ ಜಿಲ್ಲಾಮಟ್ಟದ ಕಲಾ ಪ್ರತಿಭೋತ್ಸವ-2026