LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಸ್ತುತ ದಿನಮಾನಗಳಲ್ಲಿ ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಸೈ : ಡಾ. ಭಾರತಿ 

ಪ್ರಸ್ತುತ ದಿನಮಾನಗಳಲ್ಲಿ ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಸೈ : ಡಾ. ಭಾರತಿ



ಬಳ್ಳಾರಿ.ಮಾ. 11:. ಅಡುಗೆ ಮನೆಗೆ ಸೀಮಿತವಾಗಿದ್ದ ಮಹಿಳೆಯು ಇಂದು ಎಲ್ಲಾ ರಂಗದಲ್ಲಿಯೂ ಸಾಧನೆಯ ಮುನ್ನೆಡೆಯಿಂದ ತನ್ನ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದಾಳೆ. ಮಹಿಳೆಯರು ಆತ್ಮವಿಶ್ವಾಸ, ಧೈರ್ಯ ಮತ್ತು ತಾಳ್ಮೆಯಿಂದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಮೋಕಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಿ.ಭಾರತಿ ಅಭಿಪ್ರಾಯಪಟ್ಟರು.


ಅವರು ತಾಲೂಕಿನ  ಮೋಕಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಮಹಿಳಾ ಸಬಲೀಕರಣ ಕೋಶದಿಂದ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿ,

ಇಂದು ಮಹಿಳೆಯರ ಮುಂದೆ ಅನೇಕ‌ ಸವಾಲುಗಳಿವೆ.ಎಲ್ಲವುಗಳನ್ನು ನಿಭಾಯಿಸುವ ಸಹನಾ ಶಕ್ತಿಯೂ ಮಹಿಳೆಗಿದೆ.ಮಾಡುವ ಕಾರ್ಯಗಳಲ್ಲಿ ಶ್ರೇಷ್ಠ ಕನಿಷ್ಠ ಎಂದೆಣಿಸದೆ ಸಹಭಾಗಿತ್ವದಿಂದ ಮಹಿಳೆಯರು ಸದೃಢ ಸಮಾಜವನ್ನು ಕಟ್ಟಬೇಕೆಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಮೋಕಾದ ಘನ ಮತ್ತು ದ್ರವ ತ್ಯಾಜ್ಯ ವಾಹನ ಚಾಲಕಿ ಕೆ.ಎ.ಕವಿತ ಅವರು ಮಾತನಾಡಿ, ಇಂದು ಮಹಿಳೆಯರು ಸಬಲರಾಗುತ್ತಿದ್ದಾರೆ.ತಮ್ಮ ಇಚ್ಛಾ ಶಕ್ತಿಯಿಂದ ಆರ್ಥಿಕ ಮತ್ತು ಸಾಮಾಜಿಕವಾಗಿಯೂ ಕುಟುಂಬವನ್ನು ಮುನ್ನೆಡೆಸುತ್ತಿದ್ದಾಳೆ.ಆತ್ಮಸ್ಥೆರ್ಯದೊಂದಿಗೆ ಹೆಜ್ಜೆ ಹಾಕಿದಾಗ ಖಂಡಿತ ಯಶಸ್ಸು  ದೊರೆಯುವದು.ಯಾವ ಕೆಲಸವಾದರೂ ಶ್ರದ್ದೆ ಪ್ರಾಮಾಣಿಕತೆಯಿಂದ ಮಾಡುವ ಗುಣ ಮಹಿಳೆಯರಲ್ಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ.ಬಿ.ಸರೋಜಾ

ಸಮಾಜದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅನನ್ಯವಾಗಿದೆ.. ಪ್ರತಿಯೊಂದು ಹೆಜ್ಜೆಯಲ್ಲಿಯೂ ಮಹಿಳೆಯ ಶ್ರಮ ಮತ್ತು ತ್ಯಾಗವನ್ನು  ಸಮಾಜ ಗೌರವಿಸಬೇಕು. ಪ್ರಾತಿನಿಧಿಕವಾಗಿ  ಮಹಿಳೆಯರು ಪಾಲ್ಗೊಂಡರೆ ಸಾಲದು ಒಳಗೊಳ್ಳುವಿಕೆಯ ಮೂಲಕ ಉನ್ನತಿ ಸಾಧಿಸಬೇಕು ಮಹಿಳೆಯರಿಗೆ ಇಂದು ಎಲ್ಲಾ ಕ್ಷೇತ್ರದಲ್ಲೂ ಪ್ರಾಧಾನ್ಯತೆ ಸಿಗುತ್ತಿದೆ. ಹೆಣ್ಣುಮಕ್ಕಳು ಮತ್ತಷ್ಟು ಉನ್ನತ ಶಿಕ್ಷಣ ಪಡೆದು ತಮಗಿಷ್ಟವಾದ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಬೇಕೆಂದು  ಸಲಹೆ ನೀಡಿದರು.

 ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಚಾಲಕರಾದ ಡಾ.ಬಿ.ಜಿ.ಕಲಾವತಿ ಪ್ರಾಸ್ತಾವಿಕವಾಗಿ ಮಾತನಾಡಿದರು.


 ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರನ್ನು  ಸನ್ಮಾನಿಸಲಾಯಿತು.

ವಿದ್ಯಾರ್ಥಿನಿಯರಾದ ಶ್ವೇತಾ,ಪೂಜಿತಾ ಹಾಗೂ ಸಂಗಡಿಗರು ಪ್ರಾರ್ಥಿಸಿ, ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು

 ಅಧ್ಯಾಪಕರು, ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್