Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿ ಎಸ್ ಕೆ ವಿ.ವಿಯಲ್ಲಿ ವೃಂದ ಮತ್ತು ನೇಮಕಾತಿಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ ; ಸಿದ್ದೇಶ್ ಊಳೂರು





ಬಳ್ಳಾರಿ. ಫೆ. 17: ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾಲಯದಲ್ಲಿ ವಿವಿಧ ವೃಂದ ಮತ್ತು ನೇಮಕಾತಿಯಲ್ಲಿ ಸ್ಥಳೀಯರಿಗೆ ಮೀಸಲಾತಿಯಲ್ಲಿ ಶೇ.75ರಷ್ಟು ಮತ್ತು ಶೇ.25ರಷ್ಟು ಕಲ್ಯಾಣ ಕರ್ನಾಟಕ (371ಜೆ) ಹೈದರಾಬಾದ್ ಕರ್ನಾಟಕ ಅಭ್ಯರ್ಥಿಗಳನ್ನು ಹೊರತು ಪಡಿಸಿ ಇತರೆ ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಅಧಿಸೂಚನೆಯಲ್ಲಿ ಹೊರಡಿಸಲಾಗಿರುತ್ತದೆ ಈ ಅಧಿಸೂಚನೆಯಿಂದ (371ಜೆ) ಹೈದರಬಾದ್ ಕರ್ನಾಟಕ ಅಭ್ಯರ್ಥಿಗಳಿಗೆ ಅನ್ಯಾಯವಾಗುವುದರಿಂದ  ನೇಮಕಾತಿಯಲ್ಲಿ ಶೇ.100ರಷ್ಟು ಸ್ಥಳೀಯರಿಗೇ ಉದ್ಯೋಗ  ಅವಕಾಶವನ್ನು ಕಲ್ಪಿಸಿ ಈ ಭಾಗದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿಕೊಡಬೇಕೆಂದು ಸಾಮಾಜಿಕ ಹೋರಾಟಗಾರ ಊಳೂರು ಸಿದ್ದೇಶ್ ಒತ್ತಾಯಿಸಿದ್ದಾರೆ.


 ಅವರು ಇಂದು ವಿ ಎಸ್ ಕೆ ವಿವಿಯ ಉಪ ಕುಲಪತಿಗಳಿಗೆ ಮನವಿ ಪತ್ರವನ್ನು ನೀಡಿ,  ದಿನಾಂಕ 30 ಜನೆವರಿ 2026 ಅಧಿಸೂಚನೆ ಹೊರಡಿಸಿದ್ದು (ಸಂಖ್ಯೆ:ವಿಶ್ರೀಕೃಬ/ಆಡಳಿತ/ಡಿಪಿಎಆರ್-ಭೋಧಕ/2025-26/3238 ) ಈ  ಅಧಿಸೂಚನೆಯ ಪತ್ರಿಕಾ ಪ್ರಕಟಣೆಯಲ್ಲಿ ನೇಮಕಾತಿಯ ಕುರಿತಂತೆ ವಿಷಯವಾರು ಹುದ್ದೆಗಳು, ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಈ ಎಲ್ಲಾ ಹುದ್ದೆಗಳಿಗೆ ನಿಗಧಿತ ವಿದ್ಯಾರ್ಹತೆ ಮತ್ತು ವಯಸ್ಸು, ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇವುಗಳ ಕುರಿತು ಸ್ಪಷ್ಟ ಮಾಹಿತಿ ಇಲ್ಲದಿರುವುದು ಅಭ್ಯರ್ಥಿಗಳಿಗೆ ನೇಮಕಾತಿ ವಿಷಯದಲ್ಲಿ ಅನುಮಾನದ ಶಂಕೆ ಮತ್ತು ಗೊಂದಲವನ್ನು ಉಂಟು ಮಾಡಿರುತ್ತದೆ, ಆದ್ದುದರಿಂದ ಪ್ರಸ್ತುತ ತಾವುಗಳು ಹೊರಡಿಸಿರುವ ಅಧಿಸೂಚನೆಯನ್ನು ರದ್ದುಗೊಳಿಸಿ ಸ್ಟಷ್ಟ ಮಾಹಿತಿಗಳೊಂದಿಗೆ ಹೊಸ ಅಧಿಸೂಚನೆಯನ್ನು ಹೊರಡಿಸಿ ನೇಮಕಾತಿಯಲ್ಲಿ ಸ್ಥಳೀಯರಿಗೆ ಶೇ.100ರಷ್ಟು ಮೀಸಲಾತಿ ನೀಡಬೇಕೆಂದು ಮತ್ತು ನೇಮಕಾತಿಯಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಂಡು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ  ಯಾವುದೇ ಅನುಮಾನಗಳಿಗೆ ಅಸ್ಪದ ನೀಡದಂತೆ ಸ್ಥಳೀಯ ಅಭ್ಯರ್ಥಿಗಳಿಗೆ ನ್ಯಾಯವನ್ನು ಒದಗಿಸಬೇಕೆಂದು ವಿ ವಿ ಕುಲಪತಿಗಳಿಗೆ ಮನವಿ ಪತ್ರವನ್ನು ನೀಡಿ ಒತ್ತಾಯಿಸಿದ್ದಾರೆ.




Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*