Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೌಂಡ್ ಟೇಬಲ್ ಇಂಡಿಯಾದಿAದ ತರಗತಿ ಕೊಠಡಿಗಳ ಉದ್ಘಾಟನೆ ಸಮಾರಂಭ




ಬಳ್ಳಾರಿ,ಜೂ,21.: ರೌಂಡ್ ಟೇಬಲ್  ಇಂಡಿಯಾದ  ರಾಷ್ಟ್ರೀಯ  ಯೋಜನೆಯಾದ  ಶಿಕ್ಷಣದ  ಮೂಲಕ ಸ್ವತಂತ್ರ   ಅಡಿಯಲ್ಲಿ, ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯ ಅಡಿಯಲ್ಲಿ  ಜೂನ್ ೧೩ , ಶುಕ್ರವಾರ, ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಮೊಟಸುಗೂರಿನ ಶ್ರೀ ಶಾರದಾ ಇಂಗ್ಲಿಷ್ ಮಾಧ್ಯಮ ಉನ್ನತ ಪ್ರಾಥಮಿಕ ಶಾಲೆಯಲ್ಲಿ ಹೊಸದಾಗಿ ೩ ತರಗತಿ ಕೊಠಡಿಗಳ ಕಟ್ಟಡವನ್ನು ನಿರ್ಮಿಸಲಾಗಿದೆ.


ಈ ಸಂದರ್ಭದಲ್ಲಿ ಅಧ್ಯಕ್ಷರಾದ ಎನ್. ಶಿರೀಷ್  ಮಾತನಾಡಿ ಈ ಹೊಸ ಕಟ್ಟಡವು ೩ ತರಗತಿ ಕೊಠಡಿಗಳನ್ನು ಒಳಗೊಂಡಿದ್ದು, ಮೊಟಸುಗೂರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ೨೦೦ಕ್ಕೂ ಹೆಚ್ಚು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಶಿಕ್ಷಣದ ಅವಕಾಶವನ್ನು ಒದಗಿಸಲಿದೆ. ರೌಂಡ್ ಟೇಬಲ್ ಇಂಡಿಯಾದ ಈ ಉಪಕ್ರಮವು ಆರ್ಥಿಕವಾಗಿ ದುರ್ಬಲ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಗುರಿಯನ್ನು ಹೊಂದಿದೆ.


ರೌAಡ್ ಟೇಬಲ್ ಇಂಡಿಯಾದ ಶಿಕ್ಷಣ ಯೋಜನೆ

೧೯೯೭ ರಿಂದ ರೌಂಡ್ ಟೇಬಲ್ ಇಂಡಿಯಾವು ದೇಶಾದ್ಯಾಂತ  ೩,೭೮೨ ಯೋಜನೆಗಳ ಮೂಲಕ ೯,೨೭೨ ತರಗತಿ ಕೊಠಡಿಗಳನ್ನು ನಿರ್ಮಿಸಿದ್ದು, ಸುಮಾರು ೧೦.೨ ದಶಲಕ್ಷ ಮಕ್ಕಳ ಶಿಕ್ಷಣಕ್ಕೆ ನೆರವಾಗಿದೆ. ಒಟ್ಟು ರೂ,೪೮೫ ಕೋಟಿ ವೆಚ್ಚದಲ್ಲಿ ೩.೪೧ ದಶಲಕ್ಷ ಚದರ ಅಡಿ ವಿಸ್ತೀರ್ಣದ ಶಾಲಾ ಮೂಲಸೌಕರ್ಯವನ್ನು ಸೃಷ್ಟಿಸಲಾಗಿದೆ. ತರಗತಿ ಕೊಠಡಿಗಳ ಜೊತೆಗೆ, ಶೌಚಾಲಯಗಳು, ಕುಡಿಯುವ ನೀರಿನ ವ್ಯವಸ್ಥೆ, ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ, ಆಟದ ಮೈದಾನಗಳು ಮುಂತಾದ ಸೌಲಭ್ಯಗಳನ್ನು ಒದಗಿಸುವ ಮೂಲಕ ರೌಂಡ್ ಟೇಬಲ್ ಇಂಡಿಯಾವು ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸುತ್ತಿದೆ ಎಂದರು.

ಬಳ್ಳಾರಿ ಘಟಕದ ಕೊಡುಗೆ

ಬಳ್ಳಾರಿ ಹೆರಿಟೇಜ್ ರೌಂಡ್ ಟೇಬಲ್ ೩೭೬ ನೇಯ  ಯೋಜನೆಯ ಮೂಲಕ ಸಮಾಜದ ಒಳಿತಿಗಾಗಿ ಶ್ರಮಿಸುತ್ತಿದ್ದು, ಶಿಕ್ಷಣದ ಮೂಲಕ ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ತನ್ನ ಬದ್ಧತೆಯನ್ನು ಮುಂದುವರೆಸಿದೆ. ಈ ಯೋಜನೆಯ ಯಶಸ್ಸಿಗೆ ಸಿಎಸ್‌ಆರ್ ನಿಧಿಯ ಬೆಂಬಲವೂ ಪ್ರಮುಖವಾಗಿದೆ ಎಂದು ತಿಳಿಸಿದರು.

ಮುಂದಿನ ಗುರಿ  ರೌಂಡ್ ಟೇಬಲ್ ಇಂಡಿಯಾವು ದೇಶಾದ್ಯಂತ ಇಂತಹ ಇನ್ನಷ್ಟು ಶಿಕ್ಷಣ ಯೋಜನೆಗಳನ್ನು ಕೈಗೊಂಡು, ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಮೂಲಕ ಉಜ್ವಲ ಭವಿಷ್ಯವನ್ನು ಒದಗಿಸುವ ಗುರಿಯನ್ನು ಹೊಂದಿದೆ. ರೌಂಡ್ ಟೇಬಲ್ ಇಂಡಿಯಾದ ಈ ಶಿಕ್ಷಣ ಕ್ರಾಂತಿಯಲ್ಲಿ ಭಾಗಿಯಾಗಿ, ಮಕ್ಕಳ ಭವಿಷ್ಯವನ್ನು ರೂಪಿಸಲು ಕೈಜೋಡಿಸಿ ಎಂದರು.

ಈ ಸಂದರ್ಭದಲ್ಲಿ ರೌಂಡ್ ಟೇಬಲ್ ಉಪಾಧ್ಯಕ್ಷ ಅಶಿಶ್ ಶೆಟ್ಟಿ, ಕಾರ್ಯದರ್ಶಿ ರೋಹಿತ್, ಖಜಾಂಚಿ ಶರತ್ ರೆಡ್ಡಿ, ಸಂಚಾಲಕ ರವಿ ಸಿದ್ದೇಶ್, ಬಂಗಾರ್ ಮತ್ತು ಐಪಿಸಿ ರಕ್ಷಿತ್ , ಕುಶ್ವಂತ್ ರೆಡ್ಡಿ , ಗೌರವ್ ಜೈನ್ , ಮತ್ತಿತರು ಉಪಸ್ಥತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ