Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

*ಶ್ರೀರಾಯ ಇಂಟರ್ನ್ಯಾಷನಲ್ ಸ್ಕೂಲ್ ಉದ್ಘಾಟನೆ: ಮಕ್ಕಳ ಶಿಕ್ಷಣಕ್ಕೆ ಹೊಸ ಅಧ್ಯಾಯ* 

ಬಳ್ಳಾರಿ,ಜೂ.05: ನಗರದ ಮೊಕಾ ರಸ್ತೆಯ ಹರಿಪ್ರಿಯ ನಗರದಲ್ಲಿ ನೂತನವಾಗಿ ಆರಂಭಗೊಂಡಿರುವ ಶ್ರೀರಾಯ ಇಂಟರ್ನ್ಯಾಷನಲ್ ಸ್ಕೂಲ್ (ಲಿಟಲ್ ಆರ್ಟ್ಸ್) ಇಂಗ್ಲಿಷ್ ಮಾಧ್ಯಮ ಶಾಲೆಯನ್ನು ಬಳ್ಳಾರಿ  ಮಾಜಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಹಾಲಿ ಶಾಸಕ ಬಿ. ನಾಗೇಂದ್ರವರ ಸಹೋದರ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿ.ವನೆತಕೇಶ್ ಪ್ರಸಾದ್ ಅವರು ಉದ್ಘಾಟಿಸಿದರು.
ಈ ಶಾಲೆಯ ವ್ಯವಸ್ಥಾಪಕರಾದ ಶಿವಲೀಲಾ ಚಂದ್ರಕಾಂತ್ ಅವರ ನೇತೃತ್ವದಲ್ಲಿ ಆರಂಭಗೊಂಡಿರುವ ಈ ಶಾಲೆಯ ಉದ್ಘಾಟನಾ ಸಮಾರಂಭವನ್ನು ನೆರವೇರಿಸಿ ಮಾತನಾಡಿದ ಬಿ.ವೆಂಕಟೇಶ್ ಪ್ರಸಾದ್ ಅವರು, ಹರಿಪ್ರಿಯ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದ ಮಕ್ಕಳಿಗೆ ಈ ಶಾಲೆ ಅತ್ಯಂತ ಅನುಕೂಲಕರವಾಗಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಕೇಂದ್ರವಾಗಿ ಬೆಳೆಯಲಿದೆ ಎಂದು ಹೇಳಿದರು.
ಪ್ಲೇ ಹೋಂನಿಂದ ಯುಕೆಜಿ ವರೆಗೆ ತರಗತಿಗಳನ್ನು ಆರಂಭಿಸಿರುವ ಶಾಲೆಯು ಸುಸಜ್ಜಿತ ಕಟ್ಟಡ, ಮಕ್ಕಳ ಸ್ನೇಹಿ ಹಾಗೂ ತಂಪಾದ ವಾತಾವರಣ ಮತ್ತು ಅನುಭವಿ ಶಿಕ್ಷಕಿಯರನ್ನು ಹೊಂದಿದ್ದು, ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ, ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸಿ ಉತ್ತಮ ಶಿಕ್ಷಣದ ಅವಕಾಶವನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ವ್ಯವಸ್ಥಾಪಕರಾದ ಶಿವಲೀಲಾ ಚಂದ್ರಕಾಂತ್, ಶಿಕ್ಷಕ-ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಹಾಗೂ ಗಣ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ