Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ಖಾತ್ರಿ ವೇತನ ಹೆಚ್ಚಿಸಿ; ಉದ್ಯೋಗ ದಿನಗಳನ್ನೂ ಹೆಚ್ಚಿಸಿ: ಸೋನಿಯಾ ಆಗ್ರಹ

ನವದೆಹಲಿ: ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಾಗಿರುವ ಎಂಜಿಎನ್ಆರ್​ಇಜಿಎ (ಮನರೇಗಾ) ಅಡಿಯಲ್ಲಿ ಕನಿಷ್ಠ ವೇತನ ಮತ್ತು ಖಾತರಿ ಕೆಲಸದ ದಿನಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮಂಗಳವಾರ ಆಗ್ರಹಿಸಿದರು.


ರಾಜ್ಯಸಭೆ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಸೋನಿಯಾ ಗಾಂಧಿ, ಮನರೇಗಾ ಯೋಜನೆಗೆ ಬಜೆಟ್​ನಲ್ಲಿ ಈ ಹಿಂದಿನ 86 ಸಾವಿರ ಕೋಟಿ ರೂ. ಅನುದಾನವನ್ನು ಸ್ಥಿರವಾಗಿಡುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರವು ಯೋಜನೆಯನ್ನು ವ್ಯವಸ್ಥಿತವಾಗಿ ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿದರು. ಯೋಜನೆಯನ್ನು ಮುಂದುವರಿಸಿಕೊಂಡು ಹೋಗಲು ಮತ್ತು ವಿಸ್ತರಿಸಲು ಯೋಜನೆಗೆ ಸಾಕಷ್ಟು ಹಣಕಾಸು ನೀಡಬೇಕು ಎಂದು ಒತ್ತಾಯಿಸಿದರು.


ಅಲ್ಲದೆ, ಸೂಕ್ತ ಸಮಯದಲ್ಲಿ ವೇತನ ವಿತರಣೆಯೊಂದಿಗೆ ಕನಿಷ್ಠ ವೇತನವನ್ನು ದಿನಕ್ಕೆ 400 ರೂ.ಗೆ ಹೆಚ್ಚಿಸಬೇಕು ಹಾಗೂ ಖಾತರಿಪಡಿಸಿದ ಕೆಲಸದ ದಿನಗಳ ಸಂಖ್ಯೆಯನ್ನು ವರ್ಷಕ್ಕೆ 100ರಿಂದ 150ಕ್ಕೆ ಹೆಚ್ಚಿಸಬೇಕು ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಗ್ರಹಿಸಿದರು.


"ಮನರೇಗಾ ಅಡಿಯಲ್ಲಿ ಗೌರವಯುತ ಉದ್ಯೋಗ ಮತ್ತು ಆರ್ಥಿಕ ಭದ್ರತೆಯನ್ನು ನೀಡಲು ಈ ಕ್ರಮಗಳು ಅತ್ಯಗತ್ಯ" ಎಂದು ಅವರು ಹೇಳಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ