ನವದೆಹಲಿ, ಜೂನ್ 20: ಭಾರತದಲ್ಲಿ ಬಹಳ ವೇಗವಾಗಿ ಇಂಧನ ಉತ್ಪಾದನೆ ಸಾಮರ್ಥ್ಯ ಹೆಚ್ಚಳ ಆಗುತ್ತಿದೆ. ಅಂತಾರಾಷ್ಟ್ರೀಯ ಇಂಧನ ಏಜೆನ್ಸಿ ಪ್ರಕಾರ ಕಳೆದ ಐದು ವರ್ಷದಲ್ಲಿ ಇಂಧನ ಉತ್ಪಾದನಾ ಸಾಮರ್ಥ್ಯ ಹೆಚ್ಚಳದಲ್ಲಿ ಜಾಗತಿಕವಾಗಿ
ಭಾರತ ಮೂರನೇ ಸ್ಥಾನ ಪಡೆದಿದೆ. ಚೀನಾ ಮತ್ತು ಅಮೆರಿಕ ಈ ಅವಧಿಯಲ್ಲಿ ಅತಿಹೆಚ್ಚು ಇಂಧನ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡಿವೆ. ಇವೆರಡು ದೇಶಗಳು ಒಟ್ಟಾರೆ ಇಂಧನ ಉತ್ಪಾದನಾ ಸಾಮರ್ಥ್ಯದಲ್ಲಿ ಮೊದಲೆರಡು ಸ್ಥಾನದಲ್ಲಿವೆ. ಭಾರತ ಮೂರನೇ ಸ್ಥಾನದಲ್ಲಿದೆ. ಇಂಧನ ಸಾಮರ್ಥ್ಯ ಹೆಚ್ಚಳದಲ್ಲೂ ಭಾರತ ತನ್ನ ಸ್ಥಾನ ಉಳಿಸಿಕೊಂಡಿದೆ.
ಭಾರತದಲ್ಲಿ ಕಳೆದ ಐದು ವರ್ಷದಲ್ಲಿ ಎಷ್ಟು ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಏರಿಕೆ ಆಗಿದೆ ಎನ್ನುವ ಮಾಹಿತಿಯನ್ನು ಐಇಎ ತನ್ನ ವರದಿಯಲ್ಲಿ ನೀಡಿಲ್ಲ. ಆದರೆ, ಭಾರತದಲ್ಲಿ ಇಂಧನ ಅಥವಾ ವಿದ್ಯುತ್ಗೆ ಬೇಡಿಕೆ ಹೆಚ್ಚುತ್ತಿರುವುದನ್ನು ಇದು ಗುರುತಿಸಿದೆ.
ಕಳೆದ ಐದು ವರ್ಷದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿರುವ ದೇಶಗಳ ಸಾಲಿನಲ್ಲಿ ಭಾರತ 3ನೇ ಸ್ಥಾನ ಪಡೆದಿದೆ. ಚೀನಾ, ಅಮೆರಿಕ ನಂತರ ಭಾರತವು ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ಅತಿ ಹೆಚ್ಚಳ ಕಂಡಿದೆ ಎಂದು ಐಇಎ ಹೇಳಿದೆ. ಭಾರತದಲ್ಲಿ ಕಮರ್ಷಿಯಲ್ ಮತ್ತು ರೆಸಿಡೆನ್ಷಿಯಲ್ ಸ್ಥಳ, ಎಸಿ, ಗೃಹೋಪಕರಣ, ಕೈಗಾರಿಕೆಗಳು ವಿದ್ಯುತ್ಗೆ ಬೇಡಿಕೆ ಹೆಚ್ಚಿಸಿವೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.