ಇಂಡಿ: ರಾಜ್ಯ ಚುನಾವಣಾ ಆಯೋಗದ ವತಿಯಿಂದ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ ೨೭ರಂದು ಪ್ರಕಟಿಸಲಾಗಿದ್ದು, ೩೨-ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨,೨೯,೪೭೯ ಮತದಾರರು ಇದ್ದಾರೆ ಎಂದು ಚುನಾವಣಾಧಿಕಾರಿಗಳು ಹಾಗೂ ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದ್ದಾರೆ.
೨೦೨೬ರ ಅಕ್ಟೋಬರ್ ೨೭ರಂದು ಪ್ರಕಟಿಸಲಾದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಕ್ಷೇತ್ರದಲ್ಲಿ ೧,೧೯,೦೧೯ ಪುರು? ಮತದಾರರು, ೧,೧೦,೪೩೮ ಮಹಿಳಾ ಮತದಾರರು ಹಾಗೂ ೨೨ ತೃತೀಯ ಲಿಂಗದ ಮತದಾರರು ಇದ್ದಾರೆ. ಈ ಮೂಲಕ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ ೨,೨೯,೪೭೯ಕ್ಕೆ ತಲುಪಿದೆ.
ಮತದಾರರ ವಿಶೇ? ಸಮಗ್ರ ಪರಿ?ರಣೆ-೨೦೨೬ರ ಪ್ರಕ್ರಿಯೆಯಡಿ ಆಗಸ್ಟ್ ೨೪ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಕರಡು ಪಟ್ಟಿ ಪ್ರಕಟಿಸಿದ ನಂತರ ಆಗಸ್ಟ್ ೨೪ರಿಂದ ಅಕ್ಟೋಬರ್ ೨೨ರವರೆಗೆ ಸಾರ್ವಜನಿಕರಿಂದ ಸ್ವೀಕರಿಸಲಾದ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ಕೈಗೊಂಡ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಆನ್‌ಲೈನ್‌ನಲ್ಲಿ ಪಟ್ಟಿ ವೀಕ್ಷಣೆಗೆ ಅವಕಾಶ
ಸಾರ್ವಜನಿಕರು ಚುನಾವಣಾ ಆಯೋಗದ ಅಧಿಕೃತ ಜಾಲತಾಣ voಣeಡಿs.eಛಿi.gov.iಟಿ ಹಾಗೂ ಚುನಾವಣಾ ಆಯೋಗದ ಇಅIಓಇಖಿ ಮೊಬೈಲ್ ಅಪ್ಲಿಕೇಶನ್ ಮೂಲಕ ಅಂತಿಮ ಮತದಾರರ ಪಟ್ಟಿಯನ್ನು ವೀಕ್ಷಿಸಬಹುದು. ಅಲ್ಲದೆ, ವಿಜಯಪುರ ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್ viರಿಚಿಥಿಚಿಠಿuಡಿಚಿ.ಟಿiಛಿ.iಟಿ ಮೂಲಕವೂ ಮತದಾರರ ಪಟ್ಟಿಯನ್ನು ಪರಿಶೀಲಿಸಬಹುದಾಗಿದೆ.
ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಮತದಾರರ ಪಟ್ಟಿ ಪರಿ?ರಣೆ ಪ್ರಕ್ರಿಯೆ ನಿರಂತರವಾಗಿ ನಡೆಯುವುದರಿಂದ, ಅರ್ಹ ನಾಗರಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ಹಾಗೂ ಅಗತ್ಯ ತಿದ್ದುಪಡಿಗಳನ್ನು ಮಾಡಿಸಲು ನಿಯಮಾನುಸಾರ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಮತದಾರರ ಸೇವಾ ಪೋರ್ಟಲ್, ಇಅIಓಇಖಿ ಮೊಬೈಲ್ ಅಪ್ಲಿಕೇಶನ್ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಲ್ಲದೆ, ಸಹಾಯಕ ಮತದಾರ ನೋಂದಣಾಧಿಕಾರಿ ಮತ್ತು ಮತದಾರ ನೋಂದಣಾಧಿಕಾರಿಗಳ ಕಚೇರಿಗಳನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.