LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಇಂಡಿ: ಹಿರೇಮಸಳಿ ಸರ್ಕಾರಿ ಉರ್ದು ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಉಚಿತ ಸ್ಕಾರ್ಫ್ ವಿತರಣೆ; ಹೊಸೂರು ಕುಟುಂಬದ ಶೈಕ್ಷಣಿಕ ಕಾಳಜಿಗೆ ಶ್ಲಾಘನೆ

ಬೆಳಗಾವಿ ಜಿಲ್ಲೆಯ ಕಾಕತಿಯ ಶ್ರೀಮತಿ ಖಾತುನಬಿ ಹೊಸೂರು ಅವರ ಉದಾರ ದೇಣಿಗೆಯಿಂದ ನೆರವೇರಿದ ಕಾರ್ಯಕ್ರಮ; ಗ್ರಾಮೀಣ ಹೆಣ್ಣುಮಕ್ಕಳ ಶಿಕ್ಷಣಕ್ಕೆ ನೈತಿಕ ಬೆಂಬಲ.

ಇಂಡಿ. ತಾಲೂಕಿನ ಹಿರೇಮಸಳಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಎಲ್ಲಾ ವಿದ್ಯಾರ್ಥಿನಿಯರಿಗೆ ಉಚಿತ ಸ್ಕಾರ್ಫ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಬೆಳಗಾವಿ ಜಿಲ್ಲೆಯ ಕಾಕತಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶ್ರೀಮತಿ ಖಾತುನಬಿ ಮುಲ್ಕಾಸಾಬ ಹೊಸೂರು ಅವರ ದೇಣಿಗೆಯೊಂದಿಗೆ ಅರ್ಥಪೂರ್ಣ ಸೇವಾ ಕಾರ್ಯವನ್ನು ನೆರವೇರಿಸಲಾಯಿತು.

  ಸಂಧರ್ಭದಲ್ಲಿ  ಶಾಲೆಯ ಮುಖ್ಯಗುರುಗಳಾದ  ಶಾಕೀರ ಪಠಾಣ ಮಾತನಾಡಿ, ಹೊಸೂರು ಕುಟುಂಬವು ಸದಾ ಸಾಮಾಜಿಕ ಹಾಗೂ ಶೈಕ್ಷಣಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿರುತ್ತದೆ. ಮನೆತನದಿಂದ ಈಗಾಗಲೇ ಐದು ಜನರು ಸರ್ಕಾರಿ ಶಿಕ್ಷಕರಾಗಿ ಸಮಾಜಕ್ಕೆ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ಸಂಗತಿ. ಶೈಕ್ಷಣಿಕ ಕಾಳಜಿಯಿಟ್ಟುಕೊಂಡು ನಮ್ಮ ಶಾಲೆಯ ಹೆಣ್ಣುಮಕ್ಕಳಿಗೆ ಸ್ಕಾರ್ಫ್ ಕೊಡುಗೆಯಾಗಿ ನೀಡಿದ ಅವರ ಉದಾರ ಮನಸ್ಸು ಮತ್ತು ಸೇವಾ ಗುಣ ನಿಜಕ್ಕೂ ಶ್ಲಾಘನೀಯ," ಎಂದು ಧನ್ಯವಾದ ಅರ್ಪಿಸಿದರು.

ಶಾಲೆಯ ಸಹ ಶಿಕ್ಷಕ ಹಾಗೂ ನೌಕರರ ಸಂಘದ ಉಪಾಧ್ಯಕ್ಷರಾದ  ಅಬುತಾಲಿಬ ಹೊಸೂರು, ಹಾಗೂ ಸಹ ಶಿಕ್ಷಕ-ಶಿಕ್ಷಕಿಯರು ವಿದ್ಯಾರ್ಥಿನಿಯರಿಗೆ ಸ್ಕಾರ್ಫ್ಗಳನ್ನು ವಿತರಿಸಿದರು.

ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ  ಬಶೀರ ಮುಲ್ಲಾ, ಶಾಲೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

ಸತ್ಕಾರ್ಯವನ್ನು ಮಾಡಿದ ಹೊಸೂರು ಕುಟುಂಬಕ್ಕೆ ಅಲ್ಲಾಹನು ಉತ್ತಮ ಆಯುಷ್ಯ, ಆರೋಗ್ಯ, ನೆಮ್ಮದಿ ಹಾಗೂ ಯಶಸ್ಸು ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಶ್ರೀ ವರದ ಶಂಕರ ಪೂಜೆ ಮತ್ತು ಮಹಾಪ್ರಸಾದ**ರೈತರಿಂದ ಮತ್ತು ಬಿಜೆಪಿಯಿಂದ  ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ. ತನವ್ ಮೋಹನ್ ಗೆ ವರ್ಷದ ಕನ್ನಡಿಗ ಪ್ರಶಸ್ತಿರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪಿ.ಟಿ. ಪರಮೇಶ್ವರ ನಾಯ್ಕ ಪ್ರವಾಸಸಮಾಜ ಸಂಘಟನೆಯಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯ-ಪ್ರೊ ಮಿಥುನ ಅಂಕಲಿ ಅಭಿಮತಬಳ್ಳಾರಿ: ಕಂಪ್ಲಿ ಮತ್ತು ಕುಡುತಿನಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ - ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಮಾದಕ ವ್ಯಸನಮುಕ್ತ ಸಮಾಜದಿಂದ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ: ಡಾ. ವೀರೇಂದ್ರ ಕುಮಾರ್ ಕರೆಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲಬರ ಪೀಡಿತ ತಾಲೂಕು ಘೋಷಣೆ ಶೇ.೨೦೦ ಖಚಿತ-ಶಾಸಕ ನಾಡಗೌಡ