Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಕುರಿತು ಸ್ವತಂತ್ರ ತನಿಖೆ ಮಾಡಿ : ಸಿದ್ದೇಶ್ ಊಳೂರು ಆಗ್ರಹ

ಬಳ್ಳಾರಿ, ಜೂ.10.: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಗೆಜೆಟೆಡ್ ಪ್ರೋಬೇಷನರ್ ಗ್ರೂಪ್-ಎ ಹಾಗೂ ಗ್ರೂಪ್-ಬಿ ವೃಂದದ 384 ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ, ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತ ನಡೆದಿದೆ ಎಂದು ಆರೋಪಿಸಿ ಸಾಮಾಜಿಕ ಹೋರಾಟಗಾರ ಸಿದ್ದೇಶ್ ಊಳೂರು ಸ್ವತಂತ್ರ ತನಿಖೆಗೆ ಆಗ್ರಹಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕೊರತೆಯಿದ್ದು, ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ ಎಂದು ದೂರಿದರು. ಈ ನೇಮಕಾತಿಯಲ್ಲಿ ಪ್ರಭಾವಿ ರಾಜಕಾರಣಿಗಳು, ಉನ್ನತ ಅಧಿಕಾರಿಗಳು ಹಾಗೂ ಅವರ ಸಂಬಂಧಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಪ್ರಕ್ರಿಯೆ ನಡೆದಿರುವ ಅನುಮಾನಗಳಿವೆ ಎಂದು ಆರೋಪಿಸಿದರು.
ನೇಮಕಾತಿಗೆ ಸಂಬಂಧಿಸಿದಂತೆ ಭಾರಿ ಪ್ರಮಾಣದ ಹಣದ ವ್ಯವಹಾರ ನಡೆದಿರುವ ಮಾಹಿತಿ ತಮ್ಮ ಗಮನಕ್ಕೆ ಬಂದಿದ್ದು, ಗ್ರೂಪ್-ಎ ಮತ್ತು ಗ್ರೂಪ್-ಬಿ ಹುದ್ದೆಗಳಿಗಾಗಿ ಕೋಟ್ಯಂತರ ರೂಪಾಯಿ ಲಂಚದ ವ್ಯವಹಾರ ನಡೆದಿರುವ ಶಂಕೆ ವ್ಯಕ್ತಪಡಿಸಿದರು. ಈ ಹಗರಣದಿಂದ ರಾಜ್ಯದ ಪ್ರತಿಭಾವಂತ ಅಭ್ಯರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಆಡಳಿತ ವ್ಯವಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆ ಕುಗ್ಗುವಂತಾಗಿದೆ ಎಂದು ಹೇಳಿದರು.
ಈ ಪ್ರಕರಣದ ಕುರಿತು ಸರ್ಕಾರವು ಸ್ವತಂತ್ರ ತನಿಖಾ ಸಂಸ್ಥೆಗಳಿಗೆ ವಹಿಸದೆ, ಕೆಪಿಎಸ್‌ಸಿ ಅಧಿಕಾರಿಗಳಿಂದಲೇ ಆಂತರಿಕ ತನಿಖೆ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಆದ್ದರಿಂದ ಈ ನೇಮಕಾತಿ ಹಗರಣವನ್ನು ಸಿಬಿಐ, ಇಡಿ ಅಥವಾ ನ್ಯಾಯಾಂಗ ತನಿಖೆಗೆ ಒಪ್ಪಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹಾಗೂ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.
 ಈ ಸಂದರ್ಭದಲ್ಲಿ ಮುಖಂಡರುಗಳಾದ ಮಲ್ಲಪ್ಪ ಉಪ್ಪಾರ್, ಕಂಡಕ್ಟರ್ ಪಂಪಾಪತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ನಡೆದ ಮಧ್ಯಸ್ಥಿಕೆ ಕುರಿತು ಕಾರ್ಯಕ್ರಮ ದೈವಜ್ಞ ಜ್ಯುವೆಲ್ಲರಿ ಅಸೋಸಿಯೇಶನ್ ವತಿಯಿಂದ  ಗೌರವಾನ್ವಿತ ಜಿಲ್ಲಾಧಿಕಾರಿಗಳಿಗೆ ಕೃತಜ್ಞತಾ ಭೇಟಿಅಳಗವಾಡಿ ಬೀರೇಶ್ವರ ಸಕ್ಕರೆ ಕಾರ್ಖಾನೆಗೆ ಬೀಗ ಜಡಿದು ಪ್ರತಿಭಟನೆ; ಅಹೋರಾತ್ರಿ ಧರಣಿ ಮುಂದುವರಿಕೆದೇಶದ ಪ್ರಗತಿಗೆ ವಿಶ್ವಾಸಾರ್ಹ ಅಂಕಿಅAಶಗಳ ಕೊಡುಗೆ ಅಪಾರ: ಹರೀಶ್ವರನ್.ಕೆನಾಳಿನ ಪೀಳಿಗೆಗೆ, ಇಂದಿನ ಬದಲಾವಣೆಗಾಗಿ ನೈಸರ್ಗಿಕ ಕೃಷಿಯತ್ತ ಮುಖ ಮಾಡಿ: ಮಂಜುನಾಥ್ಕಾಣೆಯಾದ ಯುವಕನ ಪತ್ತೆಗೆ ಮನವಿಬಳ್ಳಾರಿಯಲ್ಲಿ ರಾಷ್ಟಿçÃಯ ಶಸ್ತçಚಿಕಿತ್ಸಕರ ಸಾಪ್ತಾಹಿಕ ಆಚರಣೆ: ವೈದ್ಯಕೀಯ ವಿದ್ಯಾರ್ಥಿಗಳಿಂದ ಹೃದಯದ ಆರೋಗ್ಯ ಜಾಗೃತಿ ಬೀದಿ ನಾಟಕ ಪ್ರದರ್ಶನಕೆಪಿಎಸ್‌ಸಿ ನೇಮಕಾತಿ ಅಕ್ರಮದ ಕುರಿತು ಸ್ವತಂತ್ರ ತನಿಖೆ ಮಾಡಿ : ಸಿದ್ದೇಶ್ ಊಳೂರು ಆಗ್ರಹನಗರದ ಪ್ರಮುಖ ರಸ್ತೆಗೆ ಮುಂಡ್ಲೂರು ನರಸಿಂಹಪ್ಪ ರಸ್ತೆ ಎಂದು ನಾಮಕರಣ ಭೂ ಸಂತ್ರಸ್ತ ರೈತರಿಗೆ ನ್ಯಾಯಯುತ ಪರಿಹಾರಕ್ಕೆ ಆಗ್ರಸಿ ಜೂನ್ 18ರಂದು ಬಳ್ಳಾರಿ ಬಂದ್ ಗೆ  ಕರೆ