Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Business News

ಮತ್ತೊಂದು ಇತಿಹಾಸ ಸೃಷ್ಟಿಸಿದ ಭಾರತ

ಬ್ಲೂಬರ್ಡ್​ ಬ್ಲಾಕ್-2 ಇಂಟರ್ನೆಟ್ ಉಪಗ್ರಹ ಯಶಸ್ವಿ ಉಡಾವಣೆ

ಅಮೆರಿಕಾದ ಬ್ಲ್ಯೂಬರ್ಡ್ ಬ್ಲ್ಯಾಕ್-2 ಉಪಗ್ರಹ

ಬಾಹ್ಯಾಕಾಶದಲ್ಲಿ ISRO ಮತ್ತೊಂದು ಐತಿಹಾಸಿಕ ಸಾಧನೆ..!

ಬರೋಬ್ಬರಿ 6,500 ಕೆಜಿ ತೂಕ ಹೊಂದಿರುವ  ಉಪಗ್ರಹ

ಎಲ್‌ವಿಎಂ3 ರಾಕೆಟ್‌ ಒಟ್ಟು ಎಂಟು ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಶ್ರೀಹರಿಕೋಟಾ ಡಿ., ೨೪- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಬಾಹ್ಯಾಕಾಶದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಬೃಹತ್‌ ತೂಕದ ಅಮೆರಿಕಾದ ಬ್ಲ್ಯೂಬರ್ಡ್ ಬ್ಲ್ಯಾಕ್-2 ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸೂವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದೆ.

ಇಸ್ರೋ ಇಂದು (ಡಿಸೆಂಬರ್ 24) ಬೆಳಿಗ್ಗೆ 8.55ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದ 2ನೇ ಲಾಂಚ್ ಪ್ಯಾಡ್‌ನಿಂದ 'ಬ್ಲೂಬರ್ಡ್ ಬ್ಲಾಕ್-2' ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿತು.

LVM3-M6 ಬ್ಲೂಬರ್ಡ್ ಬ್ಲಾಕ್-2 ಉಪಗ್ರಹ ಉಡಾವಣೆಯಾದ ಸುಮಾರು 15 ನಿಮಿಷಗಳ ನಂತರ ಕೆಳ ಭೂಮಿಯ ಕಕ್ಷೆಗೆ ಸೇರಿಸಿ ತನ್ನ ಕಾರ್ಯಾಚರಣೆ ಯಶಸ್ವಿಯಾಗಿ ಪೂರ್ಣಗೊಳಿಸಿತು.



ಇದು ಭೂ ಕಕ್ಷೆಯಲ್ಲಿ ನಿಯೋಜಿಸಲಾದ ಅತಿದೊಡ್ಡ ವಾಣಿಜ್ಯ ಸಂವಹನ ಉಪಗ್ರಹವಾಗಿದೆ. ಅಮೆರಿಕದ ಎಎಸ್‌ಟಿ ಸ್ಪೇಸ್‌ಮೊಬೈಲ್ ಅಭಿವೃದ್ಧಿಪಡಿಸಿದ ಬ್ಲೂಬರ್ಡ್ ಬ್ಲಾಕ್-2 ಉಪಗ್ರಹವು ಭಾರತೀಯ ನೆಲದಿಂದ LVM3 ನಿಂದ ಉಡಾವಣೆ ಮಾಡಲಾದ ಅತ್ಯಂತ ಭಾರವಾದ ಪೇಲೋಡ್ ಆಗಿದೆ. ಇದು ಮುಂದಿನ ಪೀಳಿಗೆಯ ಬ್ಲೂಬರ್ಡ್ ಬ್ಲಾಕ್-2 ಸಂವಹನ ಉಪಗ್ರಹದ ಭಾಗವಾಗಿದೆ. ಪ್ರಮಾಣಿತ ಮೊಬೈಲ್ ಸ್ಮಾರ್ಟ್‌ಫೋನ್‌ಗಳಿಗೆ ನೇರವಾಗಿ ಬಾಹ್ಯಾಕಾಶ ಆಧಾರಿತ ಸೆಲ್ಯುಲಾರ್ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ಒದಗಿಸಲು ವಿನ್ಯಾಸಗೊಳಿಸಲಾಗಿರುತ್ತದೆ..

ಬ್ಲೂಬರ್ಡ್ ಬ್ಲಾಕ್-2 ಮಿಷನ್ ಜಾಗತಿಕ LEO ಸಮೂಹದ ಭಾಗವಾಗಿದೆ. ಇದು ಉಪಗ್ರಹದ ಮೂಲಕ ನೇರ-ಮೊಬೈಲ್ ಸಂಪರ್ಕವನ್ನು ಒದಗಿಸುತ್ತದೆ. ಈ ಸಮೂಹವು 4G ಮತ್ತು 5G ಧ್ವನಿ ಮತ್ತು ವೀಡಿಯೊ ಕರೆಗಳು, ಪಠ್ಯಗಳು, ಸ್ಟ್ರೀಮಿಂಗ್ ಮತ್ತು ಡೇಟಾವನ್ನು ಎಲ್ಲರಿಗೂ, ಎಲ್ಲೆಡೆ, ಎಲ್ಲಾ ಸಮಯದಲ್ಲೂ ಸಕ್ರಿಯಗೊಳಿಸುತ್ತದೆ.

ಇದು 223m ಹಂತದ ಶ್ರೇಣಿಯನ್ನು ಹೊಂದಿದೆ, ಇದು ಭೂಮಿಯ ಕೆಳ ಕಕ್ಷೆಗೆ ನಿಯೋಜಿಸಲಾದ ಅತಿದೊಡ್ಡ ವಾಣಿಜ್ಯ ಸಂವಹನ ಉಪಗ್ರಹವಾಗಿದೆ ಎಂದು ಇಸ್ರೋ ಮಾಹಿತಿ ನೀಡಿದೆ.

ಬ್ಲೂಬರ್ಡ್-6‌ ಉಪಗ್ರಹ ಇಲ್ಲಿಯ ತನಕ ಭಾರತೀಯ ರಾಕೆಟ್‌ ಬಾಹ್ಯಾಕಾಶಕ್ಕೆ ಒಯ್ದಿರುವ ಅತ್ಯಂತ ತೂಕದ ಉಪಗ್ರಹ ಎಂಬ ಕೀರ್ತಿಗೆ ಪಾತ್ರವಾಗಿದೆ. ಎಲ್‌ವಿಎಂ3 ರಾಕೆಟ್‌ ಒಟ್ಟು ಎಂಟು ಯೋಜನೆಗಳನ್ನು ಈಗಾಗಲೇ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಪ್ರಸ್ತುತ ಉಡಾವಣಾ ಯೋಜನೆ ಇಸ್ರೋದ ವಾಣಿಜ್ಯಿಕ ಅಂಗವಾದ ನ್ಯೂಸ್ಪೇಸ್‌ ಇಂಡಿಯಾ ಲಿಮಿಟೆಡ್‌ (ಎನ್‌ಎಸ್‌ಐಎಲ್)‌ ಮತ್ತು ಅಮೆರಿಕಾ ಮೂಲದ ಎಎಸ್‌ಟಿ ಸ್ಪೇಸ್‌ ಮೊಬೈಲ್‌ ಸಂಸ್ಥೆಗಳ ನಡುವೆ ನಡೆದಿರುವ ವಾಣಿಜ್ಯಿಕ ಒಪ್ಪಂದದ ಭಾಗವಾಗಿದೆ. ಒಂದು ಉಡಾವಣಾ ಸೇವೆ ಒದಗಿಸುವ ಸಂಸ್ಥೆಯಾಗಿ ಇಸ್ರೋ ವಿದೇಶೀ ಉಪಗ್ರಹಗಳನ್ನು ಬಾಹ್ಯಾಕಾಶಕ್ಕೆ ಉಡಾವಣೆಗೊಳಿಸಿ ಆದಾಯ ಸಂಪಾದಿಸುತ್ತದೆ.

ಎನ್‌ಎಸ್‌ಐಎಲ್‌ ಮೂಲಕ ನಿರ್ವಹಿಸಲ್ಪಡುವ ಈ ವಾಣಿಜ್ಯಿಕ ಉಡಾವಣೆಗಳು ಒಂದು ರೀತಿ ಟ್ಯಾಕ್ಸಿ ಸೇವೆಯಂತೆ ಕಾರ್ಯಾಚರಿಸುತ್ತವೆ. ಇಲ್ಲಿ ಅಮೆರಿಕದ ಕಂಪನಿ ಪ್ರಯಾಣಿಕನಾಗಿದ್ದು, ಉಡಾವಣೆ ನಡೆಸಿಕೊಟ್ಟದ್ದಕ್ಕೆ ಭಾರತ ಸರ್ಕಾರಕ್ಕೆ ಹಣ ಪಾವತಿಸುತ್ತದೆ. ಎಲ್‌ವಿಎಂ3 ರಾಕೆಟ್‌ ಒಟ್ಟು ಎಂಟು ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅಷ್ಟೇ ಅಲ್ಲ ಇದು ಮೂರನೇ ವಾಣಿಜ್ಯ ಕಾರ್ಯಾಚರಣೆಯಾಗಿದೆ.

ಈ ಮೊದಲು ಉಪಗ್ರಹವನ್ನು ಡಿಸೆಂಬರ್‌ 15ರಂದು ಉಡಾವಣೆಗೊಳಿಸಲು ಉದ್ದೇಶಿಸಲಾಗಿತ್ತು. ಆದರೆ ಉಡಾವಣೆ ಮುಂದೂಡಲ್ಪಟ್ಟಿತು. ಇಸ್ರೋ ವಿಳಂಬಕ್ಕೆ ನಿರ್ದಿಷ್ಟ ಕಾರಣವನ್ನೇನೂ ತಿಳಿಸಿರಲಿಲ್ಲ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನು ಶಿಕ್ಷಣವು ನ್ಯಾಯಯುತ ಸಮಾಜ ನಿರ್ಮಾಣದ ಪ್ರಮುಖ ಸಾಧನ: ಹಿರಿಯ ನ್ಯಾಯವಾದಿ ಕೆ.ಎಲ್. ಪಾಟೀಲ’ನನ್ನ ದೇಹ, ನನ್ನ ಸುರಕ್ಷತೆ’ ಪರಿಕಲ್ಪನೆಯಡಿ ಮಕ್ಕಳಿಗೆ ಜಾಗೃತಿ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು "ಫಲಾಪೇಕ್ಷೆಯಿಲ್ಲದ ಕಾರ್ಯ ಶ್ಲಾಘನೀಯ" -ಶ್ರೀಗುರುಸಿದ್ದೇಶ್ವರ ಶ್ರೀದೇಶನೂರ ಬಂಗಲೆ ರಸ್ತೆ, ದೇವಸ್ಥಾನದ ಅಭಿವೃದ್ಧಿ ಆದಷ್ಟು ಬೇಗ  ಪ್ರಾರಂಭ : ಬಾಬಾಸಾಹೇಬ ಪಾಟೀಲ ಹತ್ತರಗಿ : ದೀಪ ಸಂಜೀವಿನಿ ಉತ್ಪನ್ನಗಳ ಮಳಿಗೆ ಉದ್ಘಾಟನೆ,"ನಾಡು ನುಡಿ, ಗಡಿ ವಿಚಾರದಲ್ಲಿ ಒಗ್ಗಟ್ಟಿನಿಂದ ಶ್ರಮಿಸಿ  / ನಾಡು ನುಡಿಯ ರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗ ಮುಂದಾಗಬೇಕು"  *ಶಾಲಾ ದಾಖಲಾತಿಯಲ್ಲಿ ಗಣನೀಯ ಏರಿಕೆ: ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು*ವಕೀಲರ ಸಂರಕ್ಷಣೆಯ ಕಾಯ್ದೆ ಪರಿಣಾಮಕಾರಿ ಜಾರಿಗೆ ಸವದತ್ತಿ ವಕೀಲರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಮನವಿ  ಇಂಡಿ: ಸಿದ್ದೇಶ್ವರ ಸ್ವಾಮೀಜಿ ಮಳಿಗೆಗಳ ಬಹಿರಂಗ ಹರಾಜು – ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆವಿದ್ಯುತ್‌ ಸಮಸ್ಯೆಗಳಿಗೆ ಶೀಘ್ರ ಪರಿಹರಿಸಲು ಆಗ್ರಹಿಸಿ ಅನಿರ್ದಿಷ್ಟ ಹೋರಾಟ