Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಗ್ರ ಕೃತ್ಯದ ಮೂಲಕ ಪಾಕ್‌ ಸಿಂಧೂ ಒಪ್ಪಂದ ಉಲ್ಲಂಘಿಸಿದೆ: ವಿಶ್ವಸಂಸ್ಥೆಯಲ್ಲಿ ಭಾರತ ಕೆಂಡ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಪಂಚ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಅದರಲ್ಲಿ ಪ್ರಮುಖ ಸಿಂಧೂ ನದಿ ನೀರನ್ನು ಪಾಕಿಸ್ತಾನ ಬಿಡುವುದನ್ನು ಸ್ಥಗಿತಗೊಳಿಸಿದ್ದು, ಇದೀಗ ಈ ಬಗ್ಗೆ ವಿಶ್ವಸಂಸ್ಥೆಯಲ್ಲಿಪಾಕ್ ತಕರಾರು ಎತ್ತಿದೆ. ಜತೆಗೆ ಭಾರತದ ನಿರ್ಧಾರವನ್ನು ಟೀಕಿಸಿದೆ. ಆದರೆ ಇದಕ್ಕೆ ಭಾರತ ಸರಿಯಾಗಿ ಉತ್ತರವನ್ನು ನೀಡಿದೆ. ಭಾರತ ಪಹಲ್ಗಾಮ್ ಭಯೋತ್ಪಾದಕ ದಾಳಿ ಮಾತ್ರವಲ್ಲದೆ ಅನೇಕ ಉದಾಹರಣೆಗಳನ್ನು ನೀಡಿ. ಹಾಗೂ ಭಯೋತ್ಪಾದನೆ ದಾಳಿ ಭಾರತದ ಜತೆಗೆ ಮಾಡಿಕೊಂಡ ಹಲವು ಒಪ್ಪಂದವನ್ನು ಉಲ್ಲಂಘನೆ ಮಾಡಿದೆ ಎಂದು ಭಾರತ ವಿಶ್ವಸಂಸ್ಥೆಯಲ್ಲಿ ತಿಳಿಸಿದೆ. 1960 ರ ನೀರು ಹಂಚಿಕೆ ಒಪ್ಪಂದವನ್ನು ಉಲ್ಲಂಘಿಸಿದ್ದು ಭಾರತವಲ್ಲ, ಪಾಕಿಸ್ತಾನ ಎಂದು ಹೇಳಿದೆ. ಸಿಂಧೂ ಜಲ ಒಪ್ಪಂದಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನಿ ನಿಯೋಗ ಅನೇಕ ತಪ್ಪು ಮಾಹಿತಿಯನ್ನು ಹರಡಿದೆ. ಪಾಕ್ ಮಾಡುತ್ತಿರುವ ಆರೋಪಗಳನ್ನು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಪರ್ವತನೇನಿ ಹರೀಶ್ ತಳ್ಳಿಹಾಕಿದ್ದಾರೆ.









ಭಾರತ ಸಿಂಧೂ ಒಪ್ಪಂದವನ್ನು ಮುರಿದಿಲ್ಲ, ಪಾಕ್ ಮಾಡುತ್ತಿರವ ಭಯೋತ್ಪಾದನ ದಾಳಿಯಿಂದ ಈ ಒಪ್ಪಂದವನ್ನು ಮುರಿದುಕೊಂಡಿದೆ. ಇತ್ತೀಚಿನ ಪಹಲ್ಗಾಮ್ ದಾಳಿಯು ಇತ್ತೀಚಿನ ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ. ಮತ್ತೆ ಮತ್ತೆ ಭಾರತದ ಮೇಲೆ ಗಡಿಯಾಚೆಗಿನ ಭಯೋತ್ಪಾದನೆ ದಾಳಿಯಿಂದ ಈ ಒಪ್ಪಂದವನ್ನು ಮುರಿದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಭಾರತವು 65 ವರ್ಷಗಳ ಹಿಂದೆ ಸಿಂಧೂ ನದಿ ಜಲ ಒಪ್ಪಂದವನ್ನು ಮಾಡಿಕೊಂಡಿತ್ತು. ಒಪ್ಪಂದದ ಪೀಠಿಕೆ ಹೇಳುವ ಪ್ರಕಾರ ಈ ಒಪ್ಪಂದವನ್ನು ಸದ್ಭಾವನೆ ಮತ್ತು ಸ್ನೇಹದ ಮನೋಭಾವಗಾಗಿ ಮಾಡಿಕೊಂಡಿತ್ತು. ಆರುವರೆ ದಶಕಗಳಲ್ಲಿ, ಪಾಕಿಸ್ತಾನವು ಭಾರತದ ಮೇಲೆ ಮೂರು ಯುದ್ಧಗಳು ಮತ್ತು ಸಾವಿರಾರು ಭಯೋತ್ಪಾದಕ ದಾಳಿಗಳನ್ನು ನಡೆಸುವ ಮೂಲಕ ಒಪ್ಪಂದದ ಮಹತ್ವವನ್ನು ಉಲ್ಲಂಘಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ