ಸಭೆಯಲ್ಲಿ ಭಾರತ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನವು ಗಡಿಯಾಚೆಗಿನ ಭಯೋತ್ಪಾದನೆಗೆ ತನ್ನ ಬೆಂಬಲವನ್ನು ಸಂಪೂರ್ಣವಾಗಿ ನಿಲ್ಲಿಸುವವರೆಗೆ 1960ರ ಸಿಂಧೂ ಜಲ ಒಪ್ಪಂದವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗುತ್ತದೆ. ಅಟ್ಟಾರಿ ಚೆಕ್ ಪೋಸ್ಟ್ ಮುಚ್ಚಲಾಗುವುದು, ಸಿಂಧೂ ಜಲ ಒಪ್ಪಂದವನ್ನು ತಕ್ಷಣವೇ ಸ್ಥಗಿತಗೊಳಿಸಲಾಗುವುದು ಎಂದು ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ. ಇಂದು ನಡೆದ ಸಭೆಯಲ್ಲಿ ಭಾರತ ಗಡಿಯಾಚೆಗಿನ ಭಯೋತ್ಪಾದನೆ ಕೊನೆಗೊಳಿಸಲು ಮತ್ತು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.