LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಇಂದಿರಾನಗರ ವಲಯ ಮಟ್ಟದ ಕ್ರೀಡಾಕೂಟ: ವಿದ್ಯಾರ್ಥಿಗಳ ಪ್ರತಿಭೆ ಅನಾವರಣ

ಬಳ್ಳಾರಿ, ಸೆ.03: ಶಾಲಾ ಶಿಕ್ಷಣ ಇಲಾಖೆ ಹಾಗೂ ಇಂದಿರಾನಗರ, ಪಾರ್ವತಿ ನಗರ ಮತ್ತು ಕೋಟೆ ಕ್ಲಸ್ಟರ್‌ಗಳ ಹಿರಿಯ ಪ್ರಾಥಮಿಕ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಇಂದಿರಾನಗರ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2026-27 ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟದಲ್ಲಿ 100, 400 ಮೀಟರ್ ಓಟ, ರಿಲೇ, ಖೋ-ಖೋ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್, ತಟ್ಟೆ ಎಸೆತ, ಗುಂಡು ಎಸೆತ ಹಾಗೂ ಲಾಂಗ್ ಜಂಪ್ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು. ವಲಯದ ವಿವಿಧ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಉತ್ಸಾಹದಿಂದ ಪಾಲ್ಗೊಂಡು ತಮ್ಮ ಕ್ರೀಡಾ ಪ್ರತಿಭೆ ಪ್ರದರ್ಶಿಸಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ ಬಹುಮಾನ ವಿತರಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ನಿಂಗಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೊಟ್ರೇಶ್, ಗೌರವಾಧ್ಯಕ್ಷ ಸಣ್ಣ ಮಾರೆಣ್ಣ, ಜಿಲ್ಲಾ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ, ತಾಲೂಕು ಪರಿವೀಕ್ಷಕ ಪದ್ಮಾರೆಡ್ಡಿ, ದೈಹಿಕ ಶಿಕ್ಷಕರ ಅಧ್ಯಕ್ಷ ವೀರನಗೌಡ, ಇಂದಿರಾನಗರ ವಲಯ ಕಾರ್ಯದರ್ಶಿ ಶಾಂತಕುಮಾರಿ, ತಾಲೂಕು ಪ್ರಾಥಮಿಕ ಶಿಕ್ಷಕ ತುಕಾರಾಂ, ತಾಲೂಕು ಕಾರ್ಯದರ್ಶಿ ಶಿವಶಂಕರ್, ಸಂಘಟನಾ ಕಾರ್ಯದರ್ಶಿ ಬಸವರಾಜ್, ಸಿಆರ್‌ಪಿ ಸಿದ್ದಪ್ಪ ಗೋನಾಳ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್