LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಿಎಂ ತವರಲ್ಲೇ ಅಮಾನವೀಯ ಘಟನೆ; ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಮೈಸೂರು, ಜನವರಿ 3: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ವರುಣಾ ವ್ಯಾಪ್ತಿಯಲ್ಲಿ ಬರುವ ಸಿದ್ದರಾಮಯ್ಯಹುಂಡಿ ಗ್ರಾಮದ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿರುವ ಘಟನೆ ವರದಿಯಾಗಿದೆ. ಗ್ರಾಮದ ಯಜಮಾನರು ದಲಿತ ಸಮುದಾಯದ ಕುಟುಂಬಕ್ಕೆ ಬಹಿಷ್ಕಾರ ಹಾಕಿದ್ದಾರೆ. ಸುರೇಶ್ ಎಂಬವರ ಕುಟುಂಬಕ್ಕೆ ಗ್ರಾಮದ ಯಜಮಾನರಾದ ಚಿಕ್ಕಂಡಯ್ಯ, ಬಸವಯ್ಯ, ಮೋಟ ಮಹದೇವಯ್ಯ, ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಮಹದೇವ್ ಬಹಿಷ್ಕಾರ ಹಾಕಿದ್ದಾರೆ.





ಆದರೆ, ನ್ಯಾಯ ಪಂಚಾಯಿತಿ ಬಗ್ಗೆ ತಗಾದೆ ತೆಗೆದಿದ್ದ ಸುರೇಶ್, ತಮಗೆ ಅನ್ಯಾಯವಾಗಿದ್ದರಿಂದ ದಂಡದ ಮೊತ್ತ ಪಾವತಿಸುವುದಿಲ್ಲ ಎಂದು ಹೇಳಿದ್ದರು. ಇದರಿಂದ ಕೆರಳಿದ ಯಜಮಾನರು, ನ್ಯಾಯ ಪಂಚಾಯಿತಿ ವಿಚಾರದಲ್ಲಿ ತಮಗೆ ಮುಜುಗರ ಆಗಿದೆ ಎಂದು ಸುರೇಶ್ ಮೇಲೆ ಸಿಟ್ಟಾಗಿದ್ದಾರೆ. ಅದೇ ಕೋಪದಲ್ಲಿ, ತಪ್ಪು ಕಾಣಿಕೆ ಕಟ್ಟುವವರೆಗೂ ತಮ್ಮ ಕುಲಕ್ಕೆ ಸೇರಿಸುವುದಿಲ್ಲ ಎಂದು ಬಹಿಷ್ಕಾರ ಹಾಕಿದ್ದಾರೆ.



ಸುರೇಶ್ ಹಾಗೂ ಅವರ ತಾಯಿ ಮಹದೇವಮ್ಮ ಇಬ್ಬರನ್ನು ಗ್ರಾಮಸ್ಥರು ಹೊರಗಿಟ್ಟಿದ್ದಾರೆ. ಹಬ್ಬ, ಸಾವು-ನೋವುಗಳ ಆಚರಣೆ ವಿಚಾರದಲ್ಲೂ ಬಹಿಷ್ಕಾರ ಹಾಕಲಾಗಿದೆ. ಈ ವಿಚಾರವಾಗಿ ಜಿಲ್ಲಾಧಿಕಾರಿ, ಪೊಲೀಸರು, ತಹಶೀಲ್ದಾರ್​ಗೆ ಈಗಾಗಲೇ ದೂರು ನೀಡಿದ್ದರೂ ಸಂತ್ರಸ್ತರಿಗೆ ನ್ಯಾಯ ಸಿಕ್ಕಿಲ್ಲ. ಸುರೇಶ್ ಕುಟುಂಬದ ಜೊತೆ ಯಾರೇ ಸಂಪರ್ಕಕ್ಕೆ ಬಂದರೂ 5,000 ರೂ. ದಂಡ ವಿಧಿಸಬೇಕು ಎಂದು ಗ್ರಾಮದ ಯಜಮಾನರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆ