Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸರ್ಕಾರದ ಹೊಣೆಗೇಡಿ ನಿರ್ಧಾರದಿಂದ ಅಮಾಯಕ ಯುವ ಜೀವಗಳು ಬಲಿ: ಬಿ.ವೈ ವಿಜಯೇಂದ್ರ

ಬೆಂಗಳೂರು: ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭ ಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ, ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ಈ ಸಂಬಂಧ ವಿಜಯೇಂದ್ರ ಪತ್ರ ಬರೆದಿದ್ದಾರೆ. ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭ ಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ನೀವು ಮತ್ತು ನಿಮ್ಮ ಸರ್ಕಾರ ತೆಗೆದುಕೊಂಡ ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ. ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ. ಕುಟುಂಬ ಬೆಳಗಬೇಕಿದ್ದ, ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ. ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ.

ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘಟನೆ ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ, ನಮ್ಮ ರಾಜ್ಯ ಅಸುರಕ್ಷತೆಯ ತಾಣ ಎಂಬ ಸಂದೇಶ ರವಾನೆಯಾಗಿದೆ. ಇಷ್ಟಾಗಿಯೂ ಸರ್ಕಾರಕ್ಕೂ ಈ ಘಟನೆಗೂ ಏನೇನೂ ಸಂಬಂಧವಿಲ್ಲ, ಸರ್ಕಾರ ಈ ಘಟನೆಯ ಜವಾಬ್ದಾರಿಯನ್ನು ಹೊರಲಾಗದು ಎಂಬ ನಿಮ್ಮ ಹೇಳಿಕೆ ಪಲಾಯನವಾದ ಹಾಗೂ ನಿರ್ಲಜ್ಜತನದ ಹೊಣೆಗೇಡಿತನವನ್ನು ಪ್ರತಿಬಿಂಬಿಸುತ್ತಿದೆ. ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಿಮ್ಮ ನಡೆ ಪರಂಪರೆಯ ಕರ್ನಾಟಕದ ನೈತಿಕ ರಾಜಕಾರಣವನ್ನು ಅವಮಾನಿಸುತ್ತಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ