Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ: ನೇಮಕಕ್ಕೆ ಒತ್ತಾಯ 






ಬಳ್ಳಾರಿ,ಸೆ.22:  ರಾಜ್ಯದಲ್ಲಿ ಸುಮಾರು 432 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ಇವುಗಳಲ್ಲಿ ಖಾಯಂ ಉಪನ್ಯಾಸಕರು 3000,  ಅತಿಥಿ ಉಪನ್ಯಾಸಕರು ಸುಮಾರು 10500 ಇದ್ದು, ಇದರಲ್ಲಿ ಯುಜಿಸಿ ಅರ್ಹತೆ ಪಡೆದವರು 5000 ಮತ್ತು 6000 ಯುಜಿಸಿ ಅರ್ಹತೆ ಇಲ್ಲದವರು ಇದ್ದಾರೆ. ರಾಜ್ಯದಲ್ಲಿ ಯುಜಿಸಿ ಮತ್ತು ನಾನ್ ಯುಜಿಸಿ ಎಂಬ ಒಡೆದು ಆಳುವ ನೀತಿಯನ್ನು ರಾಜ್ಯ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆ ಅನುಸರಿಸುತ್ತಿದೆ ಎಂದು ಸಂಘದ ರಾಜ್ಯ ಗೌರವಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಡಾ.ಟಿ.ದುರುಗಪ್ಪ ತಿಳಿಸಿದರು.


ನಗರದ ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅಧಿಕಾರ ಸಂಘ ಬಳ್ಳಾರಿ ಜಿಲ್ಲಾ ಘಟಕದಿಂದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಜಿಸಿ ಆರ್ಹತೆ ಹೊಂದಿದವರು ತಮ್ಮನ್ನು ಅತಿಥಿ ಉಪನ್ಯಾಸಕ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುವಂತೆ ಹೈಕೋರ್ಟ್‌ನಲ್ಲಿ ಉನ್ನತ ಶಿಕ್ಷಣ ಇಲಾಖೆಯ ವಿರುದ್ಧ ಅರ್ಜಿ ಸಲ್ಲಿಸಿ ಯುಜಿಸಿ ನಿಗದಿಪಡಿಸಿದ ಮಾನದಂಡಗಳಂತೆ ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಪೀಠದ ದ್ವಿದಸ್ಯ ಪೀಠ ಮತ್ತು ಏಕಸದಸ್ಯ ಪೀಠವು ಯುಜಿಸಿ ಮಾನದಂಡದಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಮಧ್ಯಂತರ ಆದೇಶವನ್ನು ನೀಡಿವೆ.


ಆದರೆ ಇದೇ ತಿಂಗಳು ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ  ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಹೈಕೋರ್ಟ್ ಪೀಠದಲ್ಲಿ ಯುಜಿಸಿ / ನಾನ್ ಯುಜಿಸಿ ಎಂಬ ಸಮಸ್ಯೆ ಇದೆ. ಇದು ಗೊಂದಲವಾಗಿದೆ. ವಿದ್ಯಾರ್ಥಿಗಳಿಗೆ ಪಾಠ ಪ್ರವಚನವಿಲ್ಲದೆ ತೊಂದರೆಯಾಗಿದೆ' ಎಂಬ ವಿಷಯ ಗೊತ್ತಿದೆ. ಆದರೆ ಸೆಪ್ಟೆಂಬರ್ 9 ರಂದು ಬರುವ ದ್ವಿಸದಸ್ಯ ಪೀಠದ ತೀರ್ಪಿನ ನಂತರ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಆದರೆ ತೀರ್ಪು ಬಂದು 13 ದಿನಗಳೇ ಕಳೆದಿದ್ದರೂ ಉನ್ನತ ಶಿಕ್ಷಣ ಸಚಿವರು ಯಾವುದೇ ತೀರ್ಮಾನವನ್ನು ಕೈಗೊಳ್ಳದೇ ಮೌನ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಇದರ ಪರಿಣಾಮ ರಾಜ್ಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲದೆ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳು, ಪಾಠ ಪ್ರಚವನಗಳು ನಡೆಯದೆ ಕುಂಠಿತಗೊಂಡಿವೆ. ಅತಿಥಿ ಉಪನ್ಯಾಸರಿಲ್ಲದೆ ಇರುವುದರಿಂದ ವಿದ್ಯಾರ್ಥಿಗಳು ಇತ್ತ ಖಾಸಗಿ ಕಾಲೇಜುಗಳಿಗೆ ಹೋಗಿ ಪ್ರವೇಶ ಪಡೆಯಲು ಅವರಲ್ಲಿ ಹಣಕಾಸಿನ ಕೊರತೆ ಇದೆ. ಪ್ರಸ್ತುತ ಖಾಸಗಿ ಕಾಲೇಜುಗಳಲ್ಲಿ ಮಾತ್ರ ಪಾಠ ಪ್ರವಚನಗಳು ನಡೆಯುತ್ತಿವೆ. ಇನ್ನೊಂದು ತಿಂಗಳಲ್ಲಿ ಎಲ್ಲಾ ವಿಶ್ವವಿದ್ಯಾಲಯಗಳು ಸೆಮಿಸ್ಟರ್ ಪರೀಕ್ಷೆಯನ್ನು ಘೋಷಣೆ ಮಾಡಲಿದ್ದು, ಇಲ್ಲಿ ಬರೀ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳೇ ಅಂಕಗಳನ್ನು ಪಡೆಯುವಲ್ಲಿ ಮೇಲುಗೈ ಸಾಧಿಸಲಿದ್ದಾರೆ. ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಬೋಧನೆಯಿಲ್ಲದೆ ಕಡಿಮೆ ಅಂಕಗಳನ್ನು ಪಡೆಯುವುದು ಅಥವಾ ಫೇಲ್ ಆದರೂ ಆಗಬಹುದು. ಈ ರೀತಿಯ ಶೈಕ್ಷಣಿಕ ಗುಣಮಟ್ಟಕ್ಕೆ ಒಡೆತ ಬೀಳಲು ಸಂಪೂರ್ಣವಾಗಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್ ಅವರೇ ನೇರ ಕಾರಣರಾಗುತ್ತಾರೆ ಎಂದರು.


ರಾಜ್ಯದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗಲಿ, ಮಾಜಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ, ಶಾಸಕರಾಗಲಿ, ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿ ಹೋದ ವಿಧಾನ

ಪರಿಷತ್ ಸದಸ್ಯರಾಗಲಿ ಚಕಾರವೆತ್ತುತ್ತಿಲ್ಲ. ಕಾಲೇಜು ಅಭಿವೃದ್ಧಿ ಸಮಿತಿಗೆ ಆಯಾ ಭಾಗದ ಶಾಸಕರೇ ಅಧ್ಯಕ್ಷರಿರುತ್ತಾರೆ. ಆದರೆ ಆ ಶಾಸಕರ್ಯಾರು ಈ ಬಗ್ಗೆ ಗಮನಹರಿಸದೆ ಇರುವುದು ಅವರ ದಿವ್ಯ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಎಂದರು.


ಇನ್ನೊಂದು ಹಂತದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಲ್ಪಸಂಖ್ಯಾತ, ಹಿಂದುಳಿದ, ದಲಿತ, ಗ್ರಾಮೀಣ ಬಡವಿದ್ಯಾರ್ಥಿಗಳು ಓದುತ್ತಿದ್ದಾರೆ. ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ಎ.ಐ.ಡಿ.ಎಸ್.ಒ. ವಿದ್ಯಾರ್ಥಿ ಸಂಘಟನೆಗಳು ವಿದ್ಯಾರ್ಥಿಗಳ ಪರವಾಗಿ ಜಿಲ್ಲಾಧಿಕಾರಿಗಳಿಗೆ, ತಹಶೀಲ್ದಾರರುಗಳಿಗೆ ಮನವಿ ಪತ್ರವನ್ನು ಸಲ್ಲಿಸಿ ಒತ್ತಾಯ ಮಾಡಿದ್ದರೂ ರಾಜ್ಯ ಸರ್ಕಾರವು ತಲೆಕೆಡಿಸಿಕೊಳ್ಳದೇ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವ ಪ್ರಕ್ರಿಯೆಗೆ ಮುಂದಾಗುತ್ತಿಲ್ಲ .


ರಾಜ್ಯದ ಉನ್ನತ ಶಿಕ್ಷಣ ಸಚಿವರು   ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆದಷ್ಟು ಬೇಗನೆ ಸಮರೋಪಾದಿಯಲ್ಲಿ ಅತಿಥಿ ಉಪನ್ಯಾಸಕರ ನೇಮಕವನ್ನು ಮಾಡಿಕೊಳ್ಳಬೇಕು. ಯುಜಿಸಿ/ ನಾನ್ ಯುಜಿಸಿ ಎಂದು ಭೇದ ಭಾವ ಮಾಡದೆ 15-20 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕಡಿಮೆ ಗೌರವಧನಕ್ಕೆ ಬೋಧನೆ ಮಾಡಿದ ಅನುಭವೀ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಯಾವ ರಾಜ್ಯದಲ್ಲಿಯೂ ಇಲ್ಲದ ಯುಜಿಸಿ / ನಾನ್ ಯುಜಿಸಿ ಎಂಬ ಭೇದಭಾವ ಕರ್ನಾಟಕದಲ್ಲೇಕೆ? ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇದು ಕೇವಲ ಖಾಯಂ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಯಲ್ಲಿ ಮಾಡಿಕೊಳ್ಳಲಿ. ಅದು ಬಿಟ್ಟು ಗುತ್ತಿಗೆ ಅಥವಾ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳುವಾಗ ಈ ನಿಯಮಗಳನ್ನು ಅನ್ವಯಿಸಬಾರದು.


ರಾಜ್ಯ ಸರ್ಕಾರದ ಇಂತಹ ವಿಳಂಬ ನೀತಿ, ನಿರ್ಲಕ್ಷ್ಯ ಧೋರಣೆಗೆ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟ ಅನುಭವಿಸುತ್ತಾ ನಲುಗಿ ಹೋಗಿದ್ದಾರೆ. ಎರಡು ತಿಂಗಳಿನಿಂದ ಗೌರವಧನವಿಲ್ಲದೆ ಆರ್ಥಿಕವಾಗಿ ಕುಗ್ಗಿ ಹೋಗಿದ್ದಾರೆ. ಮನೆ ಬಾಡಿಗೆ, ಮಕ್ಕಳ ಶಾಲಾ ಶುಲ್ಕ, ರೇಷನ್ ತರುವುದು. ವಯೋವೃದ್ಧರಾದ ತಂದೆ ತಾಯಿಗಳಿಗೆ ಚಿಕಿತ್ಸೆ ಕೊಡಿಸುವುದು, ಔಷಧಿ ತರುವುದು ಕಷ್ಟಕರವಾಗಿದೆ.

ಸರಳಾದೇವಿ ಕಾಲೇಜಿನಲ್ಲೇ ಬೈಪಾಸ್ ಹಾರ್ಟ್ ಸರ್ಜರಿಗೆ ಒಳಗಾಗಿರುವ ಡಾ.ಕೆ.ಬಸಪ್ಪ ಅವರಿಗೆ ತಿಂಗಳಿಗೆ ಔಷಧಿಯ ಖರ್ಚು ಸುಮಾರು 8 ಸಾವಿರ ರೂಪಾಯಿಗಳಾಗುತ್ತದೆ. ಇದೇ ತರಹ ರಾಜ್ಯದಲ್ಲಿ ಆನೇಕ ಅತಿಥಿ ಉಪನ್ಯಾಸಕರು ಅನೇಕ ರೀತಿಯ ಆರ್ಥಿಕ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ ಎಂದರು.



ಪತ್ರಿಕಾಗೋಷ್ಠಿಯಲ್ಲಿ  ಡಾ.ಹನುಮೇಶ ಜೋಳದರಾಶಿ. ಡಾ.ಕೆ.ಬಸಪ್ಪ, ರುದ್ರಮುನಿ, ಗೋವಿಂದ, ಮಾರಪ್ಪ ಎ.ಕೆ. ಎಂ.ರಫೀ, ಎಸ್.ಎಂ.ರಮೇಶ್, ಗುರುರಾಜ್, ಡಾ.ಗಂಗಾಧರ, ಶಂಕರ್, ಡಾ.ನಾಗಪ್ಪ ಬಿ.ಈ., ಶರಣಪ್ಪ, ವೀರೇಶ್‌, ಡಾ.ದಸ್ತಗಿರಿ ಸಾಹೇಬು, ತೌಸಿಫ್, ಇನ್ನು ಮುಂತಾದವರು ಭಾಗವಹಿಸಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ