ವಿಜಯನಗರ (ಹೊಸಪೇಟೆ).15 ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕವಿತಾ ಎಸ್, ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ್, ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಅರಣ್ಯ ಇಲಾಖೆ ಉಪಸಂರಕ್ಷಾಣಾಧಿಕಾರಿ ಅನುಪಮ, ಉಪವಿಭಾಗಾಧಿಕಾರಿ ವಿವೇಕಾನಂದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ವೈ. ಎ ಕಾಳೆ, ರವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ನಜೀಮಾ ಭಾನು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವ ಸಂವಿಧಾನ ಪೀಠಿಕೆ ಪ್ರತಿಜ್ಞಾ ವಿಧಿ ಬೋಧಿಸಿದರು.