Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ 2025 ಕಾಲೇಜು ವಿದ್ಯಾರ್ಥಿಗಳಿಗೆ ಜರುಗಿದ ಚಿತ್ರಕಲಾ ಸ್ಪರ್ಧೆ



ಧಾರವಾಡ :  ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನಲೆಯಲ್ಲಿ   ನಗರದ ಆರ್ಟ ಗ್ಯಾಲರಿಯಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು.


  ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ ಅವರು ಮಾತನಾಡಿ, ಕಾಲೇಜು ಮಟ್ಟದ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಪರಿಚಯಿಸುವ ಹಿನ್ನಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾಗುತ್ತಿದೆ ಎಂದರು.


 ಮತದಾನವು ಪ್ರಜಾಪ್ರಭುತ್ವದ ಜೀವಾಳವಾಗಿದೆ. ಮತದಾನದ ಮಹತ್ವವನ್ನು ಸಾರುವ ಕಾರ್ಯಕ್ರಮಗಳನ್ನು ವಿವಿಧ ವಲಯಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ ಮತ್ತು ಛಾಯಾಚಿತ್ರ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪ್ರಜಾಪ್ರಭುತ್ವದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದರು.


  ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಬಸವರಾಜ ಕುರಿಯವರ ಅವರು ಅಧ್ಯಕ್ಷತೆ ವಹಿಸಿದ್ದರು. ಚಿತ್ರ ಕಲಾ ಸ್ಪರ್ಧೆಯ ಸಂಯೋಜಕಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಪ್ರೀಯದರ್ಶಿನಿ ಹಿರೇಮಠ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.


ಇಂದಿನ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಕಾಲೇಜುಗಳ ಸುಮಾರು 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ, ಮತದಾನದ ಪ್ರಾಮುಖ್ಯತೆಯ ಬಗ್ಗೆ ವಿವಿಧ ರೀತಿಯ ಚಿತ್ರಗಳನ್ನು ಬಿಡಿಸಿದರು. ನಿರ್ಣಾಯಕರಾಗಿ ಹಿರಿಯ  ಚಿತ್ರಕಲಾತಜ್ಞರಾದ ಡಾ. ಬಿ.ಮಾರುತಿ, ಪ್ರೊ. ಎಸ್.ಕೆ.ಪತ್ತಾರ ಹಾಗೂ ಎಫ್.ವ್ಹಿ.ಚಿಕ್ಕಮಠ ಅವರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ