LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Koppal

ಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮ

 


ಕೊಪ್ಪಳ ಸೆಪ್ಟೆಂಬರ್ 22,: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಕೊಪ್ಪಳ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಘಟಕ, ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಕೂಕನಪಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರದಂದು ಉಪಕೇಂದ್ರ ಗುಡದಳ್ಳಿ ಗ್ರಾಮ ಸರಕಾರಿ ಪ್ರೌಢ ಶಾಲೆಯಲ್ಲಿ “ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪ್ರಾ.ಆ.ಕೇಂದ್ರ ಕೂಕನಪಳ್ಳಿಯ ವೈದ್ಯಾಧಿಕಾರಿಗಳಾದ ಡಾ. ಕರಿಯಮ್ಮ ಮಾತನಾಡಿ, ಪ್ರತಿ ವರ್ಷ ಸೆಪ್ಟೆಂಬರ್ 19 ರಂದು “ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ” ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಈ ಕಾರ್ಯಕ್ರಮದ ಉದ್ದೇಶ ಹಾವು ಕಡಿತದಿಂದ ಉಂಟಾಗುವ ಮರಣವನ್ನು ನಿಯಂತ್ರಿಸುವ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವುದಾಗಿದೆ. ಭಾರತ ಹಳ್ಳಿಗಳ ದೇಶ ಶೇ.70 ಕ್ಕಿಂತಲೂ ಹೆಚ್ಚು ಜನರು ಕೃಷಿಯಲ್ಲಿ ಅವಲಂಬಿತರಾಗಿದ್ದಾರೆ. ಭಾರತದಲ್ಲಿ ಪ್ರಮುಖ 4 ವಿಷಕಾರಿ ಹಾವುಗಳಾದ ನಾಗರಹಾವು, ಕಟ್ಟಾವು, ಕೊಳಕುಮಂಡಲ ಹಾವು ಹಾಗೂ ಗರಗಸ ಮಂಡಲ ಹಾವು ಕಡಿತದಿಂದ ಸಾವುಗಳಲ್ಲಿ 90% ಅಧಿಕ ಸಾವುಗಳು ಕಾರಣವಾಗುತ್ತವೆ. ಹಾಗಾಗಿ ಈ 4 ಹಾವುಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ನಾಗರಹಾವು ಬಿಟ್ಟು ಉಳಿದ 03 ವಿಷಕಾರಿ ಹಾವುಗಳು ರಾತ್ರಿವೇಳೆ ಹೆಚ್ಚು ಚಟುವಟಿಕೆಯಿಂದಿರುತ್ತವೆ. ಹಾಗಾಗಿ ರಾತ್ರಿವೇಳೆ ಹೊರಗಡೆ ಹೋಗುವಾಗ ಟಾರ್ಚ್ ಬಳಸಬೇಕು. ಮನೆ ಅಂಗಳವನ್ನು ಇಲಿ ಹೆಗ್ಗಣಗಳಂತಹ ಹಾವುಗಳು ತಿನ್ನುವ ಜೀವಿಗಳಿಂದ ಮುಕ್ತವಾಗಿಸಬೇಕು. ಮನೆಯಂಗಳ ಅಥವಾ ಹೊಲಗದ್ದೆಗಳಲ್ಲಿ ಸಾಮಾನ್ಯವಾಗಿ ತಿರುಗಾಡುವ ಸ್ಥಳಗಳಲ್ಲಿ ಗಿಡಗಂಟಿಗಳನ್ನು ಕಡಿದು ಸ್ವಚ್ಚವಾಗಿಟ್ಟುಕೊಳ್ಳಬೇಕು. ಹಾವುಗಳಿರುವ ಸಾಧ್ಯತೆ ಹೆಚ್ಚಿರುವ ಸ್ಥಳಗಳಲ್ಲಿ ಕೆಲಸ ಮಾಡುವಾಗ ಶೂಗಳನ್ನು ಬಳಸಬೇಕು. ರಾತ್ರಿ ಮನೆಯ ಹೊರಗೆ ಹಾಗೂ ಹೊಲಗದ್ದೆಗಳಲ್ಲಿ ಮಲಗಬೇಕಾದಾಗ ನೆಲದಲ್ಲಿ ಮಲಗದೆ ಎತ್ತರ ಪ್ರದೇಶದ ಮಂಚ ಬಳಸುವುದು, ನೆಲದಲ್ಲಿ ಮಲಗಲೇಬೇಕೆಂದರೆ ಕಡ್ಡಾಯವಾಗಿ ಸೊಳ್ಳೆಪರದೆ ಬಳಸುವುದು ಹಾಗೂ ರೈತರು ಹೊಲದಲ್ಲಿ ದನ-ಕರಗಳಿಗೆ ಮೇವು ಹಾಗೂ ಹಸಿಹುಲ್ಲು ಕೀಳುವಾಗ ಕುಡುಗೋಲು ಬಳಸಬೇಕು. ಒಂದು ವೇಳೆ ಹಾವು ಕಚ್ಚಿದರೆ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ 40 ನಿಮಿಷದೊಳಗಾಗಿ ಹೋಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ಹಾವು ಕಡೆದ ವ್ಯಕ್ತಿಯನ್ನು ಸಮಾಧಾನ ಪಡಿಸಬೇಕು, ಗಾಬರಿ ಪಡಿಸಬಾರದು. ಹಾವಿನಿಂದ ನಿಧಾನವಾಗಿ ದೂರ ಸರಿಯಿರಿ. ರಕ್ತಬಂಧಕಪಟ್ಟಿ ಕಟ್ಟಬೇಡಿ. ಹಾವು ಕಡಿತಕ್ಕೊಳಗಾದ ವ್ಯಕ್ತಿಯನ್ನು ಎಡಭಾಗಕ್ಕೆ ಮಲಗಿಸಿ ಕಚ್ಚಿದ ಭಾಗವನ್ನು ಅಲುಗಾಡದಂತೆ ನೋಡಿಕೊಳ್ಳಿ. ಗಾಯವನ್ನು ಕತ್ತರಿಸಬೇಡಿ, ಏನನ್ನೂ ಹಚ್ಚಬೇಡಿ. ಹಾವು ಕಚ್ಚಿದ ವ್ಯಕ್ತಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಕೊಡಿಸಿ. ನಾಟಿ ಔಷಧ ಅಥವಾ ಅಸುರಕ್ಷಿತ ಚಿಕಿತ್ಸಾ ಪದ್ಧತಿಯನ್ನು ಅವಲಂಬಿಸಬೇಡಿ. ಒಟ್ಟಾರೆಯಾಗಿ ಪ್ರತಿಯೊಬ್ಬರೂ ತಮ್ಮ ತಮ್ಮ ಮನೆಯ ಸುತ್ತ-ಮುತ್ತಲಿನ ಪ್ರದೇಶ ಸ್ವಚ್ಛತೆಯಿಂದ ಇಟ್ಟುಕೊಂಡು ಇದರ ಬಗ್ಗೆ ಇತರರಿಗೂ ಮಾಹಿತಿ ನೀಡಿ, ಜಾಗೃತರಾಗಬೇಕೆಂದು ತಿಳಿಸಿದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಲ್.ವಿ ಸಜ್ಜನ್, ಮಾತನಾಡಿ, ಆಧುನಿಕ ಯುಗದಲ್ಲಿ ವಿಷಪೂರಿತ ಹಾವುಗಳಿಂದ ಮನುಕುಲಕ್ಕೆ ಆತಂಕವಿದೆ. ಮತ್ತೊಂದೆಡೆ ಹಾವುಗಳ ಸಂರಕ್ಷಣೆ ಮಾಡುವುದು, ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಸಾಂಕ್ರಾಮಿಕ ರೋಗ ಶಾಸ್ತçಜ್ಞರಾದ ಡಾ. ಮಾಧವಿ, ದತ್ತಾಂಶ ಸಂಯೋಜಕರಾದ ಸುವಾಸಿನಿ, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು, ಆರೋಗ್ಯ ಸಿಬ್ಬಂದಿಗಳು ಭಾಗವಹಿಸಿ ಯಶಸ್ವಿಗೊಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ