Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂತರಾಷ್ಟ್ರೀಯ ಯೋಗ ದಿನ 

ಸವದತ್ತಿ :  ಸವದತ್ತಿ ತಾಲೂಕಾ ಕಾನೂನು ಸೇವೆಗಳ ಸಮಿತಿ ಹಾಗೂ ನ್ಯಾಯವಾದಿಗಳ ಸಂಘ ಇವರುಗಳ ಸಹಯೋಗದಲ್ಲಿ ದಿನಾಂಕಃ 21-06-2025 ರಂದು ಮುಂಜಾನೆ 07.00 ಗಂಟೆಗೆ ನ್ಯಾಯಾಲಯದ ಆವರಣದಲ್ಲಿ ಅಂತರಾಷ್ಟ್ರೀಯ ಯೋಗ ದಿನವನ್ನು ಹವ್ಮಿುಕೊಳ್ಳಲಾಗಿತ್ತು.

ಹಿರಿಯ ಶ್ರೇಣಿ  ಸಿವಿಲ್‍ ನ್ಯಾಯಾಧೀಶರು ಹಾಗೂ ತಾಲೂಕಾ ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಶ್ರೀ. ಸಿದ್ದರಾಮ, ರವರು ಸಸಿಗೆ ನೀರೆರೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಪಾಟಿಸಿದರು. ನಂತರ ಮಾತನಾಡಿದ ಅವರು ಯೋಗದಲ್ಲಿ ಅನೇಕ ವಿಧಗಳಿವೆ, ಪ್ರತಿಯೊಬ್ಬರು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಯೋಗವನ್ನು ಅನುಸರಿಸುತ್ತಾರೆ ಮತ್ತು ಅದನ್ನು ವ್ಯಾಖ್ಯಾನಿಸುತ್ತಾರೆ. ಜೂನ್‍ 21 ರಂದು ಪ್ರತಿ ವರ್ಷ ಹವ್ಮಿುಕೊಳ್ಳಲಾಗುವ ಅಂತರಾಷ್ಟ್ರೀಯ ಯೋಗ ದಿನದಂದು ಯೋಗದ ಕುರಿತು ಆಸನಕ್ಕಿಂತ ಹೊರತಾದ ಅನುಸಂಧಾನ ನಮಗೆಲ್ಲ ಸಾಧ್ಯವಾದರೆ ಅದು ಯೋಗ ದಿನಾಚರಣೆಯ ಸಾರ್ಥಕತೆ ಹೌದು  ಎಂದು ಹೇಳಿದರು.

 

ಉಪನ್ಯಾಸ ಭಾಷಣ ಮಾಡಿದ ಯೋಗ ಗುರುಗಳಾದ ಶ್ರೀ. ಎಮ್.ಸಿ.ಮಲ್ಲೇಶನವರ ರವರು ಮಾತನಾಡಿ ಯೋಗವು ಅನೂಚಾನವಾಗಿ, ಸಣ್ಣ ಪ್ರಮಾಣದಲ್ಲಿಯೇ ಆದರೂ ನಿಯಮಿತವಾಗಿ ರೂಢಿಸಿಕೊಂಡು ಬಂದಿರುವ ಆಸನ ಪ್ರಾಣಾಯಾಮಗಳು ತಪಸ್ಸಿನಂತೆಯೇ ಸರಿ. ಅವಕ್ಕೆ ಬದುಕಿಗೊಂದು ಶ್ರುತಿ ಹಿಡಿದು ಲಯ ತಪ್ಪದಂತೆ ಮುನ್ನಡೆಸುವ ಶಕ್ತಿ ಇದೆ. ಒಂದೇ ಮಾತಿನಲ್ಲಿ ಹೕೆಳುವುದಾದರೆ ನಿಯಮಿತತೆ ಮತ್ತು ಸಂಯಮ ಇವೆರಡು ಯೋಗದ ಆದ್ಯ ತತ್ವಗಳು. ಯೋಗವೆಂದರೆ ಆಸನ-ಪ್ರಾಣಾಯಾಮಗಳಷ್ಟೆ ಅಲ್ಲದೆ, ಎಂಟು ಅಂಗಗಳಿರುವ ಯೋಗಶಾಸ್ತ್ರವಷ್ಟೆ ಅಲ್ಲದೇ ಅದು ಭಾರತವು ಸಾಕ್ಷಾತ್ಕರಿಸಿಕೊಂಡಿರುವ ಒಂದು ಜೀವನದೃಷ್ಟಿಯಾಗಿದೆ. ಯೋಗವೆನ್ನುವ ಪದವನ್ನು ನಾನಾ ಶಾಸ್ತ್ರಗಳು ಬಳಸಿಕೊಂಡಿವೆ ಎಂದು ಹೇಳಿದರು   ಅದರ ಜೊತೆಗೆ ನೆರದಿರುವ ಎಲ್ಲರಿಗೂ ಯೋಗಾಸನಗಳನ್ನು ಮಾಡಿಸಿದರು.

ಅಧ್ಯಕ್ಷತೆ ಭಾಷಣ ಮಾಡಿದ ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಶ್ರೀ. ಜೆ.ಬಿ. ಮುನವಳ್ಳಿ ರವರು ಮಾತನಾಡಿ ಯೋಗದ ಮಹತ್ವವನ್ನು ಪ್ರಪಂಚಕ್ಕೆ ಸಾರುವುದಕ್ಕಾಗಿ ಪ್ರತಿ ವರ್ಷ ಜೂನ್‌ 21 ರಂದು ಯೋಗ ದಿನಾಚರಣೆಯನ್ನು ಆಚರಿಸಲಾಗುವುದು. ಯೋಗ ಎನ್ನುವುದು ನಿನ್ನೆ, ಮೊನ್ನೆ ಹುಟ್ಟಿಕೊಂಡ ಸಾಧನೆಯಲ್ಲ. ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ ಎಲ್ಲರೂ ಯೋಗವನ್ನು ಮಾಡಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ  ಪ್ರಧಾನ ಸಿವಿಲ್‍ ನ್ಯಾಯಾಧೀಶರಾದ  ಸಿದ್ರಾಮ ರೆಡ್ಡಿ  ಹೆಚ್ಚುವರಿ ಸಿವಿಲ್‍ ನ್ಯಾಯಾಧೀಶರಾದ ಕೃಷ್ಣಪ್ಪ ಪಮ್ಮಾರ, ನ್ಯಾಯವಾದಿಗಳಾದ ಸಿ.ಬಿ.ದೊಡಗೌಡರ, ಪಿ.ಕೆ.ಗಡೇಕಾರ, ಸಿ.ಎನ್,ಜೈನರ, ಆರ್.ಎಮ್.ನಿಡೋನಿ, ಎಮ್.ಎ.ಅಂಗಡಿ, ಎಮ್.ಎಫ್.ಬಾಡಿಗೇರ ಇತತರು ಉಪಸ್ಥಿತದ್ದರು.

ನ್ಯಾಯವಾದಿಗಳ ಸಂಘದ ಕಾರ್ಯದರ್ಶಿಯಾದ ಎಸ್.ಎಸ್.ಕಾಳಪ್ಪನವರ ರವರು ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ