ಬೆಳಗಾವಿ. ರವಿವಾರದಂದು 12 ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಹಲಗಾ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರ ಹತ್ತಿರ ಇರುವ ಸುವರ್ಣ ಸೌಧದ ಆವರಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಹಿರಿಯ ಬಿಜೆಪಿ ರಾಷ್ಟ್ರೀಯ ಮುಖಂಡರಾದ ಪ್ರಹ್ಲಾದ ಜೋಶಿ, ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ ಪಾಟೀಲ , ಬೆಳಗಾವಿಯ ಮಹಾಪೌರರಾದ ಶ್ರೀಮತಿ ಪ್ರೀತಿ ಕಾಮಕರ, ಉಪಮಹಾಪೌರ ಹಣಮಂತ ಕೊಂಗಾಲಿ, ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಷನ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ, ಸೇರಿದಂತೆ ಪ್ರಮುಖ ಗಣ್ಯರು, ಮಕ್ಕಳು ಹಾಗೂ ಸಾರ್ವಜನಿಕ ಯೋಗಾಸಕ್ತ ಬಂಧುಗಳ ಜೊತೆ ಸೇರಿ ಅರ್ಥಪೂರ್ಣ 12 ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.