Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಪಾರದರ್ಶಕತೆಯಿಂದ ಆಗಬೇಕು : ಉಪೇಂದ್ರ

ಬೆಂಗಳೂರು: ಕಳೆದ ಒಂದು ವಾರದಿಂದ ಸಿನಿಮಾರಂಗದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಕೊಲೆ ಪ್ರಕರಣ ಬಾರಿ ಸುದ್ಧಿಯಲ್ಲಿದೆ. ಸದ್ಯ ದರ್ಶನ್ ಪ್ರಕರಣದಿಂದ ಚಿತ್ರರಂಗಕ್ಕೆ ಕಪ್ಪು ಚುಕ್ಕೆಯಾಗಿದ್ದು, ಇದೀಗ ನಟ ಮತ್ತು ನಿರ್ದೇಶಕ ಉಪೇಂದ್ರ ಅವರು ದರ್ಶನ್ ಪ್ರಕರಣದ ಬಗ್ಗೆ ಮೌನ ಮುರಿದಿದ್ದಾರೆ‌. ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪ್ರಕರಣದ ಬಗ್ಗೆ ತಮ್ಮ ಅಭಿಪ್ರಾಯವನ್ನ ಹಂಚಿಕೊಂಡಿದ್ದಾರೆ.

ತಮ್ಮ ಎಕ್ಸ್​ ಖಾತೆಯಲ್ಲಿ, "ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್​ನ ವಿಚಾರಣೆಯಲ್ಲಿ ನಿಷ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟೀವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ,
ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ".


"ಏಕೆಂದರೆ ಯಾವುದೇ ಕೇಸ್ ಆದರೂ ಆ ಕೇಸ್​ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೊಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು" (ಕಾನೂನು ಸುಧಾರಣೆಗಳು Criminal Justice Reforms)


"ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಪ್ರಕರಣ ಆಗಿದ್ದರೆ ಆ ಪ್ರಕರಣ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೊಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. ಸಾಮಾನ್ಯ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು,ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ.


ಆಗ ರೇಣುಕಾಸ್ವಾಮಿ ಕುಟುಂಬಕ್ಕೆ, ಜನರಿಗೆ, ಟೀವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೆೇ ಪೊಲೀಸ್ ಮತ್ತು ಟೀವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ ಮತ್ತು ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ" ಎಂದು ಉಪೇಂದ್ರ ತಮ್ಮ ಅಭಿಪ್ರಾಯವನ್ನ ವ್ಯಕ್ತಪಡಿಸಿದ್ದಾರೆ.


ಇನ್ನು ದರ್ಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ, ಜಗ್ಗೇಶ್, ಆ ದಿನಗಳು ಚೇತನ್ ಸೇರಿಂದ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದಿದ್ದರು‌. ಅದೇ ರೀತಿ ಕಿಚ್ವ ಸುದೀಪ್ ಕೂಡ ರೇಣುಕಾಸ್ವಾಮಿ ಕೊಲೆ ಬಗ್ಗೆ ಮಾತನಾಡಿದ್ದು, ರೇಣುಕಾಸ್ವಾಮಿ ಕೊಲೆಗೆ ನ್ಯಾಯಸಿಗಬೇಕು. ಹುಟ್ಟುವ ಮಗುವಿಗೆ ನ್ಯಾಯಸಿಗಬೇಕು ಅಂತಾ ಹೇಳಿದ್ದಾರೆ. ಇದೀಗ ಉಪೇಂದ್ರ ಕೂಡ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ